IPL 2023: ಆರ್‌ಸಿಬಿ ಆಟಗಾರರ ಬಗ್ಗೆ ಗೌತಮ್ ಗಂಭೀರ್ 3 ವಿವಾದಾತ್ಮಕ ಹೇಳಿಕೆಗಳು

ಸದಾ ವಿವಾದಾತ್ಮಕ ಹೇಳಿಕೆ ನೀಡುವುದರಲ್ಲಿ ಹೆಸರುವಾಸಿಯಾಗಿರುವ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಇತಿಹಾಸದಲ್ಲಿ ಮೂರನೇ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಏಕೆಂದರೆ, 2012 ಮತ್ತು 2014ರಲ್ಲಿ ಎರಡು ಬಾರಿ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದಾರೆ.
ಅದೇ ರೀತಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿರುವ ಗೌತಮ್ ಗಂಭೀರ್, 121 ಇನ್ನಿಂಗ್ಸ್‌ಗಳಲ್ಲಿ 31ರ ಸರಾಸರಿ ಮತ್ತು 125ರ ಸ್ಟ್ರೈಕ್‌ರೇಟ್‌ನಲ್ಲಿ 3,345 ರನ್ ಬಾರಿಸಿದ್ದಾರೆ.
ಗೌತಮ್ ಗಂಭೀರ್ ಪ್ರಸ್ತುತ ಸಂಸತ್ ಸದಸ್ಯರಾಗಿದ್ದಲ್ಲದೆ, ಸ್ಟಾರ್ ಸ್ಪೋರ್ಟ್ಸ್ ಕಾಮೆಂಟರಿ ತಂಡದ ಭಾಗವಾಗಿದ್ದಾರೆ. ಭಾರತದ ಈ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಕ್ರಿಕೆಟ್ ಕುರಿತ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸುತ್ತಾರೆ.
ಗೌತಮ್ ಗಂಭೀರ್ ಅವರು ಯಾವಾಗಲೂ ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ತಂಡದ ಆಟಗಾರರ ಕುರಿತು ಕೆಲವು ವಿವಾದಾತ್ಮಕ ಹೇಳಿಕೆಗಳಿಂದ ಫೇಮಸ್ ಆಗಿದ್ದಾರೆ. ಆರ್‌ಸಿಬಿ ಆಟಗಾರರ ಬಗ್ಗೆ ಅವರ ಮೂರು ಪ್ರಮುಖ ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ.

ಎಬಿ ಡಿವಿಲಿಯರ್ಸ್ ಐಪಿಎಲ್ ಸಾಧನೆ ಬಗ್ಗೆ ಗೌತಮ್ ಗಂಭೀರ್ ಮಾತು
ಸ್ಟಾರ್ ಸ್ಪೋರ್ಟ್ಸ್ ಇತ್ತೀಚೆಗೆ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ಬ್ಯಾಟರ್‌ಗಳ ಸಮೀಕ್ಷೆಯನ್ನು ನಡೆಸಿತು. ಇದು ಕ್ರಿಕೆಟ್ ಅಭಿಮಾನಿಗಳು ಮತ್ತು ವಿಷಯದ ಕುರಿತು ತಮ್ಮದೇ ಆದ ಅಭಿಪ್ರಾಯಗಳನ್ನು ನೀಡಿದ ಕ್ರಿಕೆಟ್ ತಜ್ಞರ ನಡುವೆ ಚರ್ಚೆಯನ್ನು ಉಂಟುಮಾಡಿದೆ. ಆರ್‌ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ಹೆಸರನ್ನು ಉಲ್ಲೇಖಿಸುವುದು ಅನಿವಾರ್ಯವಾಗಿದೆ.
ಎರಡು ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಅವರು, ದಕ್ಷಿಣ ಆಫ್ರಿಕಾ ಕ್ರಿಕೆಟಿಗ ವೈಯಕ್ತಿಕ ಸಾಧನೆಗಳನ್ನು ಮಾತ್ರ ಮಾಡಬಹುದು. ಎಬಿ ಡಿವಿಲಿಯರ್ಸ್ ತಮ್ಮ ಹೆಚ್ಚಿನ ಪಂದ್ಯಗಳನ್ನು ಬೆಂಗಳೂರಿನ ಬ್ಯಾಟಿಂಗ್ ಸ್ನೇಹಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.
"ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ವೈಯಕ್ತಿಕ ದಾಖಲೆಗಳನ್ನು ಮಾತ್ರ ಮಾಡಿದ್ದಾರೆ. ಹೆಚ್ಚಿನ ಪಂದ್ಯಗಳನ್ನು ತಮ್ಮ ನೆಚ್ಚಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ್ದಾರೆ. ಅಲ್ಲಿ ಯಾರು ಬೇಕಾದರೂ ರನ್ ಗಳಿಸಬಹುದು," ಎಂದು ಗೌತಮ್ ಗಂಭೀರ್ ಸ್ಟಾರ್‌ಸ್ಪೋರ್ಟ್ಸ್‌ಗೆ ಹೇಳಿದ್ದಾರೆ.
ಎಬಿ ಡಿವಿಲಿಯರ್ಸ್ ಕುರಿತ ಗೌತಮ್ ಗಂಭೀರ್ ಅವರ ಹೇಳಿಕೆ ಆರ್‌ಸಿಬಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಭಾರತದ ಮಾಜಿ ಕ್ರಿಕೆಟಿಗನನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಕುರಿತ ಅಪಸ್ವರ
2019ರ ಐಪಿಎಲ್‌ಗೂ ಮುನ್ನ ವಿರಾಟ್ ಕೊಹ್ಲಿಯನ್ನು ಗೌತಮ್ ಗಂಭೀರ್ ಹಲವು ಬಾರಿ ಟೀಕಿಸಿದ್ದಾರೆ. ಆಗ ಹಲವು ವರ್ಷಗಳಿಂದ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದ ವಿರಾಟ್ ಕೊಹ್ಲಿ, ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿಫಲರಾಗಿದ್ದರು. ಕೊಹ್ಲಿ ಅತ್ಯಂತ ಅದೃಷ್ಟಶಾಲಿಯಾಗಿದ್ದಾರೆ, ಏಕೆಂದರೆ ಎಂದಿಗೂ ಬಿಟ್ಟುಕೊಡದ ಆರ್‌ಸಿಬಿ ಫ್ರಾಂಚೈಸಿಗೆ ವಿರಾಟ್ ಕೊಹ್ಲಿ ಕೃತಜ್ಞರಾಗಿರಬೇಕು ಎಂದು ಮಾಜಿ ಟೆಸ್ಟ್ ಕ್ರಿಕೆಟಿಗ ಗೌತಮ್ ಗಂಭೀರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.
"ಅಂತಿಮವಾಗಿ ಐಪಿಎಲ್ ಟ್ರೋಫಿಯನ್ನು ಗೆಲ್ಲುವವರೆಗೆ ನಾಯಕನು ಆಟಗಾರನಾಗಿಯಷ್ಟೇ ಉತ್ತಮನಾಗಿರುತ್ತಾನೆ. ನಾಲ್ಕಕ್ಕಿಂತ ಗೆಚ್ಚು ಬಾರಿ ಟ್ರೋಫಿ ಗೆದ್ದ ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ಇದ್ದಾರೆ. ಅವರು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ ಎಂದು ನಾನು ಭಾವಿಸುತ್ತೇನೆ," ಎಂದು ಗಂಭೀರ್ ತಿಳಿಸಿದರು.

ಆರ್‌ಸಿಬಿ vs ಕೆಕೆಆರ್ ಪೈಪೋಟಿ
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೆ ಎರಡು ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿರುವುದರಿಂದ, ಎರಡು ತಂಡಗಳ ನಡುವೆ ಯಾವುದೇ ವಿಶೇಷ ಪೈಪೋಟಿ ಇಲ್ಲ ಎಂದು 2020ರಲ್ಲಿ ಕೆಕೆಆರ್-ಆರ್‌ಸಿಬಿ ಪಂದ್ಯಕ್ಕೆ ಮುನ್ನ ಗೌತಮ್ ಗಂಭೀರ್ ಹೇಳಿದ್ದರು. ನಂತರ ಆರ್‌ಸಿಬಿ ತಂಡ 8 ವಿಕೆಟ್‌ಗಳಿಂದ ಕೆಕೆಆರ್ ತಂಡವನ್ನು ಸೋಲಿಸಿದ ನಂತರ ಆರ್‌ಸಿಬಿ ಅಭಿಮಾನಿಗಳು ಗಂಭೀರ್ ಅವರನ್ನು ಅಪಹಾಸ್ಯ ಮಾಡಿದ್ದರು.
ಕೆಕೆಆರ್ ಪ್ರದರ್ಶನ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮತ್ತು ಮೀಮ್ಸ್‌ಗಳ ಮೂಲಕ ತೀವ್ರ ಆಕ್ರೋಶ ವ್ಯಕ್ತವಾದ ಕಾರಣ ಗೌತಮ್ ಗಂಭೀರ್ ಅವರ ಮಾತುಗಳು ಅವರಿಗೇ ತಿರುಗುಬಾಣವಾಗಿದ್ದವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications