IPL 2023: 5 ವಿಕೆಟ್ ಪಡೆದು ಮುಂಬೈ ಗೆಲ್ಲಿಸಿದ ಆಕಾಶ್ ಮಧ್ವಲ್ ತಂಡ ಸೇರಿದ್ದು ಸೂರ್ಯಕುಮಾರ್ ಬದಲಿ ಆಟಗಾರನಾಗಿ!

ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ತಲುಪಿದೆ. ಇದೇ ಭಾನುವಾರ ( ಮೇ 28 ) ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ.
ಈಗಾಗಲೇ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶವನ್ನು ಪಡೆದುಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಜತೆ ಫೈನಲ್ ಆಡಲು ಇದೀಗ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಪೈಪೋಟಿ ಎದುರಾಗಿದೆ.
ಹೌದು, ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ಮುಂಬೈ ಇಂಡಿಯನ್ಸ್ ಇಂದು ( ಮೇ 26 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದ್ದು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋತ ಗುಜರಾತ್ ಟೈಟನ್ಸ್ ತಂಡ ಸೆಣಸಾಡಲಿದೆ.
ಇನ್ನು ಮುಂಬೈ ಇಂಡಿಯನ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ 81 ರನ್‌ಗಳ ಜಯವನ್ನು ಸಾಧಿಸಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ 3.3 ಓವರ್‌ಗಳಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಪಡೆದ ಆಕಾಶ್ ಮಧ್ವಲ್ ಭರ್ಜರಿ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಕಾರಣರಾದರು.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಲೇಆಫ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ ಆಕಾಶ್ ಮಧ್ವಲ್ 3.3 ಓವರ್‌ಗಳಲ್ಲಿ ಕೇವಲ 5 ರನ್ ನೀಡಿದ ಆಕಾಶ್ ಮಧ್ವಲ್ 5 ವಿಕೆಟ್‌ಗಳನ್ನು ಪಡೆದರು. ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪೋಟಕ ಆಟಗಾರರಾದ ಪ್ರೇರಕ್ ಮಂಕಡ್, ನಿಕೋಲಸ್ ಪೂರನ್ ಹಾಗೂ ಆಯುಷ್ ಬದೋನಿ ಅವರ ವಿಕೆಟ್‌ಗಳನ್ನು ಪಡೆದ ಆಕಾಶ್ ಮಧ್ವಲ್ ರವಿ ಬಿಷ್ಣೋಯಿ ಹಾಗೂ ಮೊಹ್ಸಿನ್ ಖಾನ್ ಅವರ ವಿಕೆಟ್‌ಗಳನ್ನೂ ಸಹ ಪಡೆದರು.
ಹೀಗೆ ಸದ್ಯ ಮುಂಬೈ ಇಂಡಿಯನ್ಸ್ ತಂಡದ ಪರ ಮಿಂಚುತ್ತಿರುವ ಆಕಾಶ್ ಮಧ್ವಲ್ ಮೊದಲಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಸೇರಿದ್ದು 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ಬೌಲರ್ ಆಗಿ. ಆದರೆ ತಂಡದಲ್ಲಿ ಸ್ಥಾನ ದೊರಕದ ಆಕಾಶ್ ಮಧ್ವಲ್‌ಗೆ ಐಪಿಎಲ್ ಪದಾರ್ಪಣೆ ಮಾಡುವ ಅವಕಾಶ ಕೊಟ್ಟದ್ದು ಮುಂಬೈ ಇಂಡಿಯನ್ಸ್ ತಂಡ.
ಫಾಸ್ಟ್ ಬೌಲರ್ ಆಗಿರುವ ಆಕಾಶ್ ಮಧ್ವಲ್ ಅವರನ್ನು 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮಧ್ಯದಲ್ಲಿ ಮುಂಗೈ ಗಾಯಕ್ಕೆ ಒಳಗಾದ ಸೂರ್ಯಕುಮಾರ್ ಯಾದವ್ ಬದಲಿ ಆಟಗಾರನಾಗಿ ತಂಡಕ್ಕೆ ಕರೆ ತರಲಾಗಿತ್ತು. ಅಂದು ಸ್ಪೋಟಕ ಬ್ಯಾಟರ್ ಬದಲಾಗಿ 20 ಲಕ್ಷ ನೀಡಿ ಈತನನ್ನು ಖರೀದಿಸಿದ್ದಕ್ಕೆ ಹೀನಾಯವಾಗಿ ಟ್ರೋಲ್ ಆಗಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದೀಗ ಅಂದು ಮಾಡಿದ ಕೆಲಸಕ್ಕೆ ಸಾರ್ಥಕತೆ ಸಿಕ್ಕಂತಾಗಿದೆ. ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ಪರ ಮಿಂಚುತ್ತಿರುವ ಈ ವೇಗಿ ಉಳಿದ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಹಾಗೂ ಫೈನಲ್ ಪಂದ್ಯದಲ್ಲಿ ತಂಡಕ್ಕೆ ಆಸರೆಯಾದರೆ ಮುಂದಿನ ದಿನಗಳಲ್ಲಿ ಮುಂಬೈ ಇಂಡಿಯನ್ಸ್‌ನ ಖಾಯಂ ಸದಸ್ಯನಾಗುವುದಂತೂ ಪಕ್ಕಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications