Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಸೋದರರ ಸವಾಲ್‌ನಲ್ಲಿ ಗೆಲ್ಲೋರು ಯಾರು? ಸನ್‌ರೈಸರ್ಸ್‌ಗೆ ರಾಯಲ್ಸ್ ಸವಾಲು: ಇಂದು ಎರಡು ಮುಖಾಮುಖಿ

ಇಂದು ಐಪಿಎಲ್‌ನ್ಲಲಿ ಮತ್ತೊಂದು ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಟೂರ್ನಿಯ 51ನೇ ಪಂದ್ಯದಲ್ಲಿ ಸಹೋದರರಿಬ್ಬರು ಮುಖಾಮುಖಿಯಾಗುತ್ತಿರುವುದು ಐಪಿಎಲ್‌ನ ವಿಶೇಷವಾಗಿದೆ. ಗುಜರಾತ್ ಟೈಟನ್ಸ್ ತಂಡ ರಾಜಸ್ತಾನ್ ರಾಯಲ್ಸ್ ತಂಡವನ್ನು ಎದುರಿದ್ದು ಗುಜರಾತ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದರೆ ಕೃನಾಲ್ ಪಾಂಡ್ಯಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದ ಜವಾಬ್ಧಾರಿ ದೊರೆತಿದೆ.

ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿಯೂ ಅಮೋಘ ಪ್ರದರ್ಶನ ನೀಡುತ್ತಿದ್ದು ಅಗ್ರಸ್ಥಾನದಲ್ಲಿದೆ. ಆಡಿರುವ 10 ಪಂದ್ಯಗಳಲ್ಲಿ 7 ಗೆಲುವು ಸಾಧಿಸಿರುವ ಜಿಟಿ 14 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಕಳೆದ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಳೆಯಿಂದಾಗಿ ರದ್ದಾಗಿದ್ದರೆ ಅದಕ್ಕೂ ಹಿಂದಿನ ಮೂರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರವೇ ಕಂಡಿದೆ. ಒಟ್ಟಾರೆಯಾಗಿ ಆಡಿರುವ 10 ಪಂದ್ಯಗಳಲ್ಲಿ ಐದು ಗೆಲುವು ಸಾಧಿಸಿರುವ ಎಲ್‌ಎಸ್‌ಜಿ 11 ಅಂಕಗಳನ್ನು ಗಳಿಸಿದ್ದು ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

IPL 2023, GT vs LSG and RR vs SRH, another double header day in IPL

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.

ಲಕ್ನೋ ಸೂಪರ್ ಜೈಂಟ್ಸ್: ಕೃನಾಲ್ ಪಾಂಡ್ಯ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್, ಕರುಣ್ ನಾಯರ್

RR vs SRH ಸೆಣೆಸಾಟ
ರಾಜಸ್ಥಾನ್ ರಾಯಲ್ಸ್ ತಂಡ ಕಳೆದ ಐದು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ ಒಂದು ಪಂದ್ಯ ಮಾತ್ರ. ಆಡಿರುವ 10 ಪಂದ್ಯಗಳಲ್ಲಿ ಐದು ಗೆಲುವು ಹಾಗೂ ಐದು ಸೋಲು ಅನುಭವಿಸಿರುವ ರಾಜಸ್ಥಾನ್ ರಾಯಲ್ಸ್ ಸದ್ಯ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಮಾತ್ರವೇ ಸಾಧಿಸಿದ್ದು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್

ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್

Story first published: Sunday, May 7, 2023, 9:45 [IST]
Other articles published on May 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+