IPL 2023: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳಿಂದ ಹೊರಗುಳಿಯಲಿ ಎಂದಿದ್ಯಾಕೆ ಗವಾಸ್ಕರ್!
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಕೇವಲ 2 ರನ್‌ಗ:ಇಗೆ ಔಟಾಗುವ ಮೂಲಕ ತಮ್ಮ ಅಸ್ಥಿರ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ರೋಹಿತ್ ಶರ್ಮಾಗೆ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ.
ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯಗಳಿಂದ ಕೆಲ ಕಾಲ ವಿಶ್ರಾಂತಿಯನ್ನು ಪಡೆಯಲು. ನಂತರ ಹೊಸ ಚೈತನ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಕಣಕ್ಕಿಳಿಯಲಿ ಎಂದಿದ್ದಾರೆ ಸುನಿಲ್ ಗವಾಸ್ಕರ್. ಐಪಿಎಲ್ ಫೈನಲ್ ಪಂದ್ಯದ ಒಂದು ವಾರಗಳ ಅಂತರದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿರುವ ಕಾರಣ ರೋಹಿತ್ ಶರ್ಮಾಗೆ ಈ ಸಲಹೆ ನೀಡಿದ್ದಾರೆ ಗವಾಸ್ಕರ್.

ಮಂಗಳವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಹೀನಾಯ ಸೋಲು ಕಂಡಿತು. 208 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಪರವಾಗಿ ಉತ್ತಮ ಜೊತೆಯಾಟ ಬಾರದ ಕಾರಣದಿಂದಾಗಿ ಈ ಪಂದ್ಯದಲ್ಲಿ ಸಂಪೂರ್ಣ ಹಿನ್ನಡೆ ಅನುಭವಿಸಿತು ಮುಂಬೈ ಇಂಡಿಯನ್ಸ್. ಹೀಗಾಗಿ ಈ ಪಂದ್ಯವನ್ನು ದೊಡ್ಡ ಅಂತರದಿಂದ ಕಳೆದುಕೊಂಡಿತು.
ಈ ಪಂದ್ಯದ ಬಳಿಕ ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಮಾತನಾಡಿದ ಸುನಿಲ್ ಗವಾಸ್ಕರ್ ರೋಹಿತ್ ಶರ್ಮಾ ಕೆಲ ಕಾಲ ವಿಶ್ರಾಂತಿ ಪಡೆಯಲಿ ಎಂದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ತಾಜಾತನದೊಂದಿಗೆ ಆರಂಭಿಸಲಿ ಎಂದಿದ್ದಾರೆ. ಮಂಗಳವಾರವಷ್ಟೇ ಬಿಸಿಸಿಐ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ 15 ಆಟಗಾರರ ಪಡೆಯನ್ನು ಪ್ರಕಟಿಸಿದೆ.
ಮುಂಬೈ ಇಂಡಿಯನ್ಸ್ ಪ್ಲೇಆಫ್‌ಗೆ ಹೋಗಲು ಪವಾಡ ನಡೆಯಬೇಕು: ಇನ್ನು ಇದೇ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ಈ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಪ್ರವೇಶಿಸುವ ವಿಚವಾರವಾಗಿಯೂ ಗವಾಸ್ಕರ್ ತಮ್ರಮ ಅನಿಸಿಕೆ ಹಂಚಿಕೊಂಡಿದ್ದಾರೆ. "ಪವಾಡ ನಡೆದರೆ ಮಾತ್ರವೇ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಪ್ಲೇಆಫ್‌ಗೆ ಪ್ರವೇಶಿಸಲು ಸಾಧ್ಯ. ಅಂತಿಮ ನಾಲ್ಕರ ಘಟ್ಟವನ್ನು ತಲುಪಬೇಕಾದರೆ ಅವರ ಆಟಗಾರರಿಂದ ಕೆಲ ಅತ್ಯಂತ ವಿಶೇಷ ಪ್ರದರ್ಶನಗಳ ಅಗತ್ಯವಿದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.
ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ ಮುಂಬೈ ಇಂಡಿಯನ್ಸ್: ಇನ್ನು ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿಯೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಈ ಬಾರಿಯ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ ಬಳಿಕ ಎಂಐ ಹ್ಯಾಟ್ರಿಕ್ ಗೆಲುವು ಸಾಧಿಸಿ ಗೆಲುವಿನ ಲಯಕ್ಕೆ ಮರಳಿತ್ತು. ಆದರೆ ಅದಾದ ಬಳಿಕ ಮತ್ತೆರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆಡಿರುವ 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications