DC vs SRH: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಇಂದು ( ಏಪ್ರಿಲ್ 29 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡು ಪಂದ್ಯಗಳು ಜರುಗಲಿವೆ.
ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 40ನೇ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ರಿಂದ ನಡೆಯಲಿದೆ.
ಇನ್ನು ಈ ಪಂದ್ಯ ಇತ್ತಂಡಗಳ ಎರಡನೇ ಮುಖಾಮುಖಿ ಪಂದ್ಯವಾಗಿದ್ದು, ಏಪ್ರಿಲ್ 24ರಂದು ನಡೆದಿದ್ದ ಪಂದ್ಯದಲ್ಲಿ ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ರನ್‌ಗಳ ಗೆಲುವನ್ನು ಕಂಡಿತ್ತು.
ಹೀಗೆ ಮೊದಲ ಪಂದ್ಯದಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಗೆದ್ದು ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.
ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ತಲಾ 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಲಾ 2 ಪಂದ್ಯಗಳಲ್ಲಿ ಗೆದ್ದಿವೆ ಹಾಗೂ ಉಳಿದ 5 ಪಂದ್ಯಗಳನ್ನು ಎರಡೂ ತಂಡಗಳು ಸೋತಿವೆ. ಹೀಗೆ ಈ ಎರಡೂ ತಂಡಗಳೂ ಸಹ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೆಚ್ಚು ಪಂದ್ಯಗಳನ್ನು ಸೋತು ಕಳಪೆ ತಂಡಗಳು ಎನಿಸಿಕೊಂಡಿವೆ.
ಹೀಗೆ ಕಳಪೆ ತಂಡಗಳ ಮುಖಾಮುಖಿ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಊಹೆಗಳು ಜರುಗುತ್ತಿದ್ದು, ಫ್ಯಾಂಟಸಿ ಕ್ರಿಕೆಟ್ ಪ್ರೇಮಿಗಳು ಯಾವ ಆಟಗಾರರು ಚೆನ್ನಾಗಿ ಆಡಬಹುದು ಎಂಬ ಊಹೆಯ ಮೇರೆಗೆ ಡ್ರೀಮ್ ತಂಡಗಳನ್ನು ರಚಿಸುತ್ತಿದ್ದಾರೆ.
ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿಕೊಂಡು ತಂಡಗಳನ್ನು ರಚಿಸಿದರೆ ಹೆಚ್ಚು ಅಂಕಗಳನ್ನು ಪಡೆಯಬಹುದಗಿದೆ.
ಡ್ರೀಮ್ ಟೀಮ್ 1: ಕೀಪರ್ - ಹೆನ್ರಿಕ್ ಕ್ಲಾಸೆನ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್ (ಉಪನಾಯಕ), ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್
ಆಲ್ ರೌಂಡರ್‌ಗಳು - ಅಕ್ಷರ್ ಪಟೇಲ್ (ನಾಯಕ), ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್
ಬೌಲರ್‌ಗಳು - ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಕಿಯಾ
ಡ್ರೀಮ್ ಟೀಮ್ 2: ಕೀಪರ್ - ಹೆನ್ರಿಕ್ ಕ್ಲಾಸೆನ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್ (ನಾಯಕ), ಮನೀಶಮಾರ್ಕ್ರಾಮ್
ಆಲ್ ರೌಂಡರ್‌ಗಳು - ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್ (ಉಪನಾಯಕ), ಐಡೆನ್ ಮಾರ್ಕ್ರಾಮ್
ಬೌಲರ್‌ಗಳು - ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಕಿಯಾ
ಸಂಭಾವ್ಯ ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ರಾಹುಲ್ ತ್ರಿಪಾಠಿ
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ),ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಮನ್ ಖಾನ್, ರಿಪಾಲ್ ಪಟೇಲ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications