CSK vs DC: ಪಂದ್ಯದಲ್ಲಿ ನಿಮ್ಮ ಡ್ರೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಇಂದು ( ಮೇ 20 ) ಎರಡು ಪಂದ್ಯಗಳು ಜರುಗಲಿದ್ದು, ಈ ಪೈಕಿ ಮಧ್ಯಾಹ್ನ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ಕುತೂಹಲ ಕೆರಳಿಸಿದೆ.
ಹೌದು, ಈ ಪಂದ್ಯದಲ್ಲಿ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಪ್ರವೇಶ ಖಚಿತವಾಗಲಿದ್ದು, ಈ ಕಾರಣಕ್ಕಾಗಿ ಈ ಪಂದ್ಯ ಹೆಚ್ಚಿನ ಕುತೂಹಲವನ್ನು ಮೂಡಿಸಿದೆ. ಇನ್ನು ಈ ಪಂದ್ಯ ಟೂರ್ನಿಯ 67ನೇ ಪಂದ್ಯವಾಗಿದ್ದು, ಮಧ್ಯಾಹ್ನ 3.30ಕ್ಕೆ ಆರಂಭಗೊಳ್ಳಲಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಹೀಗೆ 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಗೆದ್ದು 17 ಅಂಕಗಳನ್ನು ಹೊಂದಿದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಒಂದುವೇಳೆ ಈ ಪಂದ್ಯದಲ್ಲೇನಾದರೂ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಪ್ರವೇಶ ಉಳಿದ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಲಿದೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಪಂದ್ಯವನ್ನು ಗೆದ್ದರೆ ತನ್ನ ಜತೆಗೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನೂ ಸಹ ಟೂರ್ನಿಯಿಂದ ಹೊರಗೆ ಕರೆದುಕೊಂಡು ಹೋಗಲಿದೆ.
ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 213 ರನ್ ಬಾರಿಸಿ 15 ರನ್‌ಗಳ ಗೆಲುವು ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಆಸೆಯನ್ನು ಹೊತ್ತಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ನಿರಾಸೆಯುಂಟುಮಾಡಿತ್ತು. ಇನ್ನು ತನ್ನ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿರುವ ಕಾರಣ ಸದ್ಯ ಇತ್ತಂಡಗಳ ನಡುವಿನ ಈ ಮುಖಾಮುಖಿಯ ಕುರಿತು ನಿರೀಕ್ಷೆ ಹೆಚ್ಚಿಸಿದೆ.
ಹೀಗೆ ಭಾರೀ ಕುತೂಹಲ ಉಂಟು ಮಾಡಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್ ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದಾಗಿದೆ.
ಡ್ರೀಮ್ ಟೀಮ್ 1:
ವಿಕೆಟ್ ಕೀಪರ್ - ಡೆವೊನ್ ಕಾನ್ವೇ, ಫಿಲಿಪ್ ಸಾಲ್ಟ್ (ಉಪನಾಯಕ)
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಶಿವಂ ದುಬೆ, ರುತುರಾಜ್ ಗಾಯಕ್ವಾಡ್ (ನಾಯಕ)
ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ, ಮಿಚೆಲ್ ಮಾರ್ಷ್, ಅಕ್ಷರ್ ಪಟೇಲ್, ಮೊಯಿನ್ ಅಲಿ
ಬೌಲರ್‌ಗಳು- ತುಷಾರ್ ದೇಶಪಾಂಡೆ, ಮಹೇಶ್ ಪತಿರಣ
ಡ್ರೀಮ್ ಟೀಮ್ 2:
ಕೀಪರ್ - ಡೆವೊನ್ ಕಾನ್ವೇ, ಫಿಲಿಪ್ ಸಾಲ್ಟ್ (ನಾಯಕ)
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಶಿವಂ ದುಬೆ, ರುತುರಾಜ್ ಗಾಯಕ್ವಾಡ್
ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ (ಉಪನಾಯಕ), ಮಿಚೆಲ್ ಮಾರ್ಷ್, ಅಕ್ಷರ್ ಪಟೇಲ್
ಬೌಲರ್‌ಗಳು - ತುಷಾರ್ ದೇಶಪಾಂಡೆ, ಮಹೇಶ್ ಪತಿರಾನ, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications