For Quick Alerts
ALLOW NOTIFICATIONS  
For Daily Alerts
 

GT vs RR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Gujarat Titans vs Rajasthan Royals dream team prediction

ಪ್ರಸ್ತುತ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಲೀಗ್ ಹಂತದ 48ನೇ ಪಂದ್ಯ ಇಂದು ( ಮೇ 5 ) ರಾಜಸ್ಥಾನದ ಜೈಪುರದ ಸಾವೈ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಟೂರ್ನಿಯಲ್ಲಿ ಎರಡೂ ತಂಡಗಳು ಹೆಚ್ಚು ಗೆಲುವುಗಳನ್ನು ಕಂಡಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿಯೇ ಮುಂದುವರಿಯಲಿದ್ದು, ರಾಜಸ್ಥಾನ್ ರಾಯಲ್ಸ್ ಗೆದ್ದರೆ ಅಗ್ರಸ್ಥಾನಕ್ಕೆ ಏರಿಕೆ ಕಾಣಲಿದೆ.

ಹೌದು, ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು, ಉಳಿದ 3 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇನ್ನು ಇತ್ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾಗ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವನ್ನು ಕಂಡಿತ್ತು. ಹೀಗೆ ಮೊದಲ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿರುವ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಈ ಪಂದ್ಯದಲ್ಲಿ ಗೆದ್ದು ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಗುಜರಾತ್ ಟೈಟನ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದು, ರಾಜಸ್ಥಾನ್ ರಾಯಲ್ಸ್ ಉಳಿದ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಅದೂ ಸಹ ಈ ಆವೃತ್ತಿಯ ಪಂದ್ಯದಲ್ಲಿ ಮಾತ್ರ. ಅಂದರೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳಲ್ಲಿ ಮುಖಾಮುಖಿಯಾಗಿ ಮೂರು ಪಂದ್ಯಗಳಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡ ಸೋತಿದೆ.

ಹೀಗೆ ಹೆಚ್ಚಾಗಿ ಸೋತಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ ಗೆಲ್ಲಲಿದೆಯಾ ಅಥವಾ ಕಳೆದ ಪಂದ್ಯದಲ್ಲಿ ಸೋತಿರುವ ಗುಜರಾತ್ ಟೈಟನ್ಸ್ ಗೆದ್ದು ಸೇಡು ತೀರಿಸಿಕೊಳ್ಳಲಿದೆಯಾ ಎಂಬ ಕುತೂಹಲ ಕೆರಳಿದ್ದು, ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದಾರೆ. ಅಂತಹ ಆಟಗಾರರು ಈ ಕೆಳಕಂಡಂತೆ ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಫ್ಯಾಂಟಸಿ ಅಂಕಗಳನ್ನು ಗಳಿಸಬಹುದಾಗಿದೆ.

ಡ್ರೀಮ್ ಟೀಮ್ 1 : ಕೀಪರ್ಸ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ವೃದ್ಧಿಮಾನ್ ಸಹಾ

ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್ (ನಾಯಕ)

ಆಲ್‌ರೌಂಡರ್‌ಗಳು- ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ

ಬೌಲರ್‌ಗಳು - ಟ್ರೆಂಟ್ ಬೌಲ್ಟ್, ಮೊಹಮ್ಮದ್ ಶಮಿ, ರಶೀದ್ ಖಾನ್, ಯುಜ್ವೇಂದ್ರ ಚಾಹಲ್

ಡ್ರೀಮ್ ಟೀಮ್ 2: ಕೀಪರ್ಸ್ - ಜೋಸ್ ಬಟ್ಲರ್ (ಉಪನಾಯಕ), ಸಂಜು ಸ್ಯಾಮ್ಸನ್, ವೃದ್ಧಿಮಾನ್ ಸಹಾ

ಬ್ಯಾಟ್ಸ್‌ಮನ್‌ಗಳು - ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್

ಆಲ್‌ರೌಂಡರ್‌ಗಳು- ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ

ಬೌಲರ್‌ಗಳು - ಟ್ರೆಂಟ್ ಬೌಲ್ಟ್, ಮೊಹಮ್ಮದ್ ಶಮಿ, ರಶೀದ್ ಖಾನ್, ಸಂದೀಪ್ ಶರ್ಮಾ

Story first published: Friday, May 5, 2023, 15:59 [IST]
Other articles published on May 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+