GT vs DC: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 2 ) ಟೂರ್ನಿಯ 44ನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಬಲಿಷ್ಠರ ಹಾಗೂ ಕಳಪೆ ತಂಡಗಳ ನಡುವೆ ನಡೆಯಲಿರುವ ಹಣಾಹಣಿ ಎಂದೇ ಹೇಳಬಹುದಾಗಿದೆ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಸ್ಥಾನದಲ್ಲಿದೆ.
ಎರಡೂ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಾಗಿದ್ದು ಮೊದಲ ಬಾರಿ ಇತ್ತಂಡಗಳು ಏಪ್ರಿಲ್ 4ರಂದು ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯ ಏಳನೇ ಪಂದ್ಯದಲ್ಲಿ ಸೆಣಸಾಡಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 163 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್‌ಗಳನ್ನು ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.
ಹೀಗೆ ತವರಿನಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ಸೋತು ಮುಖಭಂಗಕ್ಕೊಳಗಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದ್ದು, ಯಾವ ತಂಡ ಜಯ ಸಾಧಿಸಬಹುದು ಎಂಬ ಲೆಕ್ಕಾಚಾರಗಳು ಜೋರಾಗಿವೆ. ಅತ್ತ ಫ್ಯಾಂಟಸಿ ಕ್ರಿಕೆಟ್ ಪ್ರೇಮಿಗಳು ಪಂದ್ಯಕ್ಕಾಗಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಊಹಿಸಿ ಆರಿಸಿ ತಂಡಗಳನ್ನು ರಚಿಸಿಕೊಳ್ಳುತ್ತಿದ್ದು, ಡ್ರೀಮ್ ಟೀಮ್ ಮಾಡುತ್ತಿದ್ದಾರೆ.
ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ತಂಡಗಳನ್ನು ಆರಿಸಿದರೆ ಉತ್ತಮ ಅಂಕಗಳನ್ನು ಗಳಿಸಿ ಫ್ಯಾಂಟಸಿ ಗೇಮ್ ಗೆಲ್ಲಬಹುದಾಗಿದೆ.
ಡ್ರೀಮ್ ಟೀಮ್ 1: ಕೀಪರ್ - ವೃದ್ಧಿಮಾನ್ ಸಹಾ, ಫಿಲಿಪ್ ಸಾಲ್ಟ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಡೇವಿಡ್ ಮಿಲ್ಲರ್, ಶುಭಮನ್ ಗಿಲ್ (ಉಪನಾಯಕ)
ಆಲ್ ರೌಂಡರ್‌ಗಳು - ಮಿಚೆಲ್ ಮಾರ್ಷ್ (ನಾಯಕ), ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್ ಖಾನ್, ಅನ್ರಿಚ್ ನಾರ್ಕಿಯಾ
ಡ್ರೀಮ್ ಟೀಮ್ 2: ಕೀಪರ್ - ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಡೇವಿಡ್ ಮಿಲ್ಲರ್, ಶುಭಮನ್ ಗಿಲ್ (ನಾಯಕ), ಮನೀಶ್ ಪಾಂಡೆ
ಆಲ್ ರೌಂಡರ್‌ಗಳು - ಮಿಚೆಲ್ ಮಾರ್ಷ್, ಅಕ್ಷರ್ ಪಟೇಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್ ಖಾನ್, ಅನ್ರಿಚ್ ನಾರ್ಕಿಯಾ
ಸಂಭಾವ್ಯ ಆಡುವ ಬಳಗಗಳು:
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್, ಶುಭಮನ್ ಗಿಲ್
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಪ್ರಿಯಮ್ ಗಾರ್ಗ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಸರ್ಫರಾಜ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications