ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 56 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಗುಜರಾತ್ ಟೈಟನ್ಸ್ ತಂಡ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಲಕ್ನೋ ತಂಡ 171 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಹೀಗಾಗಿ ಭಾರೀ ಅಂತರದ ಸೋಲು ಕಂಡಿದೆ.
ಮೊದಲಿ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡ 2 ವಿಕೆಟ್ ಕಳೆದುಕೊಂಡು 227 ರನ್‌ಗಳನ್ನು ಗಳಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಎಲ್‌ಎಸ್‌ಜಿ ಅದ್ಭುತ ಆರಂಭವನ್ನು ಪಡೆಯಿತು. ಕೇಲ್ ಮೇಯರ್ಸ್ ಹಾಗೂ ಕ್ವಿಂಟನ್ ಡಿಕಾಕ್ 88 ರನ್‌ಗಳ ಜೊತೆಯಾಟ ನೀಡಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಉತ್ತಮ ಜೊತೆಯಾಟ ದೊರೆಯದ ಕಾರಣ ದೊಡ್ಡ ಮೊತ್ತದ ಗುರಿ ಬೆನ್ನಟ್ಟುವಲ್ಲಿ ವಿಫಲವಾಗಿಯಿತು. ಅಂತಿಮವಾಗಿ ಎಲ್‌ಎಸ್‌ಜಿ ತಂಡ 171 ರನ್‌ಗಳಿಗೆ ಹೋರಾಟ ಅಂತ್ಯಗೊಳಿಸಿತು.

ಇನ್ನು ಇದಕ್ಕೂ ಮುನ್ನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ಪರವಾಗಿ ವೃದ್ದಿಮಾನ್ ಸಾಹಾ ಹಾಗೂ ಶುಬ್ಮನ್ ಗಿಲ್ ಸಿಕ್ಸರ್‌ಗಳ ಸುರಿಮಳೆ ಹರಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 12.1 ಓವರ್‌ಗಳಲ್ಲಿ ಬರೊಬ್ಬರಿ 142 ರನ್‌ಗಳಿಸಿತು. ಸಾಹಾ ಕೇವಲ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿ 81 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಮತ್ತೊಂದೆಡೆ ಶುಬ್ಮನ್ ಗಿಲ್ ಕೊನೆಯ ತನಕವೂ ವಿಕೆಟ್ ಕಳೆದುಕೊಳ್ಳದೆ ತಂಡದ ಮೊತ್ತವನ್ನು ಹೆಚ್ಚಿಸಿದರು.
ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ 25 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ನಂತ ಡೇವಿಡ್ ಮಿಲ್ಲರ್ ಕೂಡ ಸ್ಪೋಟಕ ಆಟವನ್ನು ನೀಡಿ ತಂಡದ ಮೊತ್ತ ಹಿಗ್ಗಿಸಲು ಕಾರಣವಾದರು. ಮಿಲ್ಲರ್ 12 ಎಸೆತಗಳನ್ನು ಎದುರಿಸಿ 21 ರನ್‌ಗಳಿಸಿ ಅಜೇಯವಾಗುಳಿದರು. ಇನ್ನು ಆರಂಭದಿಂದ ಕೊನೆಯ ಹಂತದವರೆಗೂ ಲಕ್ನೋ ಸೂಪರ್ ಜೈಂಟ್ಸ್ ಬೌಲರ್‌ಗಳಿಗೆ ಕಾಡಿದ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ ಅಜೇಯ 94 ರನ್‌ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಗಿಲ್ ಕೇವಲ 2 ಬೌಂಡರಿ ಸಿಡಿಸಿದ್ದು 7 ಸಿಕ್ಸರ್ ಸಿಡಿಸಿದ್ದಾರೆ.
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ
ಬೆಂಚ್: ಅಲ್ಜಾರಿ ಜೋಸೆಫ್, ದಾಸುನ್ ಶನಕ, ಶ್ರೀಕರ್ ಭರತ್, ಶಿವಂ ಮಾವಿ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಸಾಯಿ ಸುದರ್ಶನ್, ಯಶ್ ದಯಾಳ್
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕರಣ್ ಶರ್ಮಾ, ಕೃನಾಲ್ ಪಾಂಡ್ಯ(ನಾಯಕ), ಮಾರ್ಕಸ್ ಸ್ಟೋಯ್ನಿಸ್, ಸ್ವಪ್ನಿಲ್ ಸಿಂಗ್, ಯಶ್ ಠಾಕೂರ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಅವೇಶ್ ಖಾನ್
ಬೆಂಚ್: ಆಯುಷ್ ಬಡೋನಿ, ಡೇನಿಯಲ್ ಸಾಮ್ಸ್, ಅಮಿತ್ ಮಿಶ್ರಾ, ಪ್ರೇರಕ್ ಮಂಕಡ್, ಯುದ್ವೀರ್ ಸಿಂಗ್ ಚರಕ್, ಮಾರ್ಕ್ ವುಡ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಕರುಣ್ ನಾಯರ್, ನವೀನ್-ಉಲ್-ಹಕ್, ಮನನ್ ವೋಹ್ರಾ, ಕೃಷ್ಣಪ್ಪ ಗೌತಮ್, ಕರಣ್ ಶರ್ಮಾ