
ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಮುಕ್ತಾಯದ ಹಂತಕ್ಕೆ ತಲುಪಿದ್ದು, ಎರಡನೇ ಕ್ವಾಲಿಫಯರ್ ಹಾಗೂ ಫೈನಲ್ ಪಂದ್ಯಗಳು ಬಾಕಿ ಉಳಿದುಕೊಂಡಿವೆ.
ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ತಲುಪಿದ್ದು, ಸೋತ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲು ಮತ್ತೊಂದು ಅವಕಾಶವನ್ನು ಹೊಂದಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದಿರುವ ತಂಡದ ವಿರುದ್ಧ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಸೆಣಸಾಡಲಿದೆ.
ಇನ್ನು ಮೊನ್ನೆ ( ಮೇ 24 ) ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಗೆದ್ದ ಮುಂಬೈ ಇಂಡಿಯನ್ಸ್ ಎರಡನೇ ಕ್ವಾಲಿಫಯರ್ ಪಂದ್ಯ ತಲುಪಿದೆ. ಅತ್ತ ಸೋತ ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 16.3 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ 81 ರನ್‌ಗಳ ಭರ್ಜರಿ ಗೆಲುವನ್ನು ಕಂಡಿತು.
ಹೀಗೆ ಲೀಗ್ ಹಂತದ ಆರಂಭದ ಪಂದ್ಯಗಳಲ್ಲಿ ಕಳಪೆ ಆಟವನ್ನಾಡಿ ಪ್ಲೇಆಫ್ ಪ್ರವೇಶಿಸುವುದರಲ್ಲಿ ಅನುಮಾನ ಮೂಡಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಸದ್ಯ ತನ್ನ ಆರನೇ ಐಪಿಎಲ್ ಟ್ರೋಫಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಎರಡನೆ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿ ಫೈನಲ್‌ಗೇರುವ ಯೋಜನೆಯನ್ನು ಹಾಕಿಕೊಂಡಿದೆ. ಹೀಗೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತನ್ನ ಯೋಜನೆಯಂತೆ ಗೆಲುವು ಸಾಧಿಸುತ್ತಾ ಅಥವಾ ಗುಜರಾತ್ ಟೈಟನ್ಸ್ ಗೆದ್ದು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಎಂಬ ಕುತೂಹಲ ಹೆಚ್ಚಾಗಿದೆ.
ಒಂದೆಡೆ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲವಿದ್ದರೆ ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್ ರಚಿಸುತ್ತಿದ್ದು, ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸುತ್ತಿದ್ದಾರೆ. ಅಂತಹ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ಡ್ರೀಮ್ ಟೀಮ್‌ಗಳನ್ನು ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ.
ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಇಶಾನ್ ಕಿಶನ್
ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್ (ನಾಯಕ), ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ
ಆಲ್ ರೌಂಡರ್‌ಗಳು - ಕ್ಯಾಮರೂನ್ ಗ್ರೀನ್ (ಉಪನಾಯಕ), ಹಾರ್ದಿಕ್ ಪಾಂಡ್ಯ
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್ ಖಾನ್, ಮೋಹಿತ್ ಶರ್ಮಾ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್
ಡ್ರೀಮ್ ಟೀಮ್ 2: ವಿಕೆಟ್ ಕೀಪರ್ಸ್ - ಇಶಾನ್ ಕಿಶನ್, ವೃದ್ಧಿಮಾನ್ ಸಹಾ
ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ರೋಹಿತ್ ಶರ್ಮಾ
ಆಲ್ ರೌಂಡರ್‌ಗಳು-ಕ್ಯಾಮರೂನ್ ಗ್ರೀನ್, ಹಾರ್ದಿಕ್ ಪಾಂಡ್ಯ
ಬೌಲರ್‌ಗಳು - ಮೊಹಮ್ಮದ್ ಶಮಿ, ರಶೀದ್ ಖಾನ್ (ಉಪನಾಯಕ), ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್