
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 29 ) ಎರಡು ಪಂದ್ಯಗಳು ಜರುಗುತ್ತಿವೆ. ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು, ಈಗ ಆರಂಭವಾಗಿರುವ ಮಧ್ಯಾಹ್ನದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.
ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ಡಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು:
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಎನ್ ಜಗದೀಸನ್, ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್
ಕೊಲ್ಕತ್ತಾದಲ್ಲಿ ಮಳೆಯಾದ ಕಾರಣ ಪಿಚ್ ತೇವಗೊಂಡಿದ್ದು, ಪಂದ್ಯ ಆರಂಭಗೊಳ್ಳುವಲ್ಲಿ ತಡವಾಗಿದೆ. ಪಂದ್ಯದ ಲೈವ್ ಸ್ಕೋರ್: