For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2023: ಕೆಕೆಆರ್‌ಗೆ ಸಿಹಿಸುದ್ದಿ; ಎನ್‌ಸಿಎ ಸೇರಿಕೊಂಡ ಶ್ರೇಯಸ್ ಐಯ್ಯರ್

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರ ಹಾಗೂ ನಾಯಕನಾಗಿದ್ದ ಶ್ರೇಯಸ್ ಐಯ್ಯರ್ ಗಾಯಗೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಐಯ್ಯರ್ ಈ ಬಾರಿಯ ಐಪಿಎಲ್‌ನಲ್ಲಿ ಆಡುವ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ. ಆದರೆ ಈ ಸಣದರ್ಭದಲ್ಲಿ ಶ್ರೇಯಸ್ ಐಯ್ಯರ್ ವಿಚಾರವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ.

ಶ್ರೇಯಸ್ ಐಯ್ಯರ್ ಐಯ್ಯರ್ ಸದ್ಯ ಎನ್‌ಸಿಎಗೆ ಸೇರ್ಪಡೆಯಾಗಿದ್ದು ಚೇತರಿಕೆಯ ಹಾದಿಯಲ್ಲಿರುವುದು ಸ್ಪಷ್ಟವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡುವ ಗುರಿಯಿಟ್ಟುಕೊಂಡಿರುವ ಶ್ರೇಯಸ್ ಐಯ್ಯರ್ ಐಪಿಎಲ್‌ನಲ್ಲಿಯೂ ಆಡುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಸುದ್ದು ಕೊಲ್ಕತ್ತಾ ನೈಟ್ ರೈಡರ್ಸ್ ಪಾಳಯದಲ್ಲಿ ಮತ್ತಷ್ಟಯ ಹುರುಪು ಮೂಡಿಸುವಂತೆ ಮಾಡಿದೆ.

IPL 2023: KKR star Shreyas Iyer joins NCA likely to play in IPL

ಅಂದಹಾಗೆ ಶ್ರೇಯಸ್ ಐಯ್ಯರ್ ಬೆನ್ನು ನೋವಿನ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಲಾಗುತ್ತು. ಆದರೆ ಶಸ್ತ್ರಚಿಕಿತ್ಸೆಗೆ ಒಳಗಾದಲ್ಲಿ ಐಯ್ಯರ್ ಕನಿಷ್ಠ 6 ತಿಂಗಳ ವಿಶ್ರಾಂತಿ ಪಡೆಯುವ ಅಗತ್ಯವಿದ್ದ ಕಾರಣ ಅದಕ್ಕೆ ನಿರಾಕರಿಸಿದ್ದರು. ಹಾಗಾದಲ್ಲಿ ಐಯ್ಯರ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಜೊತೆಗೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆಯೂ ಅನುಮಾನವುಂಟಾಗಿತ್ತು. ಆದರೆ ಶ್ರೇಯಸ್ ಐಯ್ಯರ್ ಈ ವರವಷದಲ್ಲಿ ನಡೆಯಲಿರು ಈ ಎರಡು ವರ್ಷತ್ವದ ಟೂರ್ನಿಯನ್ನು ಕೂಡ ತಪ್ಪಿಸಿಕೊಳ್ಳದಿರಲು ಬಯಸಿದ್ದಾರೆ.

ಇನ್ನು ಶ್ರೇಯಸ್ ಐಯ್ಯರ್ ಅಲಭ್ಯತೆಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ನೂತನ ನಾಯಕನನ್ನು ನೇಮಿಸಲಾಗಿದೆ. ನಿರೀಶ್ ರಾಣಾ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ನೂತನ ನಾಯಕನಾಗಿ ನೇಮಕಗೊಂಡಿದ್ದು ಈ ಬಾರಿಯ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಹಲವು ಅನುಭವಿ ಆಟಗಾರರಿದ್ದರೂ ರಾಣಾ ಮೇಲೆ ಭರವಸೆಯೊಟ್ಟು ಕೆಕೆಆರ್ ಫ್ರಾಂಚೈಸಿ ನಾಯಕತ್ವದ ಹೊಣೆಗಾರಿಕೆ ನೀಡಿದೆ.

ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡ ಬಳಿಕ ನಿತೀಶ್ ರಾಣಾ ಪ್ರತಿಕ್ರಿಯೆ ನೀಡಿದ್ದು ನಾಯಕನಾಗಿ ಯಶಸ್ಸು ಸಾಧಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. "ನಾಯಕತ್ವದ ಹೊಣೆಗಾರಿಗೆ ನನಗೆ ಹೊಸತಲ್ಲ. ಕಳೆದ ಎರಡ್ಮೂರು ವರ್ಷಗಳಿಂದ ನಾನು ನಾಯಕತ್ವದ ಗುಂಪಿನಲ್ಲಿದ್ದೇನೆ. ಈ ಬಾರಿ ನನಗೆ ನಾಯಕತ್ವದ ಹಣೆಪಟ್ಟಿ ದೊರೆತಿದೆ. ಕಳೆದ ಎರಡ್ಮೂರು ವರ್ಷಗಳಿಂದ ನಾಯಕತ್ವದ ಗುಂಪಿನಲ್ಲಿರುವ ಕಾರಣ ನಾಯಕತ್ವದ ಜವಾಬ್ಧಾರಿ ಬಂದಿದೆ ಎಂಬ ಕಾರಣಕ್ಕೆ ಹೆಚ್ಚಿನ ಒತ್ತಡವನ್ನು ಹೇರಿಕೊಳ್ಳುವುದಿಲ್ಲ. ಅದು ನನ್ನ ಆಟಕ್ಕೂ ಒಳ್ಳೆಯದಲ್ಲ. ಇದರಲ್ಲಿ ಹೊಸತೇನೂ ಇದೆ ಎಂದು ನನಗೆ ಅನಿಸುತ್ತಿಲ್ಲ. ಜವಾಬ್ಧಾರಿ ವಹಿಸಿಕೊಳ್ಳುವುದೆಂದರೆ ನನಗೆ ಇಷ್ಟ" ಎಂದಿದ್ದಾರೆ ನಿತೀಶ್ ರಾಣಾ.

ಇನ್ನು 29ರ ಹರೆಯದ ನಿತೀಶ್ ರಾಣಾ, ದೇಶೀಯ ಕ್ರಿಕೆಟ್‌ನಲ್ಲಿ ನಾಯಕತ್ವದ ಅನುಭವ ಹೊಂದಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸಿದ್ದಾರೆ. ಇನ್ನು ಐಪಿಎಲ್‌ನಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡದ ಪರವಾಗಿ 74 ಪಂದ್ಯಗಳನ್ನು ಆಡಿದ್ದು 135.61ರ ಸ್ಟ್ರೈಕ್‌ರೇಟ್‌ನಲ್ಲಿ 1744 ರನ್‌ಗಳನ್ನು ಗಳಿಸಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್(ಗಾಯದಿಂದ ಅಲಭ್ಯ), ನಿತೀಶ್ ರಾಣಾ(ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ರಿಂಕು ಸಿಂಗ್, ನಾರಾಯಣ್ ಜಗದೀಸನ್, ವೈಭವ್ ಅರೋರಾ, ಸುಯಾಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್.

Story first published: Thursday, March 30, 2023, 22:23 [IST]
Other articles published on Mar 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+