Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RR: ಹಾರ್ದಿಕ್ ಪಾಂಡ್ಯ ಅಬ್ಬರ; 13.5 ಓವರ್‌ಗಳಲ್ಲಿಯೇ ಟಾರ್ಗೆಟ್ ಮುಟ್ಟಿ ಗೆದ್ದ ಗುಜರಾತ್

IPL 2023: Gujarat Titans beats Rajasthan Royals by chasing down 119 runs in 13.5 overs

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 48ನೇ ಪಂದ್ಯ ಇಂದು ( ಮೇ 5 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸಮ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದರು.

ಅದರಂತೆ ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡ ನಿರೀಕ್ಷಿಸಿದ ಪ್ರದರ್ಶನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ರಾಜಸ್ಥಾನ್ ರಾಯಲ್ಸ್ ತಂಡ 17.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 118 ರನ್ ಗಳಿಸಿ ಆಲ್ಔಟ್ ಆಗಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 119 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಕೇವಲ 13.5 ಓವರ್‌ಗಳಲ್ಲಿ ಬೆನ್ನತ್ತಿರುವ ಗುಜರಾತ್ ಟೈಟನ್ಸ್ 1 ವಿಕೆಟ್ ನಷ್ಟಕ್ಕೆ 119 ರನ್ ಕಲೆಹಾಕಿ 9 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಗುಜರಾತ್ ಟೈಟನ್ಸ್ ಪರ ಆರಂಭಿಕರಾಗಿ ವೃದ್ಧಿಮಾನ್ ಸಹಾ ಹಾಗೂ ಶುಭ್‌ಮನ್ ಗಿಲ್ ಕಣಕ್ಕಿಳಿದರು.

ಶುಭ್‌ಮನ್ ಗಿಲ್ 35 ಎಸೆತಗಳಲ್ಲಿ 36 ರನ್ ಗಳಿಸಿದರೆ, ವೃದ್ಧಿಮಾನ್ ಸಹಾ 34 ಎಸೆತಗಳಲ್ಲಿ ಅಜೇಯರಾಗಿ 41 ರನ್ ಗಳಿಸಿದರು. ಶುಭ್‌ಮನ್ ಗಿಲ್ ವಿಕೆಟ್ ಬಿದ್ದ ಬೆನ್ನಲ್ಲೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಬೌಂಡರಿ ಸಹಿತ ಅಜೇಯ 39 ರನ್ ಚಚ್ಚಿದರು. ರಾಜಸ್ಥಾನ್ ರಾಯಲ್ಸ್ ಪರ ಯುಜ್ವೇಂದ್ರ ಚಾಹಲ್ ಒಂದು ವಿಕೆಟ್ ಪಡೆದರೆ, ಊಳಿದ ಯಾರೂ ಸಹ ವಿಕೆಟ್ ಪಡೆಯಲಿಲ್ಲ.

ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಕಣಕ್ಕಿಳಿದರು. ಜೋಸ್ ಬಟ್ಲರ್ 8 ರನ್ ಗಳಿಸಿ ನಿರ್ಗಮಿಸಿದರೆ, ಯಶಸ್ವಿ ಜೈಸ್ವಾಲ್ 11 ಎಸೆತಗಳಲ್ಲಿ 14 ರನ್ ಗಳಿಸಿದ್ದಾಗ ರನ್ ಔಟ್ ಆದರು. ಹೀಗೆ ಕೆಟ್ಟ ಆರಂಭ ಪಡೆದುಕೊಂಡ ರಾಜಸ್ಥಾನ್ ರಾಯಲ್ಸ್ ಪರ ಉಳಿದಂತೆ ಸಂಜು ಸ್ಯಾಮ್ಸನ್ 20 ಎಸೆತಗಳಲ್ಲಿ 30 ರನ್, ದೇವದತ್ ಪಡಿಕ್ಕಲ್ 12 ರನ್, ರವಿಚಂದ್ರನ್ ಅಶ್ವಿನ್ 2 ರನ್, ರಿಯಾನ್ ಪರಾಗ್ 4 ರನ್, ಶಿಮ್ರಾನ್ ಹೆಟ್ಮಾಯೆರ್ 7 ರನ್, ಧ್ರುವ್ ಜುರೆಲ್ 9 ರನ್, ಟ್ರೆಂಟ್ ಬೌಲ್ಟ್ 15 ರನ್, ಆಡಂ ಜಂಪಾ 7 ರನ್ ಹಾಗೂ ಸಂದೀಪ್ ಶರ್ಮಾ ಅಜೇಯ 2 ರನ್ ಗಳಿಸಿದರು.

ಆಡುವ ಬಳಗಗಳು:

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್

Story first published: Friday, May 5, 2023, 22:46 [IST]
Other articles published on May 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+