Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಈ ತಂಡ ಮಾತ್ರ ಫೈನಲ್‌ಗೆ ಬರಬಾರದು ಎಂದು ಭಯ ಹೊರಹಾಕಿದ ಚೆನ್ನೈನ ಡ್ವೇಯ್ನ್ ಬ್ರಾವೊ!

IPL 2023: I am scared of Mumbai Indians and I dont want them on final says Dwayne Bravo

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಭಾನುವಾರ ( ಮೇ 28 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ.

ಈಗಾಗಲೇ ಕ್ವಾಲಿಫಯರ್ ಒಂದನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದು, ಸೋತ ಗುಜರಾತ್ ಟೈಟನ್ಸ್ ಎರಡನೇ ಕ್ವಾಲಿಫಯರ್ ಪಂದ್ಯವನ್ನಾಡಲಿದೆ. ಮೊನ್ನೆ ( ಮೇ 24 ) ನಡೆದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದಲ್ಲಿ 81 ರನ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.

ಹೀಗಾಗಿ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡಕ್ಕೆ ಮುಂಬೈ ಇಂಡಿಯನ್ಸ್ ತಂಡ ಎದುರಾಳಿಯಾಗಲಿದ್ದು, ಈ ಪಂದ್ಯ ಇಂದು ( ಮೇ 26 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಫೈನಲ್ ತಲುಪಲಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇನ್ನು ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಸಹ ಬಲಿಷ್ಟವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಯಾವ ತಂಡ ಎದುರಾಳಿಯಾಗಲಿದೆ ಎಂಬ ಪ್ರಶ್ನೆ ಎದ್ದಿದೆ.

ಇನ್ನು ಕ್ರಿಕೆಟ್ ಅಭಿಮಾನಿ ಬಳಗದಲ್ಲಿ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಹೆಚ್ಚಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಡ್ವೇಯ್ನ್ ಬ್ರಾವೊ ಸಹ ಫೈನಲ್ ಪಂದ್ಯದಲ್ಲಿ ತಮ್ಮ ಎದುರಾಳಿಯಾಗಿ ಬರಲಿರುವ ತಂಡಗಳ ಬಗ್ಗೆ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಆ ತಂಡ ಮಾತ್ರ ಫೈನಲ್‌ಗೆ ಬರಬಾರದು ಎಂದು ಆಶಿಸಿದ್ದಾರೆ.

ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯ ಮುಕ್ತಾಯವಾಗಿ ತಾವು ಫೈನಲ್ ಪ್ರವೇಶಿಸಿದ ನಂತರ ಮಾತನಾಡಿದ ಡ್ವೇಯ್ನ್ ಬ್ರಾವೊ ಮುಂಬೈ ಇಂಡಿಯನ್ಸ್ ಎಂದರೆ ನನಗೆ ತುಂಬಾ ಭಯ, ಅವರು ಬರುವುದು ಬೇಡ ಎಂದು ನಗುತ್ತಾ ಹೇಳಿದ ಡ್ವೇಯ್ನ್ ಬ್ರಾವೊ ನಾವು ಆ ರೀತಿ ನೋಡುತ್ತಿಲ್ಲ, ಪ್ಲೇಆಫ್ ಪ್ರವೇಶಿಸಿರುವ ಉಳಿದ ಮೂರು ತಂಡಗಳೂ ಸಹ ಬಲಿಷ್ಟ ತಂಡಗಳೇ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಡ್ವೇಯ್ನ್ ಬ್ರಾವೊ ನಿಜವಾಗಿ ಹೇಳಬೇಕೆಂದರೆ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಬರಬಾರದು. ನನ್ನ ಗೆಳೆಯ ಕೀರನ್ ಪೊಲಾರ್ಡ್‌ಗೆ ಅದು ಗೊತ್ತಿದೆ. ಆದರೆ ಹಾಸ್ಯವನ್ನು ಪಕ್ಕಕ್ಕಿಟ್ಟರೆ ಉಳಿದ ಎಲ್ಲಾ ತಂಡಗಳಿಗೂ ಶುಭವಾಗಲಿ, ನಾವು ಯಾರೇ ಬಂದರೂ ಎದುರಿಸಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಲ್ಲಿಯವರೆಗೂ ಒಟ್ಟು ಎಷ್ಟು ಫೈನಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ ಹಾಗೂ ಈ ಪಂದ್ಯಗಳಲ್ಲಿ ಯಾವ ತಂಡ ಗೆದ್ದಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

* 2010ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಫೈನಲ್ ಪಂದ್ಯದಲ್ಲಿ ಸೋಲಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು.

* 2013ಐಪಿಎಲ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.

* 2015ರ ಐಪಿಎಲ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.

* 2019ರ ಐಪಿಎಲ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.

ಹೀಗೆ ಒಟ್ಟು ನಾಲ್ಕು ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ಫೈನಲ್ ಪಂದ್ಯದಲ್ಲಿ ಎದುರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಒಂದು ಬಾರಿ ಮಾತ್ರ ಗೆದ್ದಿದ್ದು, ಉಳಿದ ಮೂರು ಬಾರಿಯೂ ಸೋತಿದೆ.

Story first published: Friday, May 26, 2023, 7:42 [IST]
Other articles published on May 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+