For Quick Alerts
ALLOW NOTIFICATIONS  
For Daily Alerts
 

IPL 2023 Final, ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್: ಪಿಚ್ ರಿಪೋರ್ಟ್, ಸಂಭಾವ್ಯ XI, ನೇರಪ್ರಸಾರದ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಮುಕ್ತಾಯದ ಹಂತಕ್ಕೆ ಬಂದಿದೆ. ಕೇವಲ ಫೈನಲ್ ಪಂದ್ಯ ಮಾತ್ರವೇ ಬಾಕಿಯಿದ್ದು ಎರಡು ತಂಡಗಳು ಮಾತ್ರ ಟೂರ್ನಿಯಲ್ಲಿ ಉಳಿದುಕೊಂಡಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಯಾವ ತಂಡ ಚಾಂಪಿಯನ್ ಎನಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಧೋನಿ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಲೀಗ್ ಹಂತದಲ್ಲಿ ಎರಡನೇ ಸ್ಥಾನವನ್ನು ಪಡೆದು ಪ್ಲೇಆಫ್‌ಗ್ಎ ಪ್ರವೇಶಿಸಿತ್ತು. ಪ್ಲೇಆಫ್‌ನ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಅಮೋಘ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ತಂಡದ ಬಹುತೇಕ ಆಟಗಾರರು ಲುತ್ತಮ ಲಯದಲ್ಲಿದ್ದು ಫೈನಲ್‌ನಲ್ಲಿ ಮತ್ತೊಂದು ಬೃಹತ್ ಪ್ರದರ್ಶನದ ವಿಶ್ವಾಸದಲ್ಲಿದೆ ಧೋನಿ ಪಡೆ.

IPL 2023, GT vs CSK Final: Predicted Playing 11, Pitch Report and telecast details

ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ತನ್ನ ಮೇಲಿದ್ದ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಿದೆ. ಲೀಗ್ ಹಂತದಲ್ಲಿ ಅಗ್ರಸ್ಥಾನಿಯಾಗಿಉ ಪ್ಲೇಆಫ್ ಪ್ರವೇಶಿಸಿದ್ದ ಜಟಿ ಮೊದಲ ಕ್ವಾಲಿಫಯರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿತು. ಆದರೆ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದ್ದು ಫೈನಲ್‌ಗೆ ಪ್ರವೇಶಿಸಿದೆ. ಇದೀಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಈ ಪಂದ್ಯ ಮಾತ್ರ ಅಹ್ಮದಾಬಾದ್‌ನಲ್ಲಿ ಆಯೋಜನೆಯಾಗಲಿದೆ ಎಂಬುದು ಗಮನಾರ್ಹ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಕ್ವಾಲಿಫಯರ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ ಪಿಚ್ ರಿಪೋರ್ಟ್

ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣ ಈ ಬಾರಿಯ ಐಪಿಎಲ್ ಟೂರ್ನಿಗೆ ಆತಿಥ್ಯವನ್ನು ವಹಿಸಲಿದೆ. ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಅಹ್ಮದಾಬಾದ್‌ನ ಈ ಕ್ರೀಡಾಂಗಣ ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿದ್ದು ಹೈಸ್ಕೋರಿಂಗ್ ಫೈನಲ್ ಪಂದ್ಯವನ್ನು ನಿರೀಕ್ಷಿಸಬಹುದು. ಇಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲ ನೀಡಲಿದ್ದು ಬೌಲರ್‌ಗಳು ದಂಡನೆಗೆ ಒಳಗಾಗುವುದು ಖಚಿತ. ಆರಂಭದಲ್ಲಿ ವೇಗಿಗಳಿಗೆ ಸ್ವಿಂಗ್ ಮೂಲಕ ನೆರವು ನೀಡುವ ಸಾಧ್ಯತೆಯಿದ್ದು ನಂತರ ಅಂತಿಮ ಹಂತದಲ್ಲಿ ಸ್ಪಿನ್ನರ್‌ಗಳು ಇಲ್ಲಿ ಮಿಂಚುವ ಅವಕಾಶವಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್),ಹಾರ್ದಿಕ್ ಪಾಂಡ್ಯ (ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ

Story first published: Saturday, May 27, 2023, 15:00 [IST]
Other articles published on May 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+