Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs SRH: ಕ್ಲಾಸೆನ್ ಅಬ್ಬರದ ಶತಕ; ಆರ್‌ಸಿಬಿಗೆ ಪೈಪೋಟಿಯುತ ಗುರಿ ನೀಡಿದ ಸನ್‌ರೈಸರ್ಸ್

IPL 2023: Heinrich Klaasens century helps SRH to sets the target 187 runs to RCB

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65 ನೇ ಪಂದ್ಯ ಇಂದು ( ಮೇ 18 ) ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಹೆನ್ರಿಚ್ ಕ್ಲಾಸೆನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 187 ರನ್‌ಗಳ ಗುರಿಯನ್ನು ನೀಡಿದೆ.

ಸನ್ ರೈಸರ್ಸ್ ಹೈದರಾಬಾದ್ ಪರ ಆರಂಭಿಕ ಆಟಗಾರರಾಗಿ ಅಭಿಷೇಕ್ ಶರ್ಮಾ ಹಾಗೂ ರಾಹುಲ್ ತ್ರಿಪಾಠಿ ಕಣಕ್ಕಿಳಿದರು. ಅಭಿಷೇಕ್ ಶರ್ಮಾ 11 ರನ್ ಹಾಗೂ ರಾಹುಲ್ ತ್ರಿಪಾಠಿ 15 ರನ್ ಕಲೆಹಾಕಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಏಡನ್ ಮಾರ್ಕ್ರಮ್ 18 ರನ್ ದಾಖಲಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಚ್ ಕ್ಲಾಸೆನ್ 51 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 104 ರನ್ ಕಲೆಹಾಕಿದರು. ಇನ್ನುಳಿದಂತೆ ಗ್ಲೆನ್ ಫಿಲಿಪ್ಸ್ 5 ರನ್ ಹಾಗೂ ಹ್ಯಾರಿ ಬ್ರೂಕ್ 19 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೈಕೆಲ್ ಬ್ರೇಸ್‌ವೆಲ್ ಎರಡು ವಿಕೆಟ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಕಾರ್ತಿಕ್ ತ್ಯಾಗಿ, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ನಿತೀಶ್ ರೆಡ್ಡಿ

Story first published: Thursday, May 18, 2023, 21:18 [IST]
Other articles published on May 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+