RCB vs LSG: ನಾನಿನ್ನೂ ಸಂಪೂರ್ಣ ಫಿಟ್ ಆಗಿಲ್ಲ: ಸ್ಪೋಟಕ ಪ್ರದರ್ಶನದ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್ ಮಾತು
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ರೋಚಕವಾಗಿ ನಡೆದ ಈ ಕಾದಾಟದಲ್ಲಿ ಎರಡು ತಂಡಗಳು ಕೂಡ ಅಮೋಘ ಪ್ರದರ್ಶನ ನೀಡಿದ್ದು ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ 1 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಪೋಟಕ ಅರ್ಧ ಶತಕ ಸಿಡಿಸಿ ಬೃಹತ್ ಮೊತ್ತವನ್ನು ಕಲೆಹಾಕಲು ಕಾರಣವಾದರು.
ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 29 ಎಸೆತಗಳನ್ನು ಎದುರಿಸಿ 59 ರನ್‌ಗಳಿಸಿ ಮಿಂಚಿದರು, ಈ ಪ್ರದರ್ಶನದ ಬಳಿಕ ಮಾತನಾಡಿದ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಫಿಟ್‌ನೆಸ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮ್ಯಾಕ್ಸ್‌ವೆಲ್ ತಾವಿನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ಇನ್ನು ಕೂಡ ರಿಹ್ಯಾಬ್ ಪ್ರಕ್ರಿಯೆ ಮುಂದುವರಿಸುತ್ತಿರುವುದಾಗಿ ಮ್ಯಾಕ್ಸ್‌ವೆಲ್ ಹೇಳಿದ್ದಾರೆ.

"ನಾನಿನ್ನು ಕೂಡ ರಿಹ್ಯಾಬ್‌ನಲ್ಲಿದ್ದೇನೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ನಾನು ಇದನ್ನೇ ಮಾಡುತ್ತಿದ್ದೇನೆ. ಈಗ ಇದು ನನಗೆ ದಿನ ನಿತ್ಯದ ಕೆಲಸವಾಗಿದ್ದು ಇನ್ನು ಒಂದೆರಡು ತಿಂಗಳಿನಲ್ಲಿ ಸಂಪೂರ್ಣ ಫಿಟ್‌ನೆಸ್‌ಗೆ ಮರಳಲಿದ್ದೇನೆ. ಪ್ರತಿ ದಿನವೂ ನನ್ನ ಪ್ರಯತ್ನವನ್ನು ಮಾಡುತ್ತಿದ್ದೇನೆ" ಎಂದಿದ್ದಾರೆ ಗ್ಲೆನ್ ಮ್ಯಾಕ್ಸ್‌ವೆಲ್.
ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತವನ್ನು ಕಲೆಹಾಕಿತು. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್‌ನ ಅಬ್ಬರದಿಂದಾಗಿ ಆರ್‌ಸಿಬಿ ಭರ್ಜರಿ 212 ರನ್‌ಗಳಿಸಿತು. ಆರ್‌ಸಿಬಿ ತಂಡದ ಮೂರು ಆಟಗಾರರು ಕುಡ ಈ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.
ಈ ಮೊತ್ತವನ್ನು ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿಯೇ ಭಾರೀ ಹಿನ್ನಡೆಗೆ ಒಳಗಾಯಿತು. ಅಗ್ರ ಕ್ರಮಾಂಕದ ಆಟಗಾರರು ಬೇಗನೆ ವಿಕೆಟ್ ಕಳೆದುಕೊಂಡರು. ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ಮಾರ್ಜಸ್ ಸ್ಟೋಯ್ನಿಸ್ ಹಾಗೂ ನಿಕೋಲಸ್ ಪೂರನ್ ಪಂದ್ಯದ ಗರಿಯನ್ನು ಬದಲಾಯಿಸಿದರು. ಅಂತಿಮ ಹಂತದಲ್ಲಿ ಆರ್‌ಸಿಬಿ ತಂಡ ಪಂದ್ಯವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಬಹುತೇಕ ಯಶಸ್ವಿಯಾಯಿತಾದರು ಕೂಡ ಕೊನೆಯ ಎಸೆತದಲ್ಲಿ ಕೆಎಲ್ ರಾಹುಲ್ ಪಡೆ ಗೆದ್ದು ಬೀಗಿದೆ.
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆ),
ಅನುಜ್ ರಾವತ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಬೆಂಚ್: ಕರ್ಣ್ ಶರ್ಮಾ, ಸುಯಶ್ ಪ್ರಭುದೇಸಾಯಿ, ಆಕಾಶ್ ದೀಪ್, ಮೈಕೆಲ್ ಬ್ರೇಸ್‌ವೆಲ್, ಸೋನು ಯಾದವ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ
ಕೆಎಲ್ ರಾಹುಲ್ (ಸಿ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಾಕ್),
ಜಯದೇವ್ ಉನದ್ಕತ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್
ಬೆಂಚ್: ಆಯುಷ್ ಬಡೋನಿ, ಡೇನಿಯಲ್ ಸಾಮ್ಸ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ಕೃಷ್ಣಪ್ಪ ಗೌತಮ್, ರೊಮಾರಿಯೋ ಶೆಫರ್ಡ್, ಯಶ್ ಠಾಕೂರ್, ಕ್ವಿಂಟನ್ ಡಿ ಕಾಕ್, ನವೀನ್-ಉಲ್-ಹಕ್, ಮನನ್ ವೋಹ್ರಾ, ಯುಧ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ, ಮಯಾಂಕ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications