
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 13 ) ಎರಡು ಪಂದ್ಯಗಳು ಆಯೋಜನೆಗೊಂಡಿವೆ.
ಮಧ್ಯಾಹ್ನ ಆರಂಭಗೊಂಡಿರುವ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಂಜೆ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಲೀಗ್ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೈಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ. ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಇನ್ನು ಈ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿಂತ ಪಂಜಾಬ್ ಕಿಂಗ್ಸ್ ತಂಡಕ್ಕೆ ಅತಿ ಮುಖ್ಯದ್ದಾಗಿದೆ ಎನ್ನಬಹುದು. ಹೌದು, ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ಟೂರ್ನಿಯಲ್ಲಿ ಏಳು ಪಂದ್ಯಗಳನ್ನು ಸೋತು ಪ್ಲೇಆಫ್ ಪ್ರವೇಶಿಸಬಹುದಾದ ಅವಕಾಶವನ್ನು ಬಹುತೇಕ ಕಳೆದುಕೊಂಡಿದ್ದು, ಇನ್ನೂ ಪ್ಲೇಆಫ್ ರೇಸಿನಲ್ಲಿರುವ ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಗೆಲ್ಲಲೇಬೇಕಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದು ಕೇವಲ 4 ಪಂದ್ಯಗಳಲ್ಲಿ ಗೆದ್ದು ಉಳಿದ 7 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಹೀಗೆ ಪಂಜಾಬ್ ಕಿಂಗ್ಸ್ ತಂಡ ಗೆದ್ದು ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಹೆಚ್ಚಿಸಿಕೊಳ್ಳುತ್ತಾ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವ ಮೂಲಕ ಪ್ಲೇಆಫ್ ಪ್ರವೇಶಿಸಬೇಕೆನ್ನುವ ಆಸೆಯನ್ನು ಹೊತ್ತಿರುವ ಪಂಜಾಬ್ ಕಿಂಗ್ಸ್ ತಂಡಕ್ಕೆ ಕಂಟಕವಾಗುತ್ತಾ ಎಂಬ ಕುತೂಹಲ ಹೆಚ್ಚಾಗಿ ಚರ್ಚೆಗಳು ಜೋರಾಗಿವೆ.
ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಅಂತಹ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ಡ್ರೀಮ್ ಟೀಮ್ ರಚಿಸಿದರೆ ಹೆಚ್ಚು ಅಂಕಗಳನ್ನು ಗಳಿಸುವ ಸಾಧ್ಯತೆಗಳಿವೆ.
ಡ್ರೀಮ್ ಟೀಮ್ 1 : ವಿಕೆಟ್ ಕೀಪರ್‌ಗಳು - ಫಿಲಿಪ್ ಸಾಲ್ಟ್, ಜಿತೇಶ್ ಶರ್ಮಾ, ಪ್ರಭುಸಿಮ್ರಾನ್ ಸಿಂಗ್
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್, ಡೇವಿಡ್ ವಾರ್ನರ್, ರಿಲೆ ರೊಸೊವ್
ಆಲ್ ರೌಂಡರ್‌ಗಳು - ಅಕ್ಷರ್ ಪಟೇಲ್ (ಉಪನಾಯಕ), ಮಿಚೆಲ್ ಮಾರ್ಷ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್
ಬೌಲರ್ - ಅರ್ಷದೀಪ್ ಸಿಂಗ್
ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ಫಿಲಿಪ್ ಸಾಲ್ಟ್, ಜಿತೇಶ್ ಶರ್ಮಾ
ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್ (ನಾಯಕ), ಡೇವಿಡ್ ವಾರ್ನರ್, ರಿಲೀ ರೊಸೊವ್
ಆಲ್ ರೌಂಡರ್‌ಗಳು - ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಲಿಯಾಮ್ ಲಿವಿಂಗ್‌ಸ್ಟೋನ್ (ಉಪನಾಯಕ), ಸ್ಯಾಮ್ ಕರ್ರನ್
ಬೌಲರ್‌ಗಳು - ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್
ಸಂಭಾವ್ಯ ಆಡುವ ಬಳಗಗಳು
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೋಸ್ಸೌ, ಅಮನ್ ಖಾನ್, ರಿಪಾಲ್ ಪಟೇಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮನೀಶ್ ಪಾಂಡೆ
ಪಂಜಾಬ್ ಕಿಂಗ್ಸ್: ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ನಾಥನ್ ಎಲ್ಲಿಸ್