For Quick Alerts
ALLOW NOTIFICATIONS  
For Daily Alerts
 

IPL 2023 GT vs RR: ಸಂಜು, ಹೇಟ್ಮೇಯರ್ ಅಬ್ಬರ: ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್‌ನ 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ರೋಚಕ ಗೆಲುವು ಸಾಧಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ 3 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ಗುಜರಾತ್ ಟೈಟನ್ಸ್ ನೀಡಿದ್ದ 178 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ನಾಯಕ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್‌ನಿಂದಾಗಿ ಹೋರಾಟದಲ್ಲಿ ಮುಂದುವರಿದಿತ್ತು. ನಂತರ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿಮ್ರಾನ್ ಹೇಟ್ಮೇಯರ್ ಕೊನೆಯವರೆಗೂ ಹೋರಾಡಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

IPL 2023 GT vs RR: Rajasthan Royals win against Gujarat Titans By 3 wickets

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಜಿಟಿ

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಜಿಟಿ ತಂಡ ಆರಂಭದಲ್ಲಿಯೇ ಹಿನ್ನಡೆ ಅನುಭವಿಸಿತು. ಆರಂಭಿಕ ಆಟಗಾರ ವೃದ್ಧಿಮಾನ್ ಸಾಹಾ ಅವರನ್ನು ಮೊದಲ ಓವರ್‌ನಲ್ಲಿಯೇ ಕಳೆದುಕೊಂಡಿತು. ಆದರೆ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ 34 ಎಸೆತಗಳಲ್ಲಿ 45 ರನ್ ಬಾರಿಸಿ ಮತ್ತೊಮ್ಮೆ ಜಿಟಿ ಪರ ಮಿಂಚಿದರೆ ಸಾಯಿ ಸುದರ್ಶನ್ 19 ಎಸೆತಗಳಲ್ಲಿ 20 ರನ್‌ಗಳಿಸಲಷ್ಟೇ ಶಕ್ತವಾದರು. ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್‌ನಿಂದ ಕೂಡ 28 ರನ್ ಮಾತ್ರವೇ ಹರಿದು ಬಂತು.

ಸವಾಲಿನ ಗುರಿ ನೀಡಿದ ಹಾರ್ದಿಕ್ ಪಡೆ

ಆದರೆ ಡೇವಿಡ್ ಮಿಲ್ಲರ್ ಹಾಗೂ ಅಭಿನವ್ ಮನೋಹರ್ ಜೋಡಿಯ ಬ್ಯಾಟಿಂಗ್ ತಂಡದ ಮೊತ್ತ ಹೆಚ್ಚಲು ಕಾರಣವಾಯಿತು. ಕನ್ನಡಿಗ ಅಭಿನವ್ ಮನೋಹರ್ ಕೇವಲ 13 ಎಸೆತಗಳಲ್ಲಿ 27 ರನ್‌ಗಳಿಸುವ ಮೂಲಕ ಅಂತಿಮ ಹಂತದಲ್ಲಿ ರನ್ ವೇಗ ಹೆಚ್ಚಲು ಕಾರಣವಾದರು. ಡೇವಿಡ್ ಮಿಲ್ಲರ್ 30 ಎಸೆತಗಳಲ್ಲಿ 46 ರನ್‌ಗಳನ್ನು ಗಳಿಸಿ ಮಿಂಚಿದರು. ಹೀಗಾಗಿ ಗುಜರಾತ್ ಟೈಟನ್ಸ್ ತಮಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 177 ರನ್‌ಗಳಿಸಲು ಸಾಧ್ಯವಾಯಿತು.

ಆರ್‌ಆರ್‌ಗೆ ಆರಂಭಿಕ ಹಿನ್ನಡೆ

ಈ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ವಿಕೆಟನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ತಂಡದ ಮೊತ್ತ 4 ರನ್ ಆಗುವಷ್ಟರಲ್ಲಿ ಈ ಇಬ್ಬರು ಆಟಗಾರರು ಕೂಡ ಫೆವಿಲಿಯನ್ ಸೇರಿಕೊಂಡಿದ್ದರು. ನಂತರ ಜೊತೆಯಾದ ಸಂಜು ಸ್ಯಾಮ್ಸನ್ ಹಾಗೂ ದೇವದತ್ ಪಡಿಕ್ಕಲ್ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಪ್ರಯತ್ನ ನಡೆಸಿದರು. ದೇವದತ್ ಪಡಿಕ್ಕಲ್ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದರೆ ಸಂಜು ಸ್ಯಾಮ್ಸನ್ ತಮ್ಮ ಎಂದಿನ ಶೈಲಿಯ ಬ್ಯಾಟಿಂಗ್ ಮುಂದುವರಿಸಿದರು.

ಸಂಜು, ಹೇಟ್ಮೇಯರ್ ಅಬ್ಬರ

ದೇವದತ್ ಪಡಿಕ್ಕಲ್ 25 ಎಸೆತಗಳಲ್ಲಿ 26 ರನ್ ಬಾರಿಸಿ ವಿಕೆಟ್ ಕಳೆದುಕೊಂಡ ಬಳಿಕ ರಿಯಾನ್ ಪರಾಗ್ ಕೂಡ 5 ರನ್‌ಗಳಿಸಿ ಔಟಾದರು. ನಂತರ ಸಂಜು ಸ್ಯಾಮ್ಸನ್‌ಗೆ ಸಾಥ್ ನೀಡಿದ್ದು ಶಿಮ್ರಾನ್ ಹೇಟ್ಮೇಯರ್. ಈ ಜೋಡಿ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವಿನ ವಿಶ್ವಾಸ ಮೂಡಿಸಿದರು. ಕಳೆದ ಎರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ 32 ಎಸೆತಗಳಲ್ಲಿ 60 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ನಂತರ ಶಮ್ರಾನ್ ಹೇಟ್ಮೇಯರ್ ಸಂಪೂರ್ಣ ಜವಾಬ್ಧಾರಿ ವಹಿಸಿಕೊಂಡು ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಕೇವಲ 26 ಎಸೆತಗಳಲ್ಲಿ ಅಜೇಯ 56 ರನ್ ಬಾರಿಸಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದರು ಹೇಟ್ಮೆಯರ್.

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಮೋಹಿತ್ ಶರ್ಮಾ
ಬೆಂಚ್: ಜೋಶುವಾ ಲಿಟಲ್, ಜಯಂತ್ ಯಾದವ್, ನೂರ್ ಅಹ್ಮದ್, ದಾಸುನ್ ಶನಕ, ವಿಜಯ್ ಶಂಕರ್, ಶ್ರೀಕರ್ ಭರತ್, ಶಿವಂ ಮಾವಿ, ಪ್ರದೀಪ್ ಸಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಯಶ್ ದಯಾಳ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಆಡಮ್ ಝಂಪಾ, ಯುಜ್ವೇಂದ್ರ ಚಹಾಲ್
ಬೆಂಚ್: ದೇವದತ್ ಪಡಿಕ್ಕಲ್, ಡೊನಾವನ್ ಫೆರೇರಾ, ನವದೀಪ್ ಸೈನಿ, ಮುರುಗನ್ ಅಶ್ವಿನ್, ಜೋ ರೂಟ್, ಜೇಸನ್ ಹೋಲ್ಡರ್, ಕುಲದೀಪ್ ಸೇನ್, ಕೆಎಂ ಆಸಿಫ್, ಆಕಾಶ್ ವಸಿಷ್ಟ್, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಯಾದವ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್

Story first published: Sunday, April 16, 2023, 23:23 [IST]
Other articles published on Apr 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+