Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RR: ಮಿಂಚಿದ ಕನ್ನಡಿಗ ಅಭಿನವ್ ಮನೋಹರ್: ರಾಜಸ್ಥಾನ್ ರಾಯಲ್ಸ್‌ಗೆ ಗೆಲ್ಲಲು 178 ರನ್‌ಗಳ ಗುರಿ

ಐಪಿಎಲ್ 16ನೇ ಆವೃತ್ತಿಯ 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಗುಜರಾತ್ ಟೈಟನ್ಸ್ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದು 7 ವಿಕೆಟ್ ಕಳೆದುಕೊಂಡು 177 ರನ್‌ಗಳಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಮುಂದೆ ಸವಾಲಿನ ಗುರಿಯಿದೆ.

ತವರಿನಲ್ಲಿ ಈ ಪಂದ್ಯ ನಡೆಯುತ್ತಿದ್ದರೂ ಗುಜರಾತ್ ಟೈಟನ್ಸ್ ತಂಡದ ಬ್ಯಾಟರ್‌ಗಳು ನಿರೀಕ್ಷಿತ ಮಟ್ಟದಲ್ಲಿ ಅಬ್ಬರಿಸಲು ವಿಫಲವಾದರು. ಅದರಲ್ಲೂ ಒವರ್‌ಪ್ಲೇ ಅವಧಿಯಲ್ಲಿ ರಾಜಸ್ಥಾನ್ ರಾಯಲ್ಸ್ ಬೌಲರ್‌ಗಳು ಜಿಟಿ ವಿರುದ್ಧ ಅದ್ಭುತ ಯಶಸ್ಸು ಸಾಧಿಸಿದರು. ಬ್ಯಾಟಿಂಗ್ ಸ್ನೇಹಿ ಪಿಚ್ ಎನಿಸಿಕೊಂಡಿರುವ ಅಹ್ಮದಾಬಾದ್‌ನಲ್ಲಿ ಮೊದಲ ಆರು ಓವರ್‌ಗಳ ಮುಕ್ತಾಯಕ್ಕೆ ಜಿಟಿ 42 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ಈ ಮೂಲಕ ಆರ್‌ಆರ್ ಬೌಲರ್‌ಗಳು ಮೇಲುಗೈ ಸಾಧಿಸಿದರು.

GT vs RR

ಶುಬ್ಮನ್ ಗಿಲ್ ಈ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಬಾರಿಸಿದರೆ ಸಾಯಿ ಸುದರ್ಶನ್ 19 ಎಸೆತಗಳಲ್ಲಿ 20 ರನ್‌ಗಳಿಸಲಷ್ಟೇ ಶಕ್ತವಾದರು. ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್‌ನಿಮದ ಕೂಡ 28 ರನ್ ಮಾತ್ರವೇ ಹರಿದು ಬಂತು. ಆದರೆ ಡೇವಿಡ್ ಮಿಲ್ಲರ್ ಹಾಗೂ ಅಭಿನವ್ ಮನೋಹರ್ ಜೋಡಿಯ ಬ್ಯಾಟಿಂಗ್ ತಂಡದ ಮೊತ್ತ ಹೆಚ್ಚಲು ಕಾರಣವಾಯಿತು. ಕನ್ನಡಿಗ ಅಭಿನವ್ ಮನೋಹರ್ ಕೇವಲ 13 ಎಸೆತಗಳಲ್ಲಿ 27 ರನ್‌ಗಳಿಸುವ ಮೂಲಕ ಅಂತಿಮ ಹಂತದಲ್ಲಿ ರನ್ ವೇಗ ಹೆಚ್ಚಲು ಕಾರಣವಾದರು. ಡೇವಿಡ್ ಮಿಲ್ಲರ್ 30 ಎಸೆತಗಳಲ್ಲಿ 46 ರನ್‌ಗಳನ್ನು ಗಳಿಸಿ ಮಿಂಚಿದರು.

ಇನ್ನು ರಾಜಸ್ಥಾನ್ ರಾಯಲ್ಸ್ ಪರವಾಗಿ ಸಂದೀಪ್ ಶರ್ಮಾ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಕೇವಲ 25 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ. ಟ್ರೆಂಟ್ ಬೋಲ್ಡ್ ನಾಲ್ಕು ಓವರ್‌ಗಳಲ್ಲಿ 46 ರನ್ ನೀಡಿ ದುಬಾರಿಎನಿಸಿದರು. ಬೋಲ್ಟ್, ಆಡಂ ಜಂಪಾ ಹಾಗೂ ಚಾಹಲ್ ತಲಾ ಒಂದು ವಿಕೆಟ್ ಪಡೆದರು.

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ
ಬೆಂಚ್: ಜೋಶುವಾ ಲಿಟಲ್, ಜಯಂತ್ ಯಾದವ್, ನೂರ್ ಅಹ್ಮದ್, ದಾಸುನ್ ಶನಕ, ವಿಜಯ್ ಶಂಕರ್, ಶ್ರೀಕರ್ ಭರತ್, ಶಿವಂ ಮಾವಿ, ಪ್ರದೀಪ್ ಸಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಯಶ್ ದಯಾಳ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಆಡಮ್ ಝಂಪಾ, ಯುಜ್ವೇಂದ್ರ ಚಹಾಲ್
ಬೆಂಚ್: ದೇವದತ್ ಪಡಿಕ್ಕಲ್, ಡೊನಾವನ್ ಫೆರೇರಾ, ನವದೀಪ್ ಸೈನಿ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೋಲ್ಡರ್, ಕುಲದೀಪ್ ಸೇನ್, ಕೆಎಂ ಆಸಿಫ್, ಆಕಾಶ್ ವಸಿಷ್ಟ್, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಯಾದವ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್

Story first published: Sunday, April 16, 2023, 21:31 [IST]
Other articles published on Apr 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+