Glenn Maxwell: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ; ಮೊದಲ ಪಂದ್ಯಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಫಿಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳುರು ಭಾನುವಾರ ತನ್ನ ಮೊದಲ ಪಂದ್ಯ ಪಂದ್ಯವನ್ನು ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯದಲ್ಲಿ ಕೆಲ ಸ್ಟಾರ್ ಆಟಗಾರರು ಭಾಗವಹಿಸದೆ ಇರುವುದು ತಂಡಕ್ಕೆ ಸ್ವಲ್ಪ ಹಿನ್ನಡೆಯಾದಂತೆ ಗೋಚರಿಸುತ್ತಿದೆ. ಆದರೆ ಟೂರ್ನಿಯಲ್ಲಿ ಆರ್‌ಸಿಬಿ ತಂಡದ ಪರವಾಗಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಆಡಲು ಸಂಪೂರ್ಣ ಫಿಟ್ ಎಂದು ಬಹಿರಂಗವಾಗಿದ್ದು ಆರ್‌ಸಿಬಿ ಅಭಿಮಾನಿಗಳಿಗೆ ಸಹಜವಾಗಿಯೇ ಖುಷಿ ನೀಡಲಿದೆ.
ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿಯೇ ನಡೆದ ಟಿ20 ವಿಶ್ವಕಪ್‌ನ ಬಳಿಕ ಗಾಯಕ್ಕೆ ಒಳಗಾಗಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಸುದೀರ್ಘ ಕಾಲ ಕ್ರಿಕೆಟ್‌ನಿಂದ ದೂರವುಳಿಯಬೇಕಾಯಿತು. ಇತ್ತೀಚೆಗೆ ಭಾರತದ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಬಳಿಕ ಮತ್ತೆ ನೋವಿಗೆ ಒಖಗಾಗಿದ್ದರು. ಹೀಗಾಗಿ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಅವರು ಆಡಿರಲಿಲ್ಲ.
ಆದರೆ ಐಪಿಎಲ್‌ನಲ್ಲಿ ಆಡಲು ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದ ಮ್ಯಾಕ್ಸ್‌ವೆಲ್ ಮೊದಲ ಪಂದ್ಯಕ್ಕೆ ಲಭ್ತವಾಗುವ ಬಗ್ಗೆ ಅನುಮಾನಗಳು ಮೂಡಿತ್ತು. ಆದರೆ ಇದೀಗ ತಂಡದಿಂದಲೇ ಈ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿದೆ. ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಮಾತನಾಡಿದ್ದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಗ್ಲೆನ್ ಮ್ಯಾಕ್ಸ್‌ವೆಲ್ ಸಂಪೂರ್ಣ ಫಿಟ್ ಆಗಿದ್ದು ಆಯ್ಕೆಗೆ ಲಭ್ಯವಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಸಿಬಿ ತಂಡದ ಅಭ್ಯಾಸ ಪಂದ್ಯದಲ್ಲಿ ಅದ್ಭಿತ ಪ್ರದರ್ಶನ ನೀಡಿ ತಮ್ಮ ಫಾರ್ಮ್ ಪ್ರದರ್ಶಿಸಿದ್ದರು. ಅಭ್ಯಾಸ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ 46 ಎಸೆತಗಳಲ್ಲಿ 78 ರನ್ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿ ಈ ಫಾರ್ಮ್ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಪಡೆಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಲಿದ್ದು ಗೆಲುವಿನ ಮೂಲಕ ಅಭಿಯಾನ ಆರಂಭಿಸುವ ವಿಶ್ವಾಸ ಮೂಡಿಸಿದೆ.
ಇನ್ನು ಆರ್‌ಸಿಬಿ ತಂಡದ ಮತ್ತೋರ್ವ ಸ್ಟಾರ್ ಆಟಗಾರ ಜೋಶ್ ಹೇಜಲ್‌ವುಡ್ ಹಾಗೂ ರಜತ್ ಪಾಟಿದಾರ್ ಬಗ್ಗೆಯೂ ಸಂಜಯ್ ಬಂಗಾರ್ ಮಾಹಿತಿ ಹಂಚಿಕೊಂಡಿದ್ದಾರೆ. ರಜತ್ ಪಾಟಿದಾರ್ ಎನ್‌ಸಿಎನಲ್ಲಿದ್ದು ಅವರ ಇನ್ನಷ್ಟೇ ಅವರ ಬಗ್ಗೆ ಮಾಹಿತಿ ದೊರೆಯಬೇಕಿದೆ. ಎನ್‌ಸಿಎಯಿಂದ ವರದಿ ಬಂದ ಬಳಿಕ ಆ ಬಗ್ಗೆ ಮಾಹಿತಿಯನ್ನು ಮಾಧ್ಯಮಗಳ ಜೊತೆಗೆ ಹಂಚಿಕೊಳ್ಳುವುದಾಗಿ ಮ್ಯಾಕ್ಸ್‌ವೆಲ್ ಹೇಳಿದ್ದಾರೆ. ಇನ್ನು ಜೋಶ್ ಹೇಜಲ್‌ವುಡ್ ಬದಲಿಗೆ ರೀಸ್ ಟೋಪ್ಲಿ ಕಣಕ್ಕಿಳಿಯುವ ಅವಕಾಶ ಪಡೆಯಲಿದ್ದಾರೆ ಎಂದು ಸಂಜಯ್ ಬಂಗಾರ್ ಮಾಹಿತಿ ನೀಡಿದರು.
ODI World Cup : ಭಾರತದ ಎರಡನೇ ಏಕದಿನ ವಿಶ್ವಕಪ್ ಗೆಲುವಿಗೆ 12 ವರ್ಷದ ಸಂಭ್ರಮ: ಲೋಗೊ ಬಿಡುಗಡೆ ಮಾಡಿದ ಐಸಿಸಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications