For Quick Alerts
ALLOW NOTIFICATIONS  
For Daily Alerts
 

MI vs GT: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Gujarat Titans vs Mumbai Indians dream team prediction

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ನಾಳೆ ( ಮೇ 12 ) ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯವಾಗಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳೂ ಸಹ ತಲಾ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಗುಜರಾಟ್ ಟೈಟನ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.

ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ಆಡಿರುವ 11 ಪಂದ್ಯಗಳಲ್ಲಿ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಇನ್ನು ಗುಜರಾತ್ ಟೈಟನ್ಸ್ ತಂಡ ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಮಾಡಲಿದ್ದು, ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್ ಸುತ್ತಿಗೆ ಮತ್ತಷ್ಟು ಸನಿಹವಾಗಲಿದೆ. ಗುಜರಾತ್ ಟೈಟನ್ಸ್ ಪ್ಲೇಆಫ್ ಅರ್ಹತೆಗೆ ಇನ್ನೊಂದು ಪಂದ್ಯ ಗೆಲ್ಲಬೇಕಿದ್ದು, ಮುಂಬೈ ಇಂಡಿಯನ್ಸ್ ಇನ್ನೆರಡು ಪಂದ್ಯಗಳಲ್ಲಿ ಗೆಲ್ಲಬೇಕಿದೆ.

ಹೀಗೆ ಮಹತ್ವದ ಸೆಣಸಾಟ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಒಂದೆಡೆಯಾದರೆ ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯದಲ್ಲಿ ಯಾವ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂಬುದನ್ನು ಊಹಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ‌.

ಅಂತಹ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಅಂಕಗಳನ್ನು ಪಡೆಯಬಹುದು ಎನ್ನಬಹುದಾಗಿದೆ.

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ, ಇಶಾನ್ ಕಿಶನ್

ಬ್ಯಾಟ್ಸ್‌ಮನ್‌ಗಳು - ಸೂರ್ಯಕುಮಾರ್ ಯಾದವ್ (ಉಪ ನಾಯಕ), ಶುಭಮನ್ ಗಿಲ್ ( ನಾಯಕ ), ಡೇವಿಡ್ ಮಿಲ್ಲರ್, ನೆಹಾಲ್ ವಧೇರಾ

ಆಲ್‌ರೌಂಡರ್‌ಗಳು - ಹಾರ್ದಿಕ್ ಪಾಂಡ್ಯ, ಕ್ಯಾಮೆರಾನ್ ಗ್ರೀನ್

ಬೌಲರ್‌ಗಳು - ಪಿಯೂಷ್ ಚಾವ್ಲಾ, ಮೊಹಮ್ಮದ್ ಶಮಿ, ರಶೀದ್ ಖಾನ್

ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ, ಇಶಾನ್ ಕಿಶನ್

ಬ್ಯಾಟ್ಸ್‌ಮನ್‌ಗಳು - ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್, ಡೇವಿಡ್ ಮಿಲ್ಲರ್

ಆಲ್‌ರೌಂಡರ್‌ಗಳು - ಹಾರ್ದಿಕ್ ಪಾಂಡ್ಯ (ಸಿ), ಕ್ಯಾಮರೂನ್ ಗ್ರೀನ್ (ವಿಸಿ)

ಬೌಲರ್‌ಗಳು - ಪಿಯೂಷ್ ಚಾವ್ಲಾ, ಮೊಹಮ್ಮದ್ ಶಮಿ, ರಶೀದ್-ಖಾನ್, ಜೇಸನ್ ಬೆಹ್ರೆಂಡಾರ್ಫ್

ಸಂಭಾವ್ಯ ಆಡುವ ಬಳಗಗಳು:

ಮುಂಬೈ ಇಂಡಿಯನ್ಸ್: ಕ್ಯಾಮರೂನ್ ಗ್ರೀನ್, ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್

Story first published: Thursday, May 11, 2023, 20:17 [IST]
Other articles published on May 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+