GT vs KKR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಇಂದು ( ಏಪ್ರಿಲ್ 29 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡು ಪಂದ್ಯಗಳು ಜರುಗಲಿವೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಇತ್ತಂಡಗಳ ನಡುವೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಡೆಯಲಿರುವ ಎರಡನೇ ಮುಖಾಮುಖಿ ಪಂದ್ಯವಾಗಿದೆ.
ಇನ್ನು ಮೊದಲ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡಕ್ಕೆ ಗೆಲ್ಲಲು 205 ರನ್‌ಗಳ ಗುರಿಯನ್ನು ನೀಡಿತ್ತು. ರಿಂಕು ಸಿಂಗ್ ಕೊನೆಯ ಐದು ಎಸೆತಗಳಲ್ಲಿ ಐದು ಸಿಕ್ಸರ್ ಚಚ್ಚಿದ ಪರಿಣಾಮ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ 3 ವಿಕೆಟ್‌ಗಳ ರೋಚಕ ಗೆಲುವನ್ನು ಕಂಡಿತ್ತು.
ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಗುಜರಾತ್ ಟೈಟನ್ಸ್ ತಂಡಕ್ಕೆ ಈ ಪಂದ್ಯ ಸರಿಯಾದ ವೇದಿಕೆ ಎಂದೇ ಹೇಳಲಾಗುತ್ತಿದ್ದು, ಯಾವ ಆಟಗಾರ ಉತ್ತಮ ಪ್ರದರ್ಶನ ನೀಡಬಲ್ಲ ಎಂಬ ಚರ್ಚೆಗಳೂ ಸಹ ನಡೆಯುತ್ತಿವೆ. ಡ್ರೀಮ್ ಟೀಮ್ ರಚಿಸುವತ್ತ ಆಸಕ್ತಿ ಇರುವ ಕ್ರಿಕೆಟ್ ಪ್ರೇಮಿಗಳು ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಊಹಿಸಿ ತಂಡಗಳನ್ನು ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಗೆಲ್ಲಬಹುದು ಎಂದು ಕ್ರಿಕೆಟ್ ಪರಿಣಿತರು ತಿಳಿಸಿದ್ದಾರೆ.
ಡ್ರೀಮ್ ಟೀಮ್ 1: ಕೀಪರ್ - ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಜೇಸನ್ ರಾಯ್ (ನಾಯಕ), ನಿತೀಶ್ ರಾಣಾ, ಶುಭಮನ್ ಗಿಲ್
ಆಲ್ ರೌಂಡರ್‌ಗಳು - ಸುನಿಲ್ ನರೈನ್, ಆಂಡ್ರೆ ರಸೆಲ್, ಹಾರ್ದಿಕ್ ಪಾಂಡ್ಯ, ಡೇವಿಡ್ ವೈಸ್
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್-ಖಾನ್ (ಉಪನಾಯಕ), ವರುಣ್ ಚಕ್ರವರ್ತಿ
ಡ್ರೀಮ್ ಟೀಮ್ 2: ಕೀಪರ್ - ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಜೇಸನ್ ರಾಯ್, ನಿತೀಶ್ ರಾಣಾ, ಶುಭಮನ್ ಗಿಲ್
ಆಲ್‌ರೌಂಡರ್‌ಗಳು - ಸುನಿಲ್ ನರೈನ್, ಆಂಡ್ರೆ ರಸೆಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್-ಖಾನ್ (ನಾಯಕ), ವರುಣ್ ಚಕ್ರವರ್ತಿ, ನೂರ್ ಅಹ್ಮದ್
ಸಂಭಾವ್ಯ ಆಡುವ ಬಳಗಗಳು:
ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ವೆಂಕಟೇಶ್ ಅಯ್ಯರ್, ನಾರಾಯಣ್ ಜಗದೀಸನ್(ವಿಕೆಟ್ ಕೀಪರ್), ಜೇಸನ್ ರಾಯ್, ಸುನಿಲ್ ನರೈನ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಡೇವಿಡ್ ವೈಸ್, ವೈಭವ್ ಅರೋರಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಸುಯಾಶ್ ಶರ್ಮಾ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ) ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications