For Quick Alerts
ALLOW NOTIFICATIONS  
For Daily Alerts
 

IPL 2023: ಆರ್‌ಸಿಬಿ ತಂಡಕ್ಕೆ ಗಾಯದ ಮೇಲೆ ಬರೆ; ಈ ಸ್ಟಾರ್‌ಗಳು ಕೆಲವು ಆರಂಭಿಕ ಪಂದ್ಯ ಆಡುವುದು ಡೌಟ್!

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತು ಆರಂಭಕ್ಕೆ ಒಂದೇ ದಿನ ಬಾಕಿ ಉಳಿದಿದ್ದು, ಶುಕ್ರವಾರ, ಮಾರ್ಚ್ 31ರಂದು ಬಹುನಿರೀಕ್ಷಿತ ಪಂದ್ಯಾವಳಿಗೆ ಅದ್ಧೂರಿ ಚಾಲನೆ ದೊರೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.

ಇದೇ ವೇಳೆ ಐಪಿಎಲ್ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಆಘಾತದ ಮೇಲೆ ಆಘಾತಗಳು ಎದುರಾಗುತ್ತಿವೆ. ಗಾಯಾಳು ಸ್ಟಾರ್ ಆಟಗಾರರು ಕೆಲವು ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಇದು ಚೊಚ್ಚಲ ಪ್ರಶಸ್ತಿ ಗೆಲ್ಲುವ ಆರ್‌ಸಿಬಿ ತಂಡದ ಆಸೆಗೆ ದೊಡ್ಡ ಹೊಡೆತ ಬೀಳಲಿದೆ.

IPL 2023: Josh Hazlewood, Glenn Maxwell And Wanindu Hasaranga To Miss RCBs Opening Matches


ಆರ್‌ಸಿಬಿ ತಂಡದ ಪ್ರಮುಖ ವೇಗದ ಬೌಲರ್ ಜೋಶ್ ಹೇಝಲ್‌ವುಡ್ ಅವರು 2023ರ ಐಪಿಎಲ್ ಪಂದ್ಯಾವಳಿಯ ಮೊದಲ ಎರಡು ವಾರಗಳನ್ನು ಕಳೆದುಕೊಳ್ಳಲಿದ್ದಾರೆ. Cricket.com.au ಪ್ರಕಾರ, ಆಸ್ಟ್ರೇಲಿಯಾದ ಬೌಲರ್ ಜೋಶ್ ಹ್ಯಾಝಲ್‌ವುಡ್ ಭಾರತದ ಟಿ20 ಪಂದ್ಯಾವಳಿಯ ಮಧ್ಯಂತರದ ಹಂತಗಳಲ್ಲಿ ಆಡುವ ಭರವಸೆ ನೀಡಿದ್ದಾರೆ.

ಜೋಶ್ ಹ್ಯಾಜಲ್‌ವುಡ್ ಪ್ರಸ್ತುತ ಹಿಮ್ಮಡಿ ಗಾಯಕ್ಕೆ ತುತ್ತಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿಯೇ ಜೋಶ್ ಹ್ಯಾಝಲ್‌ವುಡ್ ಅವರನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಹೊರಗಿಡಲಾಗಿತ್ತು. ವರದಿಯ ಪ್ರಕಾರ, ಹ್ಯಾಝಲ್‌ವುಡ್ ಐಪಿಎಲ್‌ನಲ್ಲಿ ಭಾಗವಹಿಸುವ ಮೊದಲು ಕ್ರಿಕೆಟ್ ಆಸ್ಟ್ರೇಲಿಯಾದ ವೈದ್ಯಕೀಯ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

IPL 2023: Josh Hazlewood, Glenn Maxwell And Wanindu Hasaranga To Miss RCBs Opening Matches

ಇನ್ನು ಆರ್‌ಸಿಬಿ ತಂಡದ ಮತ್ತೊಂದು ಮಹತ್ವದ ಬೆಳವಣಿಗೆ ಏನೆಂದರೆ, ಆಸೀಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಆರಂಭಿಕ ಪಂದ್ಯದಿಂದ ಹೊರಗುಳಿಯುವ ಮುನ್ಸೂಚನೆ ನೀಡಿದ್ದಾರೆ. ಅಪಘಾತದ ನಂತರ ಕಾಲು ನೋವಿನಿಂದಾಗಿ ಕೆಲವು ತಿಂಗಳಿನಿಂದ ಕ್ರಿಕೆಟ್ ಆಡಿರದ ಗ್ಲೆನ್ ಮ್ಯಾಕ್ಸ್‌ವೆಲ್, ಭಾರತದ ವಿರುದ್ಧದ ಮೊದಲ ಏಕದಿನ ಪಂದ್ಯವಾಡಿದ್ದರು. ಆದರೆ, ಅಂತಿಮ ಎರಡು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿದಿದ್ದರು.

ಹೀಗಾಗಿ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದು, ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡದ ಆರಂಭಿಕ ಪಂದ್ಯದಲ್ಲಿ ಆಡುವುದು ಬಹುತೇಕ ಅನುಮಾನವೆನಿಸಿದೆ.

ಕಳೆದ ನವೆಂಬರ್‌ನಲ್ಲಿ ನಡೆದ ಕಾರು ಅಪಘಾತದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಕಾಲು ಮುರಿದುಕೊಂಡಿದ್ದರು. ಆಸ್ಟ್ರೇಲಿಯಾ ತಂಡದ ರಾಷ್ಟ್ರೀಯ ಆಯ್ಕೆಗಾರ ಜಾರ್ಜ್ ಬೈಲಿ ಪ್ರಕಾರ, ಏಕದಿನ ಪಂದ್ಯಗಳಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಮರಳುವುದು 'ನಿರೀಕ್ಷೆಗಿಂತ ಹೆಚ್ಚು ಬೇಡಿಕೆಯಿದೆ' ಎಂದು ತಿಳಿಸಿದ್ದಾರೆ.

IPL 2023: Josh Hazlewood, Glenn Maxwell And Wanindu Hasaranga To Miss RCBs Opening Matches

ಜೋಶ್ ಹ್ಯಾಝಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್ ಮಾತ್ರವಲ್ಲದೇ, ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗಾ ಅವರು ಆರ್‌ಸಿಬಿ ತಂಡದ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಶ್ರೀಲಂಕಾ ತಂಡದ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯು ಏಪ್ರಿಲ್ 8ರಂದು ಮುಕ್ತಾಯಗೊಂಡ ನಂತರವೇ ವನಿಂದು ಹಸರಂಗಾ ಅವರು ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಇದಕ್ಕೂ ಮೊದಲು ಇಂಗ್ಲೆಂಡ್‌ ಆಲ್‌ರೌಂಡರ್ ವಿಲ್ ಜಾಕ್ಸ್ ಗಾಯಗೊಂಡ ಕಾರಣ ಆರ್‌ಸಿಬಿ ತಂಡ ಈ ವರ್ಷ ತನ್ನ ಮೊದಲ ಬದಲಾವಣೆ ಮಾಡಿತು. ವಿಲ್ ಜಾಕ್ಸ್ ಬದಲಿಗೆ ನ್ಯೂಜಿಲೆಂಡ್‌ನ ಮೈಕಲ್ ಬ್ರೇಸ್‌ವೆಲ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಕಳೆದ ಭಾನುವಾರ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ತಂಡವು ಶಿಬಿರವನ್ನು ಸೇರಿಕೊಂಡಿದ್ದು, ಅಭ್ಯಾಸ ಆರಂಭಿಸಿದೆ.

2019ರ ನಂತರ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ತವರು ಮೈದಾನವಾದ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುತ್ತಿದೆ. ಫಾಫ್ ಡು ಪ್ಲೆಸಿಸ್ ನಾಯಕತ್ವ ಆರ್‌ಸಿಬಿ ತಂಡ ಐಪಿಎಲ್ ಇತಿಹಾಸದಲ್ಲಿ ಪ್ರಶಸ್ತಿ ಗೆಲ್ಲದ ಕೆಲವೇ ಕೆಲವು ತಂಡಗಳಲ್ಲಿ ಒಂದಾಗಿದೆ. ಮೂರು ಬಾರಿಯ ಫೈನಲಿಸ್ಟ್ ಆರ್‌ಸಿಬಿ ತಂಡ ಐದು ಬಾರಿಯ ಚಾಂಪಿಯನ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದೊಂದಿಗೆ ತಮ್ಮ 2023ರ ಅಭಿಯಾನ ಆರಂಭಿಸಲಿದೆ.

Story first published: Thursday, March 30, 2023, 13:27 [IST]
Other articles published on Mar 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+