Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಮಂಗಳವಾರ, ಏಪ್ರಿಲ್ 4ರಂದು ದೆಹಲಿಯಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ನ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ಹಾರ್ದಿಕ್ ಪಾಂಡ್ಯ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2023: Delhi Capitals vs Gujarat Titans Match Toss Report, Playing 11 And Live Score Details


ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳ ಹೀನಾಯ ಸೋಲಿನ ಮೂಲಕ 2023ರ ಐಪಿಎಲ್ ಅಭಿಯಾನ ಆರಂಭಿಸಿತು. ಹೀಗಾಗಿ ಇಂದಿನ ಪಂದ್ಯದಲ್ಲಿ ತನ್ನ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಆತ್ಮವಿಶ್ವಾಸದಲ್ಲಿದ್ದು, ತನ್ನ ಗೆಲುವಿನ ನಾಗಾಲೋಟ ಮುಂದುವರೆಸಲು ಎದುರು ನೋಡುತ್ತಿದೆ. ಸೋತ ಮತ್ತು ಗೆದ್ದ ತಂಡಗಳ ನಡುವಿನ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ರಿಲೀ ರುಸ್ಸೌ, ಅಭಿ‍ಷೇಕ್ ಪೊರೆಲ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಚೇತನ್ ಸಕಾರಿಯಾ.

ಗುಜರಾತ್ ಟೈಟನ್ಸ್ ತಂಡ: ಶುಭ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ಜೋಶ್ವಾ ಲಿಟಲ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್.

Story first published: Tuesday, April 4, 2023, 19:06 [IST]
Other articles published on Apr 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+