IPL 2023 GT vs RR: ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ 11
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಜಿಟಿ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಲಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಎರಡು ತಂಡಗಳು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಫಲಿತಾಂಶಗಳ ವಿಚಾರದಲ್ಲಿ ಎರಡು ತಂಡಗಳು ಕೂಡ ಸಮ ಸಾಧನೆ ಮಾಡಿದ್ದು ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದುಕೊಂಡಿದ್ದು ಒಂದು ಸೋಲು ಅನುಭವಿಸಿದೆ. ಎರಡು ತಂಡಗಳು ಕೂಡ ತಲಾ ಆರು ಅಂಕಗಳನ್ನು ಹೊಂದಿದ್ದು ರಾಜಸ್ಥಾನ್ ರಾಯಲ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಗುಜರಾತ್ ಟೈಟನ್ಸ್ ಮೂರನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ಜಿಟಿ ಮತ್ತೆ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications