
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 58 ಹಾಗೂ 59ನೇ ಪಂದ್ಯಗಳು ಇಂದು ( ಮೇ 13 ) ನಡೆಯುತ್ತಿವೆ. ಮಧ್ಯಾಹ್ನ ನಡೆದ 58ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ಈಗ ಆರಂಭಗೊಂಡಿರುವ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಫೀಲ್ಡಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ತಂಡ ಪಂಜಾಬ್ ಕಿಂಗ್ಸ್ ಅನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಅಮನ್ ಹಕೀಮ್ ಖಾನ್, ಅಕ್ಸರ್ ಪಟೇಲ್, ಪ್ರವೀಣ್ ದುಬೆ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಸಿಕಂದರ್ ರಜಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್