
ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಎಲ್ಲಾ ತಂಡಗಳು ತಮ್ಮ ಕೊನೆಯ ಪಂದ್ಯಗಳನ್ನು ಆಡುವ ಸನಿಹದಲ್ಲಿವೆ.
ಟೂರ್ನಿಯ 62 ಪಂದ್ಯಗಳು ಈಗಾಗಲೇ ಮುಗಿದಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಮೇ 13ರ ಶನಿವಾರದಂದು ನಡೆದ ಪಂಬಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಸೋತ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿನ ತನ್ನ ಎಂಟನೇ ಸೋಲನ್ನು ಕಂಡು ಟೂರ್ನಿಯಿಂದ ಹೊರಬಿತ್ತು.
ಈ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎಂಬ ಬೇಡವಾದ ಹೆಸರನ್ನು ಡೆಲ್ಲಿ ಕ್ಯಾಪಿಟಲ್ಸ್ ಪಡೆದುಕೊಂಡಿತು. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹೊರಬಿದ್ದ ಮೊದಲ ತಂಡ ಎಂದು ಡೆಲ್ಲಿ ಕ್ಯಾಪಿಟಲ್ಸ್ ಕರೆಸಿಕೊಂಡರೆ, ಇಲ್ಲಿಯವರೆಗೂ ನಡೆದಿರುವ ಎಲ್ಲಾ ಐಪಿಎಲ್ ಆವೃತ್ತಿಗಳಲ್ಲಿಯೂ ಯಾವ ತಂಡಗಳು ಮೊದಲು ಹೊರಬಿದ್ದವು ಎಂಬ ಮಾಹಿತಿ ಈ ಕೆಳಕಂಡಂತಿದೆ..
* 2008ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಕ್ಕನ್ ಚಾರ್ಜರ್ಸ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿತ್ತು.
* 2009ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡವಾಗಿತ್ತು.
* 2010ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮೊದಲು ಟೂರ್ನಿಯಿಂದ ಹೊರಬಿದ್ದಿತ್ತು.
* 2011ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಕ್ಕನ್ ಚಾರ್ಜರ್ಸ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿತ್ತು.
* 2012ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಕ್ಕನ್ ಚಾರ್ಜರ್ಸ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿತ್ತು.
* 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪುಣೆ ವಾರಿಯರ್ಸ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡವಾಗಿತ್ತು.
* 2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಟೂರ್ನಿಯಿಂದ ಮೊದಲು ಹೊರಬಿದ್ದಿದ್ದ ತಂಡವಾಗಿತ್ತು.
* 2015ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಟೂರ್ನಿಯಿಂದ ಮೊದಲು ಹೊರಬಿದ್ದಿದ್ದ ತಂಡವಾಗಿತ್ತು.
* 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರೈಸಿಂಗ್ ಪುಣೆ ಸೂಪರ್ ಜಿಯಂಟ್ ಟೂರ್ನಿಯಿಂದ ಹೊರಬಿದ್ದಿದ್ದ ಮೊದಲ ತಂಡವಾಗಿತ್ತು.
* 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಮೊದಲು ಹೊರಬಿದ್ದಿತ್ತು.
* 2018ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಟೂರ್ನಿಯಿಂದ ಹೊರಬಿದ್ದಿತ್ತು.
* 2019ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಮೊದಲು ಹೊರಬಿದ್ದಿತ್ತು.
* 2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಟೂರ್ನಿಯಿಂದ ಹೊರಬಿದ್ದಿತ್ತು.
* 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮೊದಲು ಎಲಿಮಿನೇಟ್ ಆಗಿತ್ತು.
* 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೊದಲು ಟೂರ್ನಿಯಿಂದ ಹೊರಬಿದ್ದಿತ್ತು.