IPL 2023: ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಕಿರಿಕ್: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಶಕೀಬ್, ಲಿಟ್ಟನ್ ದಾಸ್ ಅಲಭ್ಯ!

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆರಂಭಕ್ಕೆ ಕೆಲವೇ ದಿನಗಳಿರುವು ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ಶಕೀಬ್ ಅಲ್ ಹಸನ್ ಮತ್ತು ಲಿಟ್ಟನ್ ಕುಮಾರ್ ದಾಸ್ ಅವರು ಐಪಿಎಲ್‌ನಲ್ಲಿ ಆಡಲು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಇನ್ನೂ ಎನ್‌ಒಸಿ (ನಿರಾಪೇಕ್ಷಣ ಪ್ರಮಾಣಪತ್ರ) ನೀಡಿಲ್ಲ.
ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಅನವಶ್ಯಕ ಕಿರಿಕ್ ಮಾಡಿದ್ದರಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಆರಂಭದ ಕೆಲವು ಪಂದ್ಯಗಳಲ್ಲಿ ಬಾಂಗ್ಲಾದೇಶದ ಆಟಗಾರರ ಸೇವೆಯನ್ನು ಕಳೆದುಕೊಳ್ಳಲಿದೆ. ಶಕೀಬ್ ಅಲ್ ಹಸನ್ ಕೆಕೆಆರ್‌ಗೆ ಪ್ರಮುಖ ಆಟಗಾರನಾಗಿದ್ದಾರೆ. ತಂಡದ ಪ್ರಮುಖ ಆಲ್‌ರೌಂಡರ್ ಆಗಿದ್ದಾರೆ.
ಶಕೀಬ್ ಅಲ್ ಹಸನ್ ಭಾರತದ ಪರಿಸ್ಥಿತಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದು ಆರಂಭಿಕ ಕೆಲವು ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಶಕೀಬ್ ಅಲ್ ಹಸನ್‌ರನ್ನು ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ. ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್‌ನ ಹೊಸ ವರಸೆಯಿಂದಾಗಿ ಕೆಕೆಆರ್ ತಂಡದ ಲೆಕ್ಕಾಚಾರ ತಲೆಕೆಳಗಾಗಿದೆ.

ಕೆಕೆಆರ್ ತಂಡಕ್ಕೆ ದೊಡ್ಡ ಹಿನ್ನಡೆ
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗಿದೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಇತ್ತು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇನ್ನೂ ಎನ್‌ಒಸಿ ನೀಡದೇ ಇರುವುದರಿಂದ ಅವರು ಮೊದಲನೇ ಪಂದ್ಯದ ವೇಳೆಗೆ ಭಾರತಕ್ಕೆ ಬರುವುದು ಅನುಮಾನವಾಗಿದೆ.
ಬಾಂಗ್ಲಾದೇಶದ ಆರಂಭಿಕ ಆಟಗಾರ ಲಿಟ್ಟನ್ ದಾಸ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಗಮನ ಸೆಳೆದ ಆಟಗಾರ, ಐಪಿಎಲ್ ಮಿನಿ ಹರಾಜಿನಲ್ಲಿ ಇಬ್ಬರೂ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಆರನ್ ಫಿಂಚ್ ಅವರನ್ನು ಕೈಬಿಟ್ಟ ಬಳಿಕ, ಆರಂಭಿಕ ಆಟಗಾರನ ಸ್ಥಾನಕ್ಕೆ ಲಿಟ್ಟನ್ ದಾಸ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಕೆಕೆಆರ್ ತಂಡಕ್ಕೆ ನಾಯಕ ಯಾರು?
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ನಾಯಕನ ಆಯ್ಕೆಯೇ ತಲೆನೋವಾಗಿದೆ. ಶ್ರೇಯಸ್ ಅಯ್ಯರ್ ಆರಂಭದ ಕೆಲವು ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿರುವುದರಿಂದ ಆ ಪಂದ್ಯಗಳಲ್ಲಿ ಯಾರು ತಂಡದ ನಾಯಕತ್ವ ವಹಿಸಿಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಎದುರಾಗಿದೆ.
ಶ್ರೇಯಸ್ ಅಯ್ಯರ್ ಜೊತೆಗೆ ಶಕೀಬ್ ಅಲ್ ಹಸನ್ ಕೂಡ ಅಲಭ್ಯರಾಗಿರುವುದು ತಂಡದ ತಲೆನೋವನ್ನು ಹೆಚ್ಚಿಸಿದೆ. ಟಿಮ್ ಸೌಥಿ ಅಥವಾ ಆಂಡ್ರೆ ರಸೆಲ್ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ. ಸುನಿಲ್ ನರೈನ್ ಇದ್ದರೂ ಸದ್ಯ ಉತ್ತಮ ಪ್ರದರ್ಶನ ನೀಡದ ಕಾರಣ ಅವರನ್ನು ಪರಿಗಣಿಸುವ ಸಾಧ್ಯತೆ ಕಡಿಮೆ ಇದೆ.
ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ನಾ ಸೌಥಿ, ಹರ್ಷಿತ್ ಸಿಂಗ್ ರಾಣಾ, ಆರ್ ಜಕುಲ್ ರೋವರ್ತಿ, ಆರ್ ಜಕುಲ್ ರೋವರ್ತಿ, ಆರ್. , ವೈಭವ್ ಅರೋರಾ, ಸುಯಾಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications