MS Dhoni ಇನ್ನೂ 10 ವರ್ಷ ಐಪಿಎಲ್ ಆಡಲಿ ಎಂದ ಕೆವಿನ್ ಪೀಟರ್ಸನ್: ಕಾರಣ ಇಲ್ಲದೆ!
ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಗೆ ದೇಶದೆಲ್ಲೆಡೆಯೂ ಅಭಿಮಾನಿಗಳಿಂದ ದೊರೆಯುತ್ತಿರುವ ಬೆಂಬಲ ಅಮೋಘ. ಯಾವುದೇ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದರೂ ಧೋನಿಗೆ ಬೆಂಬಲ ಭರ್ಜರಿಯಾಗಿಯೇ ದೊರೆಯುತ್ತಿದೆ. ಅದರಲ್ಲೂ ಸಿಎಸ್‌ಕೆ ತವರಿನಲ್ಲಿ ಅದರ ಪ್ರಭಾವ ಮತ್ತಷ್ಟು ಹೆಚ್ಚು. ಧೋನಿ ಬ್ಯಾಟಿಂಗ್‌ಗಾಗಿ ಮೈದಾನಕ್ಕೆ ಇಳಿಯುತ್ತಿದ್ದಾರೆ ಎಂದರೆ ಅಭಿಮಾನಿಗಳ ಕರತಾಡನ ಮುಗಿಲುಮುಟ್ಟುವುದು ಸಾಮಾನ್ಯ.
ಧೋನಿಗೆ ದೊರೆಯುತ್ತಿರುವ ಈ ಪ್ರಮಾಣದ ಬೆಂಬಲವನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರರ್ಸನ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಅನುಭವಿಸಿದ್ದಾರೆ. ಅದಾದ ಬಳಿಕ ಮಾತನಾಡಿರುವ ಪೀಟರ್ಸನ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದು ಈ ಪ್ರಮಾಣದಲ್ಲಿ ಬೆಂಬಲವನ್ನು ಪಡೆದ ಬಳಿಕ ಧೋನಿ ಇನ್ನೂ ಹತ್ತು ವರ್ಷಗಳ ಕಾಲ ಐಪಿಎಲ್ ಆಡಬೇಕು ಎಂಬ ಬಯಕೆಯಾಗುತ್ತಿದೆ ಎಂದಿದ್ದಾರೆ.

ಈ ಬಾರಿಯ ಐಪಿಎಲ್ ಧೋನಿ ಅವರ ಕೊನೆಯ ಐಪಿಎಲ್ ಟೂರ್ನಿ ಆಗುರಬಹುದು ಎಂಬ ಕಾರಣಕ್ಕೆ ಧೋನಿ ಅಭಿಮಾನಿಗಳು ಅವರ ಆಟವನ್ನು ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಅದರ್ಲಲೂ ಚೆನ್ನೈನಲ್ಲಿ ನಡೆಯುವ ಪ್ರತಿ ಪಂದ್ಯ ಕೂಡ ಹಬ್ಬದ ವಾತಾವರಣದಿಂದ ಕೂಡಿರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಧೋನಿ ಆಟವನ್ನು ನೋಡುವುದಕ್ಕಾಗಿಯೇ ಆಗಮಿಸುವುದು ಸಾಮಾನ್ಯವಾಗಿದೆ. ಅದೇ ರೀತಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿಯೂ ಧೋನಿ 19ನೇ ಓವರ್‌ನಲ್ಲಿ ಬ್ಯಾಟಿಂಗ್‌ಗೆ ಕಣಕ್ಕಿಳಿಯುವಾಗ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಈ ಬಗ್ಗೆ ಪೀಟರ್ಸನ್ ಪ್ರತಿಕ್ರಿಯಿಸಿದರು.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೆಕೆಆರ್‌ಗೆ 145 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಆರಂಭಿಕ ಆಘಾತವನ್ನು ಅನುಭವಿಸಿತು. 33 ರನ್‌ಗಳಿಗೆ 3 ವಿಕೆಟ್ ಕಳೆದುಕೊಳ್ಳುವ ಮೂಲಕ ಕೆಕೆಆರ್ ಸಂಕಷ್ಟಕ್ಕೆ ಸಿಲುಕಿತು. ಆದರೆ ಈ ಸಂದರ್ಭದಲ್ಲಿ ಕೆಕೆಆರ್‌ಗೆ ಮತ್ತೊಮ್ಮೆ ಆಸರೆಯಾಗಿದ್ದು ನಾಯಕ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್.
ಈ ಜೋಡಿ ಜವಾಬ್ಧಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ 99 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಹಂತದಲ್ಲಿ ರಿಂಕು ಸಿಂಗ್ ರನೌಟ್ ಆಗುವ ಮೂಲಕ ವಿಕೆಟ್ ಕಳೆದುಕೊಂಡರಾದರೂ ಅದು ಯಾವುದೇ ನಷ್ಟವನ್ನುಂಟು ಮಾಡಲಿಲ್ಲ. ಅಂತಿಮವಾಗಿ ಕೆಕೆಆರ್ 6 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ. ರಿಂಕು ಸಿಂಗ್ 54 ರನ್‌ಗಳಿಸಿದರೆ ನಾಯಕ ನಿತೀಶ್ ರಾಣಾ ಅಜೇಯ 57 ರನ್‌ಗಳಿಸಿ ಗೆಲುವಿನ ರೂವಾರಿ ಎನಿಸಿದರು.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಮಥೀಶ ಪತಿರಾನ, ನಿಶಾಂತ್ ಸಿಂಧು, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಸಿಸಂದಾ ಮಗಲಾ, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ
ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ
ಬೆಂಚ್: ವೆಂಕಟೇಶ್ ಅಯ್ಯರ್, ಅನುಕೂಲ್ ರಾಯ್, ಎನ್ ಜಗದೀಸನ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ಕುಲ್ವಂತ್ ಖೆಜ್ರೋಲಿಯಾ, ಟಿಮ್ ಸೌಥಿ, ಮಂದೀಪ್ ಸಿಂಗ್, ಜಾನ್ಸನ್ ಚಾರ್ಲ್ಸ್, ಡೇವಿಡ್ ವೈಸ್, ಆರ್ಯ ದೇಸಾಯಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications