
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ಮಧ್ಯೆ ಮತ್ತೊಮ್ಮೆ ಸೆಂಎಸಾಟ ನಡೆಯುತ್ತಿದೆ. ವಾರದ ಅಂತರದಲ್ಲಿ ಈ ಎರಡು ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ.
ಎರಡು ತಂಡಗಳು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ನೀರಸ ಪ್ರದರ್ಶನ ನಿಡಿದ್ದು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದ ಸತತ ಐದು ಪಂದ್ಯಗಳನ್ನು ಸೋಲು ಅನುಭವಿಸಿದ ಬಳಿಕ ನಂತರ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವನ್ನು ಅದರದ್ದೇ ತವರಿನಲ್ಲಿ ಸೋಲಿಸಿದ ಪರಿಣಾಮವಾಗಿ ಈಗ ತನ್ನ ತವರಿನಲ್ಲಿಯೂ ಗೆದ್ದು ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಆಡಿರುವ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯ ಮಾತ್ರ. ಹೀಗಾಗಿ ಎಸ್‌ಆರ್‌ಹೆಚ್ ತಂಡದ ಅಂಕಪಟ್ಟಿಯಲ್ಲಿ ಕೇವಲ 4 ಅಂಕಗಳು ಮಾತ್ರವೇ ಇದೆ. ಇದೀಗ ತಂಡದ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಗಾಯದ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾದಂತಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್
ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್