Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಈ ಬಾರಿ ಚಾಂಪಿಯನ್ ಯಾರಾಗ್ತಾರೆ ಎಂದು ತಿಳಿಸಿದ ಮ್ಯಾಥ್ಯೂ ಹೇಡನ್ ಹಾಗೂ ಪೀಟರ್ಸನ್

IPL 2023: Kevin Pietersen and Matthew Hayden predicts the champion of IPL 2023

ಇಂದು ( ಮೇ 28 ) ರಾತ್ರಿ 8 ಗಂಟೆಗೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬೀಳಲಿದೆ.

ಮಾರ್ಚ್ ತಿಂಗಳ ಕೊನೆಯ ದಿನದಂದು ಆರಂಭವಾದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿವೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯ ಇದಾಗಿದ್ದು, ಐಪಿಎಲ್‌ನಲ್ಲಿ ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಈ ಪೈಕಿ ಗುಜರಾತ್ ಟೈಟನ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ.

ಹೀಗೆ ಯುವ ನಾಯಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಅನುಭವಿ ನಾಯಕ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೆಚ್ಚು ಬಾರಿ ಸೋಲಿಸಿದ್ದು, ಕೊನೆಯದ್ದಾಗಿ ನಡೆದ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಮಾತ್ರ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟನ್ಸ್ ತಂಡವನ್ನು 15 ರನ್‌ಗಳ ಅಂತರದಿಂದ ಸೋಲಿಸಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿತು.

ಇನ್ನು ಈ ಪಂದ್ಯದಲ್ಲಿ ಸೋತ ಗುಜರಾತ್ ಟೈಟನ್ಸ್ ನಂತರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ 62 ರನ್‌ಗಳ ಭರ್ಜರಿ ಗೆಲುವನ್ನು ಕಂಡು ಕಮ್‌ಬ್ಯಾಕ್ ಮಾಡಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ. ಹೀಗೆ ಸಮಬಲವನ್ನು ಹೊಂದಿ ಬಲಿಷ್ಟ ತಂಡಗಳು ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಈ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ.

ಕೇವಲ ಕ್ರಿಕೆಟ್ ಪ್ರೇಮಿಗಳು ಮಾತ್ರವಲ್ಲದೇ ದಿಗ್ಗಜ ಕ್ರಿಕೆಟಿಗರು, ಹಾಲಿ ಕ್ರಿಕೆಟಿಗರೂ ಸಹ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸಿದ್ದಾರೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಇಂಗ್ಲೆಂಡ್‌ನ ದಿಗ್ಗಜ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಸಹ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾವ ತಂಡ ಗೆಲ್ಲಬಹುದು ಎಂಬುದನ್ನು ಊಹಿಸಿದ್ದಾರೆ.

ಮ್ಯಾಥ್ಯೂ ಹೇಡನ್ ಪ್ರಕಾರ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಲಿದೆಯಂತೆ. ಈ ರೀತಿ ತಿಳಿಸಿದ ಮ್ಯಾಥ್ಯೂ ಹೇಡನ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ.

ಇನ್ನು ಕೆವಿನ್ ಪೀಟರ್ಸನ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಚಾಂಪಿಯನ್ ಆಗಲಿದೆ ಎಂದಿದ್ದಾರೆ. ಗುಜರಾತ್ ಟೈಟನ್ಸ್ ತಂಡ ಸಮತೋಲನದಿಂದ ಕೂಡಿದ್ದು ಟ್ರೋಫಿ ಗೆಲ್ಲಲಿದೆ ಎಂದಿದ್ದಾರೆ.

Story first published: Sunday, May 28, 2023, 18:56 [IST]
Other articles published on May 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+