IPL 2023, DC vs KKR: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ: ಆಡುವ ಬಳಗ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುರುವಾರ ಎರಡನೇ ಪಂದ್ಯಗಳು ನಡೆಯುತ್ತಿದ್ದು ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಒಂದು ಗಂಟೆ ತಡವಾಗಿ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಈವರೆಗೆ ಐದು ಪಂದ್ಯಗಳನ್ನು ಆಡಿರುವ ಡೆಲ್ಲಿ ಕ್ಯಾಪಿಟಲ್ಸ ತಂಡ ಐದರಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲ ಗೆಲುವು ಸಾಧಿಸಲು ಡೇವಿಡ್ ವಾರ್ನರ್ ಪಡೆ ಎದುರು ನೋಡುತ್ತಿದೆ. ತಂಡದ ಪ್ರಮುಖ ಆಟಗಾರರು ಫಾರ್ಮ್ ಕಳೆದುಕೊಂಡಿದ್ದು ಫಾರ್ಮ್‌ಗೆ ಮರಳಿದರೆ ಮಾತ್ರವೇ ಗೆಲುವು ಸಾಧ್ಯ.

ಇತ್ತ ಕೆಕೆಆರ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ಮೂರು ಸೋಲು ಅನುಭವಿಸಿದ್ದರೆ ಎರಡು ಗೆಲುವು ಸಾಧಿಸಿದೆ. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಕೆಕೆಆರ್ ತಮಡ ಸೋಲು ಅನುಭವಿಸಿರುವುದು ತಂಡವನ್ನು ಒತ್ತಡಕ್ಕೆ ಸಿಲುಕಿಸಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸಲಿದೆ.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್
ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications