Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs DC: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್; ಕೇದಾರ್ ಜಾಧವ್ ಈಸ್ ಬ್ಯಾಕ್!

IPL 2023: Delhi Capitals vs Royal Challengers Bangalore toss report, playing 11 and live score

ಇಂದು ( ಮೇ 6 ) ಪ್ರಸ್ತುತ ಜರುಗುತ್ತಲಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು ಎರಡು ಪಂದ್ಯಗಳು ಆಯೋಜನೆಗೊಂಡಿದ್ದವು. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಗಳಿಸಿದರೆ, ಇದೀಗ ಆರಂಭವಾಗಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ 50ನೇ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗುತ್ತಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದಾರೆ. ಕಳೆದ ಬಾರಿಯ ಪಂದ್ಯದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿ ಗೆದ್ದಿದ್ದ ಆರ್‌ಸಿಬಿ ಈ ಪಂದ್ಯದಲ್ಲಿಯೂ ಅದೇ ಮಾದರಿಯನ್ನು ಅನುಸರಿಸಿದಂತಿದೆ.

ಇನ್ನು ಗಾಯಗೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಹೊರಬಿದ್ದಿದ್ದ ಡೇವಿಡ್ ವಿಲ್ಲಿ ಬದಲಾಗಿ ತಂಡ ಸೇರಿದ್ದ ಕೇದಾರ್ ಜಾಧವ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿದ್ದು, ಇದೀಗ ಎಲ್ಲರ ಕಣ್ಣು ಜಾಧವ್ ಮೇಲಿದೆ.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಕೇದಾರ್ ಜಾಧವ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ:

1
57105

Story first published: Saturday, May 6, 2023, 19:16 [IST]
Other articles published on May 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+