Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಕ್ವಾಲಿಫೈಯರ್ 1: ಟೈಟನ್ಸ್ vs ಸೂಪರ್ ಕಿಂಗ್ಸ್: ಫೈನಲ್‌ಗೆ ಪ್ರವೇಶಿಸುವ ಮೊದಲ ತಂಡ ಯಾವುದು?

ಇಂಡಿಯನ್ ಪ್ರೀಮಿಯರ್ ಲೀಗ್‌ 16ನೇ ಆವೃತ್ತಿ ಕೊನೆಯ ಹಂತವನ್ನು ತಲುಪಿದೆ. ಲೀಗ್ ಹಂತದ ಎಲ್ಲಾ ಪಂದ್ಯಗಳು ಮುಕ್ತಾಯವಾಗಿದ್ದು ಇಂದಿನಿಂದ ಪ್ಲೇಆಫ್ ಹಂತದ ಪಂದ್ಯಗಳು ಆರಂಭವಾಗಲಿದೆ. ಪ್ಲೇಆಫ್ ಹಂತದ ಮೊದಲ ಪಂದ್ಯ ಇಂದು ನಡೆಯಲಿದ್ದು ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹಾರ್ದಿಕ್ ಪಾಂಡ್ಯ ಹಾಗೂ ಎಂಎಸ್ ಧೋನಿ ನೇತೃತ್ವದ ನಡುವಿನ ಈ ಪಂದ್ಯದಲ್ಲಿ ಯಾರ ತಂಡಕ್ಕೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು ಗೆದ್ದ ತಂಡ ಟ್ರೋಫಿ ಎತ್ತಿ ಹಿಡಿಯುವ ಸನಿಹಕ್ಕೆ ತಲುಪಲಿದೆ.

ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಟೂರ್ನಿಯ ಲೀಗ್ ಹಂತದಲ್ಲಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದೆ. ಸತತ ಎರಡನೇ ಆವೃತ್ತಿಯಲ್ಲಿ ಚಾಂಪಿಯನ್ ಆಗುವ ಕನಸು ಕಾಣುತ್ತಿದೆ ಜಿಟಿ ತಂಡ. ಮತ್ತೊಂದೆಡೆ ಐಪಿಎಲ್ ಇತಿಹಾಸದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿದ್ದು ಚೆನ್ನೈನ ಚೆಪಾಕ್ ಕ್ರೀಡಾಂಗಣ ಈ ಪಂದ್ಯಕ್ಕೆ ವೇದಿಕೆಯಾಗಲಿದೆ.

IPL 2023, GT vs CSK Qualifier 1, Predicted Playing 11, Pitch Report, head to head

ಸಿಎಸ್‌ಕೆ vs ಜಿಟಿ ಹೆಡ್ ಟು ಹೆಡ್ ದಾಖಲೆ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈವರೆಗೆ ಒಟ್ಟು ಮೂರು ಬಾರಿ ಮುಖಾಮುಖಿಯಾಗಿದೆ. ಈ ಮುರು ಪಂದ್ಯಗಳಲ್ಲಿಯೂ ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿದ್ದು ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಗೆಲುವಿಗಾಗಿ ಕಾತರಿಸುತ್ತಿದೆ. ಹೀಗಾಗಿ ಜಿಟಿ ಹಾಗೂ ಸಿಎಸ್‌ಕೆ ತಮಡಗಳ ನಡುವಿನ ಹೆಡ್‌ ಟು ಹೆಡ್ ದಾಖಲೆ 3-0 ಇದೆ. ಈ ಎರಡು ತಂಡಗಳು ಕೊನೆಯ ಬಾರಿ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಇದರಲ್ಲಿ ಜಿಟಿ ತಂಡ ಐದು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧದ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ಸಂಜೆ (ಮೇ 23ರಂದು) ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್ ಬ್ಯಾಟರ್ ಹಾಗೂ ಬೌಲರ್ ಎರಡು ವಿಭಾಗಕ್ಕೂ ಉತ್ತಮವಾಗಿ ನೆರವು ನೀಡಲಿದೆ. ಪಿಚ್‌ನಲ್ಲಿ ಬೌನ್ಸ್ ಇದ್ದತೂ ನ್ಯಾಟರ್‌ಗಳು ಉತ್ತಮ ಮೊತ್ತಗಳಿಸಲು ಪಿಚ್ ನೆರವಾಗಲಿದೆ. ಇಲ್ಲಿ ಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವುದನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಮೈದಾನವಾಗಿರುವ ಕಾರಣ ತವರಿನ ಪಿಚ್‌ನ ಲಾಭ ಧೋನಿ ಪಡೆಗೆ ದೊರೆಯಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಗುಜರಾತ್ ಟೈಟಾನ್ಸ್: ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ದಾಸುನ್ ಶನಕ, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ರಶೀದ್ ಖಾನ್, ಮೊಹಮ್ಮದ್ ಶಮಿ, ಯಶ್ ದಯಾಳ್, ಮೋಹಿತ್ ಶರ್ಮಾ, ನೂರ್ ಅಹ್ಮದ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್‌ವಾಡ್, ಡೆವೊನ್ ಕಾನ್ವೇ, ಅಂಬಾಟಿ ರಾಯುಡು, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ(ನಾಯಕ), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ

Story first published: Tuesday, May 23, 2023, 9:07 [IST]
Other articles published on May 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+