Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಇಂದು ರಾಜಸ್ಥಾನ್ ವಿರುದ್ಧ ಸೋತರೂ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಬಹುದಾ?

IPL 2023: How can Royal Challengers Bangalore still qualify for playoffs?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 59 ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಇಂದು ( ಮೇ 14 ) ಭಾನುವಾರ 60 ಹಾಗೂ 61 ನೇ ಪಂದ್ಯಗಳು ಜರುಗಲಿವೆ.

ಮಧ್ಯಾಹ್ನ ನಡೆಯಲಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇತ್ತಂಡಗಳ ನಡುವಿನ ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಇತ್ತಂಡಗಳಿಗೂ ಸಹ ಅತಿಮುಖ್ಯದ್ದಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.

ಅತ್ತ್ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವುದರ ಜತೆಗೆ ಪ್ಲೇಆಫ್ ಹಾದಿಯನ್ನು ಸಹ ಸುಗಮ ಮಾಡಿಕೊಳ್ಳಲಿವೆ. ಹೀಗಾಗಿಯೇ ಎರಡೂ ತಂಡಗಳಿಗೂ ಸಹ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲುವುದರ ಮೂಲಕ ಹಿನ್ನಡೆ ಅನುಭವಿಸಿತ್ತು ಹಾಗೂ ಪ್ಲೇಆಫ್ ಪ್ರವೇಶದ ಹಾದಿಯನ್ನು ಕಠಿಣಪಡಿಸಿಕೊಂಡಿತ್ತು. ಹೀಗಾಗಿ ತಂಡ ತನ್ನ ಉಳಿದ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಲೇಬೇಕೆಂಬ ಅನಿವಾರ್ಯತೆ ಎದುರಾಗಿತ್ತು.

ಸದ್ಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು ನಂತರ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧ ಸೆಣಸಾಡಲಿದೆ. ಈ ಮೂರೂ ಪಂದ್ಯಗಳಲ್ಲಿಯೂ ಆರ್‌ಸಿಬಿ ಗೆಲ್ಲಬೇಕಿದೆ. ಒಂದುವೇಳೆ ಇಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋತರೆ ಆಗ ಪ್ಲೇಆಫ್ ಪ್ರವೇಶಿಸಲು ಅವಕಾಶಗಳು ಇರುವುದಿಲ್ಲವಾ ಎಂಬ ಪ್ರಶ್ನೆಗಳೂ ಸಹ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಇದಕ್ಕೆ ಉತ್ತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದಿನ ಪಂದ್ಯದಲ್ಲೇನಾದರೂ ಸೋತರೆ ಪ್ಲೇಆಫ್ ಆಸೆ ಅಲ್ಲಿಗೆ ಕೊನೆಗೊಳ್ಳಲಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿ ಸೋತು ಉಳಿದ ಎರಡು ಪಂದ್ಯಗಳನ್ನು ಗೆದ್ದರೂ 14 ಅಂಕಗಳನ್ನು ಗಳಿಸಲಿದ್ದು, ಪ್ಲೇಆಫ್ ಪ್ರವೇಶಿಸಲು ಬೇಕಾದ 16 ಅಂಕಗಳಿಲ್ಲದೇ ವಿಫಲಗೊಳ್ಳಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ತೀರಲೇಬೇಕಿದೆ.

ಈ ಮೂರೂ ಪಂದ್ಯಗಳಲ್ಲಿ ಗೆದ್ದು 16 ಅಂಕಗಳನ್ನು ಪಡೆದುಕೊಳ್ಳುವುದು ಮಾತ್ರವಲ್ಲದೇ ದೊಡ್ಡ ಅಂತರದಲ್ಲಿ ಗೆದ್ದು ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗಮನ ಹರಿಸಬೇಕಿದೆ. ಇತರೆ ಕೆಲ ತಂಡಗಳೂ ಸಹ ಇಷ್ಟೇ ಅಂಕ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಇಂತಹ ಸಮಯದಲ್ಲಿ ಒಳ್ಳೆಯ ನೆಟ್ ರನ್ ರೇಟ್ ಇದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲು ಅನುಕೂಲವಾಗಲಿದೆ.

Story first published: Sunday, May 14, 2023, 11:50 [IST]
Other articles published on May 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+