Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಬ್ಯಾಟಿಂಗ್ ವೈಫಲ್ಯದ ನಡುವೆಯೂ ಗುಜರಾತ್ ಟೈಟನ್ಸ್‌ಗೆ ಸವಾಲಿನ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ಮಂಗಳವಾರ, ಏಪ್ರಿಲ್ 4ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ನ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವ ಗುಜರಾತ್ ಟೈಟನ್ಸ್ ತಂಡಕ್ಕೆ 163 ರನ್‌ಗಳ ಗುರಿ ನೀಡಿದೆ.

IPL 2023: Gujarat Titans Need 163 Runs To Win Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.4 ಓವರ್‌ಗಳಲ್ಲಿ ತಂಡದ ಮೊತ್ತ 29 ಆಗಿದ್ದಾಗ ಪೃಥ್ವಿ ಶಾ 7 ರನ್ ಗಳಿಸಿ ಔಟಾದರು, ನಂತರ ಬಂದ ಮಿಚೆಲ್ ಮಾರ್ಷ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.

8.2 ಓವರ್‌ಗಳಲ್ಲಿ ತಂಡದ ಮೊತ್ತ 67 ರನ್‌ಗಳಾಗಿದ್ದಾಗ, 32 ಎಸೆತಗಳಲ್ಲಿ 7 ಬೌಂಡರಿಗಳ ಸಮೇತ 37 ರನ್ ಗಳಿಸಿ ಆಡುತ್ತಿದ್ದ ಡೇವಿಡ್ ವಾರ್ನರ್ ಔಟಾಗಿ ಹೊರನಡೆದರು. ಇವರ ಬೆನ್ನಲ್ಲೇ ರಿಲೀ ರುಸ್ಸೌ ಕೂಡ ಎದುರಿಸಿ ಮೊದಲ ಎಸೆತದಲ್ಲಿಯೇ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಪೊರೆಲ್ 11 ಎಸೆತಗಳಲ್ಲಿ 2 ಸಿಕ್ಸರ್‌ಗಳ ನೆರವಿನಿಂದ 20 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ಅಕ್ಷರ್ ಪಟೇಲ್ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 36 ರನ್ ಬಾರಿಸಿದರು ಮತ್ತು ತಂಡದ ಮೊತ್ತ 150 ಗಡಿ ದಾಟುವಲ್ಲಿ ನೆರವಾದರು. ಅಮನ್ ಖಾನ್ 8 ರನ್, ಆನ್ರಿಚ್ ನಾರ್ಟ್ಜೆ 4 ರನ್ ಗಳಿಸಿದರು.

IPL 2023: Gujarat Titans Need 163 Runs To Win Against Delhi Capitals

ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಸ್ಪಿನ್ನರ್ ರಶೀದ್ ಖಾನ್ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 41 ರನ್ ನೀಡಿ 3 ವಿಕೆಟ್ ಪಡೆದರು. ಇನ್ನು ಅಲ್ಝಾರಿ ಜೋಸೆಫ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳ ಹೀನಾಯ ಸೋಲಿನ ಮೂಲಕ 2023ರ ಐಪಿಎಲ್ ಅಭಿಯಾನ ಆರಂಭಿಸಿತು. ಹೀಗಾಗಿ ಇಂದಿನ ಪಂದ್ಯದಲ್ಲಿ ತನ್ನ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಆತ್ಮವಿಶ್ವಾಸದಲ್ಲಿದ್ದು, ತನ್ನ ಗೆಲುವಿನ ನಾಗಾಲೋಟ ಮುಂದುವರೆಸಲು ಎದುರು ನೋಡುತ್ತಿದೆ. ಸೋತ ಮತ್ತು ಗೆದ್ದ ತಂಡಗಳ ನಡುವಿನ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ರಿಲೀ ರುಸ್ಸೌ, ಅಭಿ‍ಷೇಕ್ ಪೊರೆಲ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಚೇತನ್ ಸಕಾರಿಯಾ.

ಗುಜರಾತ್ ಟೈಟನ್ಸ್ ತಂಡ: ಶುಭ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಹಾರ್ದಿಕ್ ಪಾಂಡ್ಯ (ನಾಯಕ), ರಾಹುಲ್ ತೆವಾಟಿಯಾ, ರಶೀದ್ ಖಾನ್, ಜೋಶ್ವಾ ಲಿಟಲ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್.

Story first published: Tuesday, April 4, 2023, 21:25 [IST]
Other articles published on Apr 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+