For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ or ಎಬಿ ಡಿವಿಲಿಯರ್ಸ್: ತನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರನನ್ನು ಆಯ್ಕೆ ಮಾಡಿದ ಕ್ರಿಸ್ ಗೇಲ್

ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗರಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಮತ್ತು ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಗ್ರಗಣ್ಯರು.

ಈ ಮೂವರು ಆಟಗಾರರರು ವಿಶ್ವದ ಶ್ರೀಮಂತ ಕ್ರಿಕೆಟಿ್ ಲೀಗ್ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪರ ಹಲವು ವರ್ಷಗಳ ಕಾಲ ಒಟ್ಟಿಗೆ ಆಡಿದ್ದಾರೆ. ಇವರಲ್ಲಿ ವಿರಾಟ್ ಕೊಹ್ಲಿ ಮಾತ್ರ ಇನ್ನೂ ವೃತ್ತಿಪರ ಕ್ರಿಕೆಟ್ ಆಡುತ್ತಿದ್ದು, ಉಳಿದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

IPL 2023: Former RCB Batter Chris Gayle Picks Virat Kohli As His Favorite Batting Partner

2023ರ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ ಮುನ್ನ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್ 2023 ಸಮಾರಂಭದಲ್ಲಿ ಇಬ್ಬರು ಮಾಜಿ ಆಟಗಾರರನ್ನು ಆರ್‌ಸಿಬಿಯ "ಹಾಲ್ ಆಫ್ ಫೇಮ್'ಗೆ ಸೇರಿಸಲಾಯಿತು.

IPL 2023: ಸಿಎಸ್‌ಕೆ ವಿರುದ್ಧ ಕೊಹ್ಲಿ-ಪಡಿಕ್ಕಲ್ ದಾಖಲೆ ಮುರಿದ ಗ್ಲೆನ್ ಮ್ಯಾಕ್ಸ್‌ವೆಲ್- ಫಾಫ್ ಡು ಪ್ಲೆಸಿಸ್ ಜೋಡಿ!

ಇದೀಗ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ ಮತ್ತು ಆರ್‌ಸಿಬಿ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರು ಎಬಿ ಡಿವಿಲಿಯರ್ಸ್ ಅವರಿಗಿಂತ ವಿರಾಟ್ ಕೊಹ್ಲಿಯನ್ನು ತಮ್ಮ ನೆಚ್ಚಿನ ಬ್ಯಾಟಿಂಗ್ ಪಾಲುದಾರನನ್ನಾಗಿ ಆಯ್ಕೆ ಮಾಡಿದ್ದಾರೆ.

"ನು ವಿರಾಟ್ ಕೊಹ್ಲಿಯೊಂದಿಗೆ ಹೆಚ್ಚಿನ ಬಾರಿ ಬ್ಯಾಟಿಂಗ್ ಮಾಡಿದ್ದು, ಆದ್ದರಿಂದ ನಾನು ವಿರಾಟ್ ಕೊಹ್ಲಿಯನ್ನು ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ," ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ.

IPL 2023: Former RCB Batter Chris Gayle Picks Virat Kohli As His Favorite Batting Partner

ತ್ರಿವಳಿ ಆಟಗಾರರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್ 2017ರಲ್ಲಿ ಕೊನೆಯದಾಗಿ ಆರ್‌ಸಿಬಿ ತಂಡಕ್ಕಾಗಿ ಆಡಿದ್ದರು. ನಂತರ 2018ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಕ್ರಿಸ್ ಗೇಲ್‌ರನ್ನು ಬಿಡುಗಡೆ ಮಾಡಿತು, ಬಳಿಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಕೊಂಡರು.

ಕಳೆದ ವರ್ಷ ಕ್ರಿಸ್ ಗೇಲ್ ತನ್ನ ಅಂತಿಮ ಐಪಿಎಲ್ ಪಂದ್ಯವನ್ನು ಆಡಿದರೆ, 2021ರಲ್ಲಿಯೇ ಎಬಿ ಡಿವಿಲಿಯರ್ಸ್ ನಿವೃತ್ತಿಯಾಗಿದ್ದರು. ಸದ್ಯ ಮೂವರಲ್ಲಿ ವಿರಾಟ್ ಕೊಹ್ಲಿ ಮಾತ್ರ ಸಕ್ರಿಯ ಆಟಗಾರನಾಗಿದ್ದಾರೆ.

ಎಬಿ ಡಿವಿಲಿಯರ್ಸ್ 2011 ರಿಂದ 2021ರ ಅವಧಿಯಲ್ಲಿ 157 ಐಪಿಎಲ್ ಪಂದ್ಯಗಳಲ್ಲಿ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿದ್ದು, 41.10ರ ಸರಾಸರಿ ಮತ್ತು 158 ಸ್ಟ್ರೈಕ್‌ರೇಟ್‌ನಲ್ಲಿ 4,522 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಮತ್ತು 37 ಅರ್ಧಶತಕಗಳು ಸೇರಿವೆ.

IPL 2023: Former RCB Batter Chris Gayle Picks Virat Kohli As His Favorite Batting Partner

ಮತ್ತೊಂದೆಡೆ, ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ 2011 ರಿಂದ 2017ರ ವರೆಗೆ ಆಡಿದ 91 ಪಂದ್ಯಗಳಲ್ಲಿ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಿದರು. 154ರ ಸ್ಟ್ರೈಕ್‌ರೇಟ್‌ನಲ್ಲಿ ಐದು ಶತಕಗಳು ಮತ್ತು 21 ಅರ್ಧ ಶತಕಗಳ ನೆರವಿನಿಂದ 3,420 ರನ್ ಗಳಿಸಿದರು. ಅವರ ಅತ್ಯುತ್ತಮ ಸ್ಕೋರ್ ಅಜೇಯ 175 ರನ್ ಆಗಿದೆ.

ಸದ್ಯ 2023ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಆಡಿದ 5 ಪಂದ್ಯಗಳಲ್ಲಿ 3 ಸೋಲು ಮತ್ತು 2 ಗೆಲುವಿನೊಂದಿಗೆ 4 ಅಂಕಗಳನ್ನು ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಸೋಮವಾರ, 17ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ರನ್‌ಗಳ ರೋಚಕ ಸೋಲು ಅನುಭವಿಸಿತು.

ಫಾಫ್ ಡು ಪ್ಲೆಸಿಸ್ ಪಡೆ ತನ್ನ ಮುಂದಿನ ಪಂದ್ಯವನ್ನು ಗುರುವಾರ, ಏಪ್ರಿಲ್ 20ರಂದು ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಮೊಹಾಲಿಯಲ್ಲಿ ಸೆಣಸಾಡಲಿದೆ.

Story first published: Tuesday, April 18, 2023, 13:25 [IST]
Other articles published on Apr 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+