For Quick Alerts
ALLOW NOTIFICATIONS  
For Daily Alerts
 

IPL 2023: ಈ ತಂಡ ಈ ಬಾರಿ ಕಪ್ ಗೆಲ್ಲೋದು ಪಕ್ಕಾ ಎಂದು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ

ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 2023 ರ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳನ್ನು ಅಳೆದು ತೂಗಿ, ಪ್ರದರ್ಶನದ ಬಗ್ಗೆ ಅಂದಾಜು ಮಾಡಲಾಗುತ್ತಿದೆ. ಯಾವ ತಂಡ ಪ್ಲೇ ಆಫ್‌ಗೆ ಹೋಗುತ್ತೆ, ಯಾವ್ ತಂಡ ಚಾಂಪಿಯನ್ ಆಗಬಹುದು ಎನ್ನುವ ಬಗ್ಗೆ ಕೂಡ ಅಭಿಮಾನಿಗಳಿಂದ ಹಿಡಿದು ಮಾಜಿ ಕ್ರಿಕೆಟಿಗರವರೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಐಪಿಎಲ್‌ನ 16ನೇ ಆವೃತ್ತಿಯ ಮೊದಲನೇ ಪಂದ್ಯಕ್ಕೆ ಮುನ್ನವೇ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಮೈಕೆಲ್ ವಾನ್ ಈ ಬಾರಿ ಕಪ್ ಗೆಲ್ಲುವ ತಂಡವನ್ನು ಹೆಸರಿಸಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ ರೋಚಕ ಹಣಾಹಣಿಯನ್ನು ನೋಡಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ಮೊದಲನೇ ಪಂದ್ಯದಲ್ಲಿ ನಾಲ್ಕು ಬಾರಿ ಕಪ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್‌ಗಳಾದ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ.

IPL 2023: Former England Captain Michael Vaughan Made A Bold Prediction About The Winner

ಬುಧವಾರ ಟ್ವೀಟ್ ಮಾಡಿರುವ ಮೈಕೆಲ್ ವಾನ್ 2023ರ ಐಪಿಎಲ್‌ನಲ್ಲಿ ಯಾವ ತಂಡ ಕಪ್ ಗೆಲ್ಲುತ್ತೆ ಎನ್ನುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡ ಕಪ್ ಎತ್ತಿಹಿಡಿಯಲಿದೆ ಎಂದು ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, "ಇದು ರಾಜಸ್ಥಾನ ರಾಯಲ್ಸ್ ಅವರ ವರ್ಷವಾಗಲಿದೆ, ಮೇ ಅಂತ್ಯದಲ್ಲಿ ಅವರು ಟ್ರೋಫಿಯನ್ನು ಎತ್ತಿಹಿಸಿಯಲಿದ್ದಾರೆ" ಎಂದು ಹೇಳಿದ್ದಾರೆ.

ಕಳೆದ ಬಾರಿ ರನ್ನರ್ ಅಪ್ ಸ್ಥಾನ

ರಾಜಸ್ಥಾನ ರಾಯಲ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಅಂದರೆ 2008ರಲ್ಲಿ ಕಪ್ ಗೆದ್ದು ಸಂಭ್ರಮಿಸಿದ್ದರು. ಉಳಿದ 14 ಲೀಗ್‌ಗಳಲ್ಲಿ ಅವರು ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ ಬಾರಿ ಫೈನಲ್ ತಲುಪಿದ್ದರೂ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆತೃಪ್ತಿಪಟ್ಟುಕೊಳ್ಳಬೇಕಾಯಿತು.

IPL 2023: Former England Captain Michael Vaughan Made A Bold Prediction About The Winner

2022ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಅತ್ಯುತ್ತಮ ಪ್ರದರ್ಶನ ನೀಡಿತ್ತು. 14 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋಲುವ ಮೂಲಕ 18 ಅಂಕಗಳನ್ನು ಗಳಿಸಿತು. ಕ್ವಾಲಿಫೈಯರ್ 2 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅನ್ನು 7 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದ ಅವರು ಫೈನಲ್‌ನಲ್ಲಿ ಎಡವಿದ್ದರು.

IPL 2023: Former England Captain Michael Vaughan Made A Bold Prediction About The Winner

ಬಲಿಷ್ಠ ತಂಡವಾಗಿದೆ ರಾಜಸ್ಥಾನ ರಾಯಲ್ಸ್

ಐಪಿಎಲ್ 2023 ಮಿನಿ ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಜೇಸನ್ ಹೋಲ್ಡರ್ ಅವರನ್ನು 5.75 ಕೋಟಿ ರುಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ. ಆರಮ್ ಝಂಪಾ ಮತ್ತು ಜೋ ರೂಟ್ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ತಂಡದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಗಾಯದಿಂದ ಐಪಿಎಲ್‌ನಿಂದ ಹೊರಗುಳಿದಿದ್ದು, ಅವರ ಬದಲಾಗಿ ಸಂದೀಪ್ ಶರ್ಮಾ ಆಯ್ಕೆಯಾಗಿದ್ದಾರೆ. ಜೋಸ್ ಬಟ್ಲರ್, ರವಿಚಂದ್ರನ್ ಅಶ್ವಿನ್, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೇರ್ ಅವರಂತಹ ಅನುಭವಿ ಆಟಗಾರರನ್ನು ಹೊಂದಿದ್ದು ಬಲಿಷ್ಠ ತಂಡವಾಗಿದೆ.

ರಾಜಸ್ಥಾನ ರಾಯಲ್ಸ್ ತಂಡ ಏಪ್ರಿಲ್ 2ರಂದು ಈ ಬಾರಿ ಐಪಿಎಲ್‌ನ ಮೊದಲನೇ ಪಂದ್ಯವನ್ನು ಆಡಲಿದೆ. ಭಾನುವಾರದಂದು ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣೆಸಲಿದೆ. ಪ್ರಮುಖ ಆಟಗಾರರನ್ನು ಸೇರ್ಪಡೆ ಮಾಡಿಕೊಂಡ ಬಳಿಕ ಬಲಿಷ್ಠವಾಗಿ ಕಾಣುತ್ತಿರುವ ಸನ್‌ರೈಸರ್ಸ್ ಭಾರಿ ಪೈಪೋಟಿ ನೀಡುವ ಸಾಧ್ಯತೆ ಇದೆ.

Story first published: Thursday, March 30, 2023, 15:35 [IST]
Other articles published on Mar 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+