IPL 2023 Final: ಚೆನ್ನೈ vs ಗುಜರಾತ್ ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಇಂದು ( ಮೇ 28 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಬ್ರೇಕ್ ಬೀಳಲಿದೆ. ಹೌದು, ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಈ ಬಾರಿಯ ಐಪಿಎಲ್ ಟೂರ್ನಿ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ.
ಇನ್ನು ಮಾರ್ಚ್ 31ರಂದು ನಡೆದಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳೇ ಈ ಬಾರಿಗ ಫೈನಲ್ ಆಡುವುದು ವಿಶೇಷವೆನಿಸಿದ್ದು, ಇದು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯವಾಗಿದೆ.
ಲೀಗ್ ಹಂತದ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದ್ದ ಗುಜರಾತ್ ಟೈಟನ್ಸ್ ಹಾಗೂ ಎರಡನೇ ಸ್ಥಾನವನ್ನು ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಪ್ಲೇಆಫ್‌ಗೆ ಯಶಸ್ವಿಯಾಗಿ ಲಗ್ಗೆ ಇಟ್ಟು ಮೊದಲನೆ ಕ್ವಾಲಿಫಯರ್ ಪಂದ್ಯದಲ್ಲಿ ಕಣಕ್ಕಿಳಿದವು.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ 15 ರನ್‌ಗಳ ಅಂತರದಿಂದ ಗೆದ್ದು ನೇರವಾಗಿ ಫೈನಲ್ ತಲುಪಿದರೆ, ಸೋತ ಗುಜರಾತ್ ಟೈಟನ್ಸ್ ಎರಡನೆ ಕ್ವಾಲಿಫಯರ್ ಪಂದ್ಯಕ್ಕೆ ಪ್ರವೇಶಿಸಿತು. ಇನ್ನು ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯವನ್ನು ಗೆದ್ದು ಬಂದಿದ್ದ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 62 ರನ್‌ಗಳ ಗೆಲುವನ್ನು ಸಾಧಿಸಿದ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿತು.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮೂರನೇ ಬಾರಿಗೆ ಕಣಕ್ಕಿಳಿಯಲಿದ್ದು, ಈ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು ಐದನೇ ಬಾರಿಗೆ ಚಾಂಪಿಯನ್ ಆಗುತ್ತಾ ಅಥವಾ ಗುಜರಾತ್ ಟೈಟನ್ಸ್ ತನ್ನ ಎರಡನೇ ಟ್ರೋಫಿ ಎತ್ತಿ ಹಿಡಿಯುತ್ತಾ ಎನ್ನುವ ಚರ್ಚೆ ಆರಂಭಗೊಂಡಿದೆ.
ಒಂದೆಡೆ ಈ ಚರ್ಚೆಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದು, ಉತ್ತಮ ಪ್ರದರ್ಶನಗಳನ್ನು ನೀಡಬಹುದಾದ ಆಟಗಾರರನ್ನು ಆರಿಸುವಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಅಂಕಗಳನ್ನು ಪಡೆಯಬಹುದಾಗಿದೆ.
ಡ್ರೀಮ್ ಟೀಮ್ 1:
ವಿಕೆಟ್ ಕೀಪರ್ಸ್ - ಡೆವೊನ್ ಕಾನ್ವೇ, ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್ (ನಾಯಕ)
ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಮೊಯಿನ್ ಅಲಿ
ಬೌಲರ್‌ಗಳು - ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ರಶೀದ್ ಖಾನ್ (ಉಪನಾಯಕ), ಮಥೀಶ ಪತಿರಾನ
ಡ್ರೀಮ್ ಟೀಮ್ 2:
ವಿಕೆಟ್ ಕೀಪರ್ಸ್ - ಡೆವೊನ್ ಕಾನ್ವೇ, ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್
ಆಲ್ ರೌಂಡರ್‌ಗಳು - ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ (ನಾಯಕ), ಮೊಯಿನ್ ಅಲಿ
ಬೌಲರ್‌ಗಳು - ಮೊಹಮ್ಮದ್ ಶಮಿ (ಉಪನಾಯಕ), ಮೋಹಿತ್ ಶರ್ಮಾ, ರಶೀದ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications