ಇಂಡಿಯನ್ ಪ್ರೀಮಿಯರ್ ಲೀಗ್‌ನ ಪ್ಲೇಆಫ್ ಪಂದ್ಯಗಳು ನಡೆಯುತ್ತಿದೆ. ಇಂದು ಎಲಿಮಿನೇಟರ್ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಮಡಿಯನ್ಸ್ ತಮಡಗಳು ಮಯಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಬಳಿಕ ಮಧ್ಯದಲ್ಲಿ ಗೆಲುವಿನ ಲಯ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಸರಿಯಾದ ಸಮಯದಲ್ಲಿ ಲಯ ಕಂಡುಕೊಂಡ ಕಾರಣ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡರುವ ಕೃನಾಲ್ ಪಾಂಡ್ಯ ನೇತೃತ್ವದ ತಂಡ ಮೊದಲ ಬಾರಿಗೆ ಫೈನಲ್ ಪ್ರವೇಶದ ಕನಸು ಕಾಣುತ್ತಿದೆ. ಆದರೆ ಅದು ಸಾಧ್ಯವಾಗಬೇಕಾದರೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಎಲ್‌ಎಸ್‌ಜಿ ತಂಡ ಗೆಲುವು ಸಾಧಿಸಬೇಕಿದೆ.

Live ಸ್ಕೋರ್ ಹೀಗಿದೆ
ಇನ್ನು ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯ ಆರಂಭದಲ್ಲಿ ಸಾಕಷ್ಟು ಹಿನ್ನಡೆ ಕಂಡಿದ್ದರೂ ಕೊನೆಯ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣದಿಂದಾಗಿ ಪ್ಲೇಆಫ್‌ನಲ್ಲಿ ಅವಕಾಶ ಗಿಟ್ಟಿಸಿಕೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿ 16 ಅಂಕಗಳನ್ನು ಪಡೆದ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್‌ಗೆ ಪ್ರವೇಶಿಸಿತು.
ಪಿಚ್ ರಿಪೋರ್ಟ್ ಹೀಗಿದೆ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್ ಬ್ಯಾಟರ್ ಹಾಗೂ ಬೌಲರ್ ಎರಡು ವಿಭಾಗಕ್ಕೂ ಉತ್ತಮವಾಗಿ ನೆರವು ನೀಡಲಿದೆ. ಪಿಚ್‌ನಲ್ಲಿ ಬೌನ್ಸ್ ಇದ್ದತೂ ನ್ಯಾಟರ್‌ಗಳು ಉತ್ತಮ ಮೊತ್ತಗಳಿಸಲು ಪಿಚ್ ನೆರವಾಗಲಿದೆ. ಇಲ್ಲಿ ಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವುದನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾಗಿರುವ ಕಾರಣ ತವರಿನ ಪಿಚ್‌ನ ಲಾಭ ಧೋನಿ ಪಡೆಗೆ ದೊರೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೃನಾಲ್ ಪಾಂಡ್ಯ (ನಾಯಕ), ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್.
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಪಿಯೂಷ್ ಚಾವ್ಲಾ, ಕ್ರಿಸ್ ಜೋರ್ಡಾನ್, ಜೇಸನ್ ಬೆಹ್ರೆನ್ಡಾರ್ಫ್, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ.