
ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ನಿನ್ನೆ (ಮೇ 21 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತ ಮುಕ್ತಾಯವಾಗಿದೆ.
ಈ ಮೂಲಕ ಪ್ಲೇಆಫ್ ಕೊನೆಯ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಮುಂಬೈ ಇಂಡಿಯನ್ಸ್ ಅವಕಾಶವನ್ನು ಗಿಟ್ಟಿಸಿಕೊಂಡಿದೆ. ಹೀಗೆ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಮುಂಬೈ ಇಂಡಿಯನ್ಸ್ ಪ್ಲೇಆಫ್ ಸೀಟ್ ಹಿಡಿದಿದೆ.
ಈ ಪೈಕಿ ಇಂದು ( ಮೇ 23 ) ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಪಂದ್ಯವನ್ನು ಆಡುತ್ತಿದ್ದು, ನಾಳೆ ( ಮೇ 24 ) ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲ ಬಾರಿಗೆ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲನ್ನು ಕಂಡಿತ್ತು.
ಇನ್ನು ಈ ಪಂದ್ಯದಲ್ಲಿ ಸೋಲಲಿರುವ ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆಲ್ಲಲಿರುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು ಕ್ವಾಲಿಫಯರ್ 1 ಸೋಲಲಿರುವ ತಂಡದ ಜತೆ ಫೈನಲ್ ಪಂದ್ಯದ ಪ್ರವೇಶ ಗಿಟ್ಟಿಸಿಕೊಳ್ಳುವ ಸಲುವಾಗಿ ಸೆಣಸಾಡಲಿದೆ.
ಹೀಗೆ ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ಮುಂದಿನ ಹಂತಕ್ಕೆ ಪ್ರವೇಶಿಸಲಿದೆ ಎಂಬ ಲೆಕ್ಕಾಚಾರಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸುವ ಸಾಧ್ಯತೆಗಳು ಹೆಚ್ಚಿವೆ.
ಡ್ರೀಮ್ ಟೀಮ್ 1: ವಿಕೆಟ್ ಕೀಪರ್ಸ್ - ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಇಶಾನ್ ಕಿಶನ್ (ನಾಯಕ)
ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಕೈಲ್ ಮೇಯರ್ಸ್
ಆಲ್ ರೌಂಡರ್‌ಗಳು - ಕ್ಯಾಮರೂನ್ ಗ್ರೀನ್, ಮಾರ್ಕಸ್ ಸ್ಟೋನಿಸ್ (ಉಪನಾಯಕ), ಕೃನಾಲ್ ಪಾಂಡ್ಯ
ಬೌಲರ್‌ಗಳು - ಪಿಯೂಷ್ ಚಾವ್ಲಾ, ರವಿ ಬಿಷ್ಣೋಯ್
ಡ್ರೀಮ್ ಟೀಮ್ 2: ಕೀಪರ್ಸ್ - ಕ್ವಿಂಟನ್ ಡಿ ಕಾಕ್ (ನಾಯಕ), ನಿಕೋಲಸ್ ಪೂರನ್, ಇಶಾನ್ ಕಿಶನ್ (ಉಪನಾಯಕ)
ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್
ಆಲ್ ರೌಂಡರ್‌ಗಳು - ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ
ಬೌಲರ್‌ಗಳು - ಪಿಯೂಷ್ ಚಾವ್ಲಾ, ರವಿ ಬಿಷ್ಣೋಯ್, ಯಶ್ ಠಾಕೂರ್
ಸಂಭಾವ್ಯ ಆಡುವ ಬಳಗಗಳು:
ಲಕ್ನೋ ಸೂಪರ್ ಜೈಂಟ್ಸ್: ಪ್ರೇರಕ್ ಮಂಕಡ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಕೃನಾಲ್ ಪಾಂಡ್ಯ (ನಾಯಕ), ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್, ಯಶ್ ಠಾಕೂರ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್