Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಅಮೋಘ ಗೆಲುವು: ಫೈನಲ್‌ಗೆ ಹಾರ್ದಿಕ್ ಪಡೆ

ಮುಂಬೈ ಇಂಡಿಯನ್ಸ ವಿರುದ್ಧ ನಡೆದ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಅಮೋಘ ಗೆಲುವು ಸಾಧಿಸಿದ್ದು ಸತತ ಎರಡನೇ ಬಾರಿಗೆ ಫೈನಲ್‌ಗೆ ಪ್ರವೇಶಿಸಿದೆ. ಈ ಮೂಲಕ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದೆ ಗುಜರಾತ್ ಟೈಟನ್ಸ್ ತಂಡ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೆಣೆಸಾಡಲು ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಗುಜರಾತ್ ಟೈಟನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಶುಬ್ಮನ್ ಗಿಲ್ ಹಾಗೂ ವೃಏದ್ಧಿಮಾನ್ ಸಾಹಾ ಜೋಡಿ 54 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ಅದಾದ ಬಳಿಕ ಸಾಯಿ ಸುದರ್ಶನ್ ಜೊತೆಗೆ ಶುಬ್ಮನ್ ಗಿಲ್ ಅಮೋಘ ಇನ್ನಿಂಗ್ಸ್ ಕಟ್ಟಿದರು. ಮುಂಬೈ ಇಂಡಿಯನ್ಸ್ ತಂಡದ ಎಲ್ಲಾ ಬೌಲರ್‌ಗಳನ್ನು ದಂಡಿಸಿದ ಶುಬ್ಮನ್ ಗಿಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನರೇಂದ್ರ ಮೋದಿ ಕ್ರೀಡಾಂಗಣದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಗಿಲ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

gujarat Titans

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ನೀಡಿದ ಅದ್ಭುತ ಜೊತೆಯಾಟ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಅವಕಾಶವನ್ನು ತೆರೆದಿಟ್ಟಿತು. ತಿಲಕ್ ವರ್ಮಾ ಕೇವಲ 14 ಎಸೆತಗಳಲ್ಲಿ 43 ರನ್‌ಗಳಿಸಿ ಅಬ್ಬರಿಸಿದರು. ಇನ್ನು ಸೂರ್ಯಕುಮಾರ್ ಯಾದವ್ 38 ಎಸೆತಗಳಲ್ಲಿ 61 ರನ್‌ಗಳಿಸಿ ಅಬ್ಬರಿಸಿದರು. ಆದರೆ ತಂಡವನ್ನು ಗೆಲುವಿನ ಸನಿಹಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇನ್ನು ಕ್ಯಾಮರೂನ್ ಗ್ರೀನ್ 20 ಎಸೆತಗಳಲ್ಲಿ 30 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಉಳಿದಂತೆ ಯಾವ ಆಟಗಾರರಿಂದಲೂ ಉತ್ತಮ ಪ್ರದರ್ಶನ ಬಾರಲಿಲ್ಲ. ಹೀಗಾಗಿ 171 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ತಂಡ ಆಲೌಟ್ ಆಯಿತು.

ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ಪರವಾಗಿ ಬ್ಯಾಟಿಂಗ್‌ನಲ್ಲಿ ಶುಬ್ಮನ್ ಗಿಲ್ ಅಬ್ಬರಿಸಿದರೆ ಬೌಲಿಂಗ್‌ನಲ್ಲಿ ಮೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ಗೆ ಆಘಾತ ನೀಡಿದ್ದಾರೆ. ಕೇವಲ 2.2 ಓವರ್‌ಗಳಲ್ಲಿ ಸೂರ್ಯಕುಮಾರ್ ಯಾದವ್ ಸೇರಿದಂತೆ 5 ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದಾರೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದ ಗುಜರಾತ್ ಟೈಟನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಶುಬ್ಮನ್ ಗಿಲ್ ಹಾಗೂ ವೃಏದ್ಧಿಮಾನ್ ಸಾಹಾ ಜೋಡಿ 54 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ಅದಾದ ಬಳಿಕ ಸಾಯಿ ಸುದರ್ಶನ್ ಜೊತೆಗೆ ಶುಬ್ಮನ್ ಗಿಲ್ ಅಮೋಘ ಇನ್ನಿಂಗ್ಸ್ ಕಟ್ಟಿದರು. ಮುಂಬೈ ಇಂಡಿಯನ್ಸ್ ತಂಡದ ಎಲ್ಲಾ ಬೌಲರ್‌ಗಳನ್ನು ದಂಡಿಸಿದ ಶುಬ್ಮನ್ ಗಿಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನರೇಂದ್ರ ಮೋದಿ ಕ್ರೀಡಾಂಗಣದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಗಿಲ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೂರನೇ ಶತಕ ಸಿಡಿಸಿ ಅಬ್ಬರಿಸಿದ್ದಾರೆ.

ಎರಡನೇ ವಿಕೆಟ್‌ಗೆ ಶುಬ್ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಜೋಡಿ ಬರೊಬ್ಬರಿ 138 ರನ್‌ಗಳನ್ನು ಕಲೆಹಾಕಿದರು. 60 ಎಸತಗಳನ್ನು ಎದುರಿಸಿದ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ ಭರ್ಜರಿ 129 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಈ ಅಮೋಘ ಇನ್ನಿಂಗ್ಸ್‌ನಲ್ಲಿ 10 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿ ಒಳಗೊಂಡಿತ್ತು. ಭರ್ಜರಿ 215ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ ಶುಬ್ಮನ್ ಗಿಲ್ ಎದುರಾಳಿ ಬೌಲರ್‌ಗಳಿಗೆ ಆಘಾತ ನೀಡಿದರು.

ಇನ್ನು ನಂತರ ಸಾಯಿ ಸುದರ್ಶನ್ 31 ಎಸೆತಗಳಲ್ಲಿ 43 ರನ್‌ಗಳಿಸಿ ರಿಟೈರ್ಡ್ ಔಟ್ ಆದರೆ ನಾಯಕ ಹಾರ್ದಿಕ್ ಪಾಂಡ್ಯ 13 ಎಸೆತಗಳಲ್ಲಿ 28 ರನ್‌ಗಳಿಸಿ ಅಬ್ಬರಿಸಿದರು. ರಶೀದ್ ಖಾನ್ 5 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ನಿಗದಿತ 20 ಓವರ್‌ಗಳಲ್ಲಿ ಗುಜರಾತ್ ಟೈಟನ್ಸ್ ತಂಡ 3 ವಿಕೆಟ್ ಕಳದುಕೊಂಡು 233 ರನ್‌ಗಳನ್ನು ಗಳಿಸಿದ್ದು ಬೃಹತ್ ಮೊತ್ತದ ಗುರಿ ನಿಗದಿಪಡಿಸಿದೆ.

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

Story first published: Friday, May 26, 2023, 23:59 [IST]
Other articles published on May 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+