For Quick Alerts
ALLOW NOTIFICATIONS  
For Daily Alerts
 

IPL 2023: ಪ್ಲೇಆಫ್‌ಗೆ ಗುಜರಾತ್ ಇನ್ನೊಂದು ಪಂದ್ಯ ಗೆದ್ದರೆ ಸಾಕು; ಉಳಿದ ತಂಡಗಳು ಎಷ್ಟು ಗೆಲ್ಲಬೇಕು?

IPL 2023: Gujarat Titans need just 1 win to qualify for playoff; What about other teams?

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 52 ಪಂದ್ಯಗಳು ನಿನ್ನೆಗೆ ( ಮೇ 7 ) ಮುಕ್ತಾಯಗೊಂಡವು. ನಿನ್ನೆ ಎರಡು ಪಂದ್ಯಗಳು ಜರುಗಿದ್ದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವನ್ನು ಕಂಡಿದೆ.

ಈ ಗೆಲುವುಗಳ ಮೂಲಕ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ ಪ್ರವೇಶಕ್ಕೆ ಹತ್ತಿರವಾಗಿದ್ದರೆ, ಪ್ಲೇಆಫ್ ಪ್ರವೇಶಿಸುವುದರಲ್ಲಿ ಅನುಮಾನ ಮೂಡಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವೂ ಸಹ ಬೃಹತ್ ಗೆಲುವಿನೊಂದಿಗೆ ಪ್ಲೇಆಫ್ ರೇಸ್‌ಗೆ ಇಳಿದಿದೆ. ಹೀಗೆ 52 ಪಂದ್ಯಗಳು ಮುಕ್ತಾಯಗೊಂಡರೂ ಯಾವ ತಂಡವೂ ಪ್ಲೇಆಫ್‌ಗೆ ಕ್ವಾಲಿಫೈ ಆಗದೇ ಹಾಗೂ ಟೂರ್ನಿಯಿಂದ ಹೊರಬೀಳದೇ ಎಲ್ಲಾ ತಂಡಗಳೂ ಸಹ ಪ್ಲೇಆಫ್ ರೇಸ್‌ನಲ್ಲಿ ಉಳಿದಕೊಂಡಿದ್ದು, ಇನ್ನುಳಿದ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಉಳಿದಿರುವ 3 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ.
2. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಪ್ಲೇಆಫ್ ಸ್ಥಾನ ಖಚಿತಪಡಿಸಿಕೊಳ್ಳಲು ಉಳಿದ 3 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ.

3. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಉಳಿದ 3 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
4. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ 3 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಹೆಚ್ಚಿನ ನೆಟ್ ರನ್ ರೇಟ್‌ನೊಂದಿಗೆ ಗೆಲ್ಲಬೇಕಿದೆ.

5. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ ಪ್ಲೇಆಫ್ ಪ್ರವೇಶಿಸಲಿದೆ.
6. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ ಪ್ಲೇಆಫ್ ಪ್ರವೇಶಿಸಲಿದೆ.

7. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ ಪ್ಲೇಆಫ್ ಪ್ರವೇಶಿಸಲಿದೆ.
8. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಅಲ್ಲಿಗೆ 16 ಅಂಕಗಳು ತಂಡಕ್ಕೆ ಸಿಗಲಿದ್ದು, ಪ್ಲೇಆಫ್ ಪ್ರವೇಶಕ್ಕೆ 16 ಅಂಕಗಳು ಅರ್ಹವಾಗುವ ಪ್ರಮೇಯ ಎದುರಾದರೆ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸಲಿದೆ.

9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಅಲ್ಲಿಗೆ 16 ಅಂಕಗಳು ತಂಡಕ್ಕೆ ಸಿಗಲಿದ್ದು, ಪ್ಲೇಆಫ್ ಪ್ರವೇಶಕ್ಕೆ 16 ಅಂಕಗಳು ಅರ್ಹವಾಗುವ ಪ್ರಮೇಯ ಎದುರಾದರೆ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸಲಿದೆ.
10. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಉಳಿದ 4 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಅಲ್ಲಿಗೆ 16 ಅಂಕಗಳು ತಂಡಕ್ಕೆ ಸಿಗಲಿದ್ದು, ಪ್ಲೇಆಫ್ ಪ್ರವೇಶಕ್ಕೆ 16 ಅಂಕಗಳು ಅರ್ಹವಾಗುವ ಪ್ರಮೇಯ ಎದುರಾದರೆ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸಲಿದೆ.

Story first published: Monday, May 8, 2023, 15:07 [IST]
Other articles published on May 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+