For Quick Alerts
ALLOW NOTIFICATIONS  
For Daily Alerts
 

IPL 2023, GT vs DC: ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Delhi Capitals vs Gujarat Titans toss report, playing 11 and live score

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 44ನೇ ಪಂದ್ಯ ಇಂದು ( ಮೇ 2 ) ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.

ಗುಜರಾತ್ ಟೈಟನ್ಸ್ ಯಾವುದೇ ಬದಲಾವಣೆ ಮಾಡಿಕೊಳ್ಳದೇ ಕಣಕ್ಕಿಳಿದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಿಚ್ ಮಾರ್ಷ್ ಅನಾರೋಗ್ಯಕ್ಕೊಳಗಾಗಿದ್ದು, ಅವರ ಬದಲಾಗಿ ರಿಲೋ ರೊಸ್ಸೊ ಕಣಕ್ಕಿಳಿದಿದ್ದಾರೆ. ಗಾಯಕ್ಕೊಳಗಾಗಿದ್ದ ಕಲೀಲ್ ಅಹ್ಮದ್ ಸಹ ಚೇತರಿಸಿಕೊಂಡಿದ್ದು ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದಾರೆ.

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಬಲಿಷ್ಠರ ಹಾಗೂ ಕಳಪೆ ತಂಡಗಳ ನಡುವೆ ನಡೆಯಲಿರುವ ಹಣಾಹಣಿ ಎಂದೇ ಹೇಳಬಹುದಾಗಿದೆ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಸ್ಥಾನದಲ್ಲಿದೆ.

ಎರಡೂ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಾಗಿದ್ದು ಮೊದಲ ಬಾರಿ ಇತ್ತಂಡಗಳು ಏಪ್ರಿಲ್ 4ರಂದು ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯ ಏಳನೇ ಪಂದ್ಯದಲ್ಲಿ ಸೆಣಸಾಡಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 163 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್‌ಗಳನ್ನು ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಪಂದ್ಯದ ಆಡುವ ಬಳಗಗಳು:

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ರಿಲೀ ರೊಸೊವ್, ಪ್ರಿಯಮ್ ಗಾರ್ಗ್, ಅಕ್ಸರ್ ಪಟೇಲ್, ರಿಪಾಲ್ ಪಟೇಲ್, ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ

ಗುಜರಾತ್ ಟೈಟಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:

1
57099

Story first published: Tuesday, May 2, 2023, 19:19 [IST]
Other articles published on May 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+