IPL 2023 CSK vs GT Highlights: ಧೋನಿ ಪಡೆಗೆ ಮೊದಲ ಸೋಲು: ಹಾರ್ದಿಕ್ ಪಡೆಯ ಶುಭಾರಂಭ
ಐಪಿಎಲ್ 16ನೇ ಆವೃತ್ತಿಯ ಪ್ರಪ್ರಥಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಭರ್ಜರಿಯಾಗಿ ಗೆಲುವು ಸಾಧಿಸಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಜಿದ್ದಾಜಿದ್ದಿನ ಹೋರಾಟ ನಡೆಸಿತಾದರೂ ಹಾರ್ದಿಕ್ ಪಡೆಯ ಬಲಾಢ್ಯ ಬ್ಯಾಟಿಂಗ್ ಬಳಗದ ಮುಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದು ವಿಕೆಟ್‌ಗಳ ಅಂತರದ ಸೋಲು ಕಂಡಿದೆ.
ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಚಾಂಪಿಯನ್ನರ ರೀತಿಯಲ್ಲಿಯೇ ಅಭಿಯಾನ ಆರಂಭಿಸಿದೆ. ಇತ್ತ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿಯೂ ನೀರಸ ಆರಂಭವನ್ನು ಪಡೆದುಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮಾತ್ರವೇ ಸ್ಫೊಟಕ ಪ್ರದರ್ಶನ ನೀಡಿ ಮಿಂಚಿದರು ಉಳಿದಂತೆ ಎಲ್ಲಾ ಬ್ಯಾಟರ್‌ಗಳು ಕೂಡ ವೈಫಲ್ಯತೆ ಕಂಡಿದ್ದಾರೆ.

ಋತುರಾಜ್ ಗಾಯಕ್ವಾಡ್ ಅವರ ಈ ಅದ್ಭುತ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತು. ಋತು 50 ಎಸೆತಗಳಲ್ಲಿ 92 ರನ್‌ಗಳಿಸಿ ಶತಕದ ಅಂಚಿನಲ್ಲಿ ಎಡವಿದರು. ಉಳಿದಂತೆ ಒಯೀನ್ ಅಲಿ ಅವರ 23 ರನ್ ಸಿಎಸ್‌ಕೆ ಪರ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಎನಿಸಿದೆ.
ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬ್ಯಾಟಿಂಗ್ ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಮೈದಾನದಲ್ಲಿ ನೆರೆದಿದ್ದರು. ಈ ಅಭಿಮಾನಿಗಳಿಗೆ ಮಾಹಿ ನಿರತಾಸೆಯನ್ನುಂಟು ಮಾಡಲಿಲ್ಲ. ಅಂತಿಮ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಮಾಹಿ ಕೊನೆಯ ಓವರ್‌ನಲ್ಲಿ ಅಬ್ಬರಿಸಿದರು. ಒಂದು ಭರ್ಜಸಿ ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸಿದ ಧೋನಿ 7 ಎಸೆತಗಳಲ್ಲಿ 14 ರನ್‌ಗಳನ್ನು ಗಳಿಸಿದರು. ಈ ಮೂಲಕ ತಂಡದ ಮೊತ್ತ 180ರ ಸನಿಹಕ್ಕೆ ತಲುಪಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಸವಾಲಿ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡಕ್ಕೆ ಸಾಧಾರಣ ಆರಂಭ ದೊರೆಯುತು. ವೃದ್ಧೊಮಾನ್ ಸಾಹಾ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದರಾದರೂ ಇನ್ನಿಂಗ್ಸ್ ಬೆಳೆಸಲು ಸಾಧ್ಯವಾಗಲಿಲ್ಲ. ಆದರೆ ಶುಬ್ಮನ್ ಗಿಲ್ ಹಾರ್ದಿಕ್ ಬಳಗಕ್ಕೆ ಮತ್ತೊಮ್ಮೆ ಭದ್ರ ಅಡಿಪಾಯ ನೀಡುವಲ್ಲಿ ಯಶಸ್ವಿಯಾದರು. ಸ್ಪೋಟಿಕವಾಗಿ ಬ್ಯಾಟಿಂಗ್ ಪ್ರದರ್ಶಿಸಿದ ಅವರು 36 ಎಸೆತಗಳಲ್ಲಿ 63 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು.
ಇನ್ನು ಅಂತಿಮ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳು ಜಿಟಿ ಬಳಗಕ್ಕೆ ಸವಾಲೊಡ್ಡುವ ಭೀತಿ ಮೂಡಿಸಿದರಾದರೂ ರಶೀದ್ ಖಾನ್ ಅದಕ್ಕೆ ಅವಕಾಶ ನೀಡಲಿಲ್ಲ. ಕೇವಲ ಮೂರು ಎಸೆತಗಳಲ್ಲಿ 10 ರನ್ ಗಳಿಸಿದ ರಶೀದ್ ಜಿಟಿ ಕೈ ಮೇಲಾಗುವಂತೆ ಮಾಡಿದರು. ಅಂತಿಮವಾಗಿ ಇನ್ನೂ ನಾಲ್ಕು ಎಸೆತಗಳು ಬಾಕಿಯಿರುವಂತೆಯೇ ಜಿಟಿ ತಂಡ ಈ ಪಂದ್ಯವನ್ನು ಗೆದ್ದು ಬೀಗಿದೆ
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಲ್, ಅಲ್ಜಾರಿ ಜೋಸೆಫ್
ಸಬ್ಸ್ಟಿಟ್ಯೂಟ್ಸ್: ಬಿ ಸಾಯಿ ಸುದರ್ಶನ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆಎಸ್ ಭರತ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್/ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ರಾಜವರ್ಧನ್ ಹಂಗರ್ಗೇಕರ್
ಸಬ್ಸ್ಟಿಟ್ಯೂಟ್ಸ್: ತುಷಾರ್ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications