IPL 2023: ಮುಕ್ತಾಯ ಸಮಾರಂಭದಲ್ಲಿ ಕಿಂಗ್ ಹಾಗೂ ಜೋನಿತಾ ಗಾಂಧಿ ಪರ್ಫಾಮೆನ್ಸ್

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದ ತಲುಪಿದೆ. ಇದೇ ಭಾನುವಾರ ( ಮೇ 28 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಟೂರ್ನಿಗೆ ತೆರೆ ಬೀಳಲಿದೆ.
ಇನ್ನು ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪಂದ್ಯದ ಪ್ರವೇಶವನ್ನು ಪಡೆದುಕೊಂಡಿದ್ದು, ಸೋತ ಗುಜರಾತ್ ಟೈಟನ್ಸ್ ಇದೀಗ ಎರಡನೇ ಕ್ವಾಲಿಫಯರ್ ಪಂದ್ಯವನ್ನು ಆಡುವ ಅವಕಾಶವನ್ನು ಗಿಟ್ಟಿಸಿಕೊಂಡಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 81 ರನ್‌ಗಳ ಅಂತರದಿಂದ ಸೋಲಿಸಿದ ಮುಂಬೈ ಇಂಡಿಯನ್ಸ್ ಇದೀಗ ಈ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದು, ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ತಲುಪಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಫೈನಲ್ ಪಂದ್ಯ ದೇಶದ ದೊಡ್ಡ ಕ್ರೀಡಾಂಗಣ ಎಂದೇ ಖ್ಯಾತಿಯನ್ನು ಪಡೆದಿರುವ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಈ ಭರ್ಜರಿ ಪಂದ್ಯ ಆರಂಭವಾಗುವ ಮುನ್ನ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ವರ್ಣರಂಜಿತ ತೆರೆಯನ್ನು ಎಳೆಯಲು ತೀರ್ಮಾನಿಸಲಾಗಿದೆ. ಹೀಗಾಗಿಯೇ ವಿಜೃಂಭಣೆಯ ಮುಕ್ತಾಯ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಐಪಿಎಲ್ ಮುಕ್ತಾಯ ಸಮಾರಂಭದಲ್ಲಿ ಹಾಡುಗಾರರಾದ ಕಿಂಗ್ ಹಾಗೂ ನ್ಯೂಕ್ಲಿಯಾ ಪ್ರದರ್ಶನ ನೀಡಲಿದ್ದಾರೆ. ಜತೆಗೆ ಡಿವೈನ್ ಹಾಗೂ ಜೋನಿತಾ ಗಾಂಧಿ ಸಹ ಲೈವ್ ಪ್ರದರ್ಶನ ನೀಡಲಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆದಾಗ ನಟಿಯರಾದ ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ಹಾಗೂ ಕಿಯಾರಾ ಅಡ್ವಾಣಿ ಮೈದಾನದಲ್ಲಿ ಪ್ರದರ್ಶನವನ್ನು ನೀಡಿದ್ದರು.
ಹೀಗೆ ಮನರಂಜನೆಯೊಂದಿಗೆ ಶುರುವಾಗಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಮನರಂಜನೆಯೊಂದಿಗೆ ವಿದಾಯ ಹೇಳಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications