For Quick Alerts
ALLOW NOTIFICATIONS  
For Daily Alerts
 

IPL 2023: ಮತ್ತೊಮ್ಮೆ ಫೈನಲ್‌ಗೇರಿದ ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ ತಂಡ ಮಾಡಿದ ಪ್ರಮುಖ ದಾಖಲೆಗಳು ಇವು!

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಭರ್ಜರಿ ಪ್ರದರ್ಶನ ನೀಡಿದ ಜಿಟಿ ತಂಡ ಎಲ್ಲಾ ವಿಭಾಗದಲ್ಲಿಯೂ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಭಾರೀ ಮೇಲುಗೈ ಸಾಧಿಸಿತು. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ 62 ರನ್‌ಗಳ ದೊಡ್ಡ ಅಂತರದಿಂದ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡದುಕೊಂಡಿದೆ.

ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ತಂಡ ಐತಿಹಾಸಿಕ ಸಾಧನೆ ಮಾಡಿದ್ದು ಸತತ ಎರಡನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಅದ್ಭುತ ಅಕಾಶವೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡಕ್ಕೆ ಇದೆ. ಶುಕ್ರವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನೊಂದಿಗೆ ಜಿಟಿ ತಂಡ ಕೆಲ ಪ್ರಮುಖ ದಾಖಲೆಯನ್ನು ಕೂಡ ಬರೆದುಕೊಂಡಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ..

IPL 2023: Gujarat Titans breaks multiple records as huge victory against Mumbai Indians in Qualifier 2 match

ಗುಜರಾತ್ ಟೈಟನ್ಸ್ ತಂಡ ಐಪಿಎಲ್‌ನಲ್ಲಿ ಆರಂಬಿಕ ಎರಡು ಆವೃತ್ತಿಗಳಲ್ಲಿ ಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡ ಎಂಬ ದಾಖಲೆಯನ್ನು ಬರೆದಿದೆ. ಈ ಸಾಧನೆಯನ್ನು ಯಾವ ತಂಡಕೂಡ ಈವರೆಗೆ ಮಾಡಲು ಸಾಧ್ಯವಾಗಿಲ್ಲ. 2022ರಲ್ಲಿ ಗುಜರಾತ್ ಟೈಟನ್ಸ್ ತಂಡ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಅಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಫೈನಲ್‌ನಲ್ಲಿ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ಈ ಬಾರಿಯ ಐಪಿಎಲ್‌ನಲ್ಲಿಯೂ ಫೈನಲ್‌ಗೆ ಪ್ರವೇಶಿಸಿದೆ. ಐಪಿಎಲ್‌ನಲ್ಲಿ 5 ಬಾರಿ ಚಾಂಪಿಯನ್ ಎನಿಸಿಕೊಂಡು ದಾಖಲೆ ಬರೆದಿರುವ ಮುಂಬೈ ಇಂಡಿಯನ್ಸ ತಂಡವಾಗಲಿ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕುಡ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಈ ಎರಡು ತಂಡಗಳು ಕೂಡ ತಮ್ಮ ಮೊದಲ ಎರಡು ಆವೃತ್ತಿಗಳಾದ 2008 ಹಾಗೂ 2009ರಲ್ಲಿ ಸತತವಾಗಿ ಫೈನಲ್‌ಗೆ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಕ್ವಾಲಿಫಯರ್ ಪಂದ್ಯ ಗೆದ್ದು ಈ ಒಂದೇ ದಾಖಲೆಯನ್ನು ಗುಜರಾತ್ ಟೈಟನ್ಸ್ ಮಾಡಿಲ್ಲ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಬಳಿಕ ಐಪಿಎಲ್‌ನಲ್ಲಿ ಸತತ ಎರಡು ಆವೃತ್ತಿಗಳಲ್ಲಿ ಫೈನಲ್‌ಗೆ ಪ್ರವೇಶಿಸಿದ ಮೂರನೇ ತಂಡ ಎಂಬ ದಾಖಲೆಯನ್ನು ಕೂಡ ಗುಜರಾತ್ ಟೈಟನ್ಸ ಬರೆದುಕೊಂಡಿದೆ. ಸಿಎಸ್‌ಕೆ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸತತ ಎರಡನೇ ಆವೃತ್ತಿಗಳಲ್ಲಿ ಫೈನಲ್‌ಗೆ ಪ್ರವೇಶಿಸಿದರೂ ಅದು ಆ ತಂಡಗಳ ಮೊದಲ ಎರಡು ಆವೃತ್ತಿಗಳು ಅಲ್ಲ.

ಗುಜರಾತ್ ಟೈಟನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಪ್ಲೇಆಫ್ ಪಂದ್ಯದಲ್ಲಿ ಮತ್ತೊಂದು ದೊಡ್ಡ ದಾಖಲೆಯನ್ನು ಬರೆದಿದೆ. ಪ್ಲೇಆಫ್‌ನಲ್ಲಿ ಅತ್ಯಂತ ಹೆಚ್ಚು ರನ್‌ ಬಾರಿಸಿದ ದಾಖಲೆ ಈಗ ಗುಜರಾತ್ ಟೈಟನ್ಸ್ ಪಾಲಾಗಿದೆ. 20 ಓವರ್‌ಗಳಲ್ಲಿ 233/3 ರನ್‌ಗಳಿಸುವ ಮೂಲಕ ಈ ದಾಖಲೆ ಬರೆದಿದೆ ಜಿಟಿ. ಇದಕ್ಕೂ ಮುನ್ನ 2014ರಲ್ಲಿ ಕಿಂಗ್ಸ್ XI ಪಂಜಾಬ್ ತಂಡ 226/6 ರನ್‌ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್

Story first published: Saturday, May 27, 2023, 13:36 [IST]
Other articles published on May 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+