Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs LSG: ಪಂದ್ಯದಲ್ಲಿ ನಿಮ್ಮ ಡ್ರೀಮ್‌ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Gujarat Titans vs Lucknow Super Giants dream team prediction

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51 ಹಾಗೂ 52 ನೇ ಪಂದ್ಯಗಳು ನಾಳೆ ( ಮೇ 7 ) ನಡೆಯಲಿವೆ. ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಲಿವೆ.

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಗುಜರಾತ್ ಟೈಟನ್ಸ್ ನಿನ್ನೆಯಷ್ಟೇ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದರೆ, ಅತ್ತ ಲಕ್ನೋ ಸೂಪರ್ ಜೈಂಟ್ಸ್ ಆಡಿದ ಕೊನೆಯ ಪಂದ್ಯ ಮಳೆಗೆ ಆಹುತಿಯಾದ ಕಾರಣ ತಂಡ ಒಂದು ಅಂಕ ಪಡೆದುಕೊಂಡಿದೆ.

ಇನ್ನು ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಮಾತ್ರ ಸೋತು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿದ್ದು, ಉಳಿದ ಪಂದ್ಯ ಡ್ರಾ ಆದ ಕಾರಣ 11 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಗುಜರಾತ್ ಟೈಟನ್ಸ್ ತಂಡ ಇನ್ನೆರಡು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶ ಮಾಡಲಿರುವ ಕಾರಣ ಈ ಪಂದ್ಯವನ್ನು ಗೆಲ್ಲುವತ್ತ ಕಣ್ಣಿಟ್ಟಿದೆ. ಅತ್ತ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಸಹ ಪ್ಲೇಆಫ್ ರೇಸ್‌ನಲ್ಲಿದ್ದು, ಈ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶದ ಆಸೆ ಜೀವಂತವಾಗಿರಿಸಿಕೊಳ್ಳುವ ಉದ್ದೇಶದಲ್ಲಿದೆ.

ಹೀಗೆ ಮಹತ್ವ ಪಡೆದುಕೊಂಡಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರ ಹೆಚ್ಚಾಗಿದ್ದು, ಫ್ಯಾಂಟಸಿ ಕ್ರಿಕೆಟ್ ಆಡುವ ಕ್ರಿಕೆಟ್ ಪ್ರೇಮಿಗಳು ಯಾವ ಆಟಗಾರರನ್ನು ಆರಿಸಿಕೊಂಡು ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಫಲಿತಾಂಶ ಬರಲಿದೆ ಎಂಬುದರಲ್ಲಿ ನಿರತರಾಗಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಒಳ್ಳೆಯ ಅಂಕಗಳನ್ನು ಗಳಿಸುವ ಸಾಧ್ಯತೆಗಳು ಹೆಚ್ಚಿವೆ.

ಡ್ರೀಮ್ ಟೀಮ್ ಪ್ರೆಡಿಕ್ಷನ್ 1:

ವಿಕೆಟ್ ಕೀಪರ್: ನಿಕೋಲಸ್ ಪೂರನ್

ಬ್ಯಾಟರ್ಸ್: ಡೇವಿಡ್ ಮಿಲ್ಲರ್, ಶುಬ್ಮನ್ ಗಿಲ್

ಆಲ್‌ರೌಂಡರ್‌ಗಳು: ಮಾರ್ಕಸ್ ಸ್ಟೊಯಿನಿಸ್ (ಉಪನಾಯಕ), ಹಾರ್ದಿಕ್ ಪಾಂಡ್ಯ (ನಾಯಕ), ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ

ಬೌಲರ್‌ಗಳು: ಮೊಹಮ್ಮದ್ ಶಮಿ, ರಶೀದ್ ಖಾನ್, ನವೀನ್ ಉಲ್ ಹಕ್, ರವಿ ಬಿಷ್ಣೋಯ್

ಡ್ರೀಮ್ ಟೀಮ್ ಪ್ರೆಡಿಕ್ಷನ್ 2 :

ವಿಕೆಟ್ ಕೀಪರ್: ನಿಕೋಲಸ್ ಪೂರನ್

ಬ್ಯಾಟರ್ಸ್: ಅಭಿನವ್ ಮನೋಹರ್, ಶುಭಮನ್ ಗಿಲ್ (ನಾಯಕ)

ಆಲ್‌ರೌಂಡರ್‌ಗಳು: ಮಾರ್ಕಸ್ ಸ್ಟೊಯಿನಿಸ್, ಹಾರ್ದಿಕ್ ಪಾಂಡ್ಯ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ (ಉಪನಾಯಕ)

ಬೌಲರ್‌ಗಳು: ಅಲ್ಜಾರಿ ಜೋಸೆಫ್, ರಶೀದ್ ಖಾನ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್

ಸಂಭಾವ್ಯ ಆಡುವ ಬಳಗಗಳು:

ಗುಜರಾತ್ ಟೈಟನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ನೂರ್ ಅಹ್ಮದ್, ಮೋಹಿತ್ ಶರ್ಮಾ ಮತ್ತು ಮೊಹಮ್ಮದ್ ಶಮಿ.

ಲಕ್ನೋ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಮನನ್ ವೋಹ್ರಾ, ಕರಣ್ ಶರ್ಮಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ರವಿ ಬಿಷ್ಣೋಯ್, ನವೀನ್ ಉಲ್ ಹಕ್, ಮೊಹ್ಸಿನ್ ಖಾನ್ ಮತ್ತು ಕೃಷ್ಣಪ್ಪ ಗೌತಮ್.

Story first published: Saturday, May 6, 2023, 22:17 [IST]
Other articles published on May 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+