Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs CSK: ರಹಾನೆ- ದುಬೆ ರನ್ ಮಳೆ: ಐಪಿಎಲ್ ಇತಿಹಾಸದ 3ನೇ ಹೈಯೆಸ್ಟ್ ರನ್ ಬಾರಿಸಿದ ಸಿಎಸ್‌ಕೆ

ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸ್ಪೋಟಕ ಪ್ರದರ್ಶನ ನೀಡಿದೆ. ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಅವರ ಅಮೋಘ ಪ್ರದರ್ಶನದ ಕಾರಣದಿಂದಾಗಿ ಸಿಎಸ್‌ಕೆ ಈ ಪಂದ್ಯದಲ್ಲಿ ದಾಖಲೆಯ ಮೊತ್ತ ಪೇರಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಬರೊಬ್ಬರಿ 4 ವಿಕೆಟ್ ಕಳೆದುಕೊಂಡು ಬರೊಬ್ಬರಿ 235 ರನ್‌ಗಳನ್ನು ಗಳಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಗ್ರ ಕ್ರಮಾಂಕದ ಎಲ್ಲಾ ಆಟಗಾರರು ಕೂಡ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲರ್‌ಗಳನ್ನು ಅಟ್ಟಾಡಿಸಿ ಬಾರಿಸಿದ್ದಾರೆ. ಈ ಜೋಡಿ ಕೇವಲ 32 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡುವ ಮೂಲಕ ಸಿಎಸ್‌ಕೆ ತಂಡ ಬೃಹತ್ ಮೊತ್ತವನ್ನು ಗಳಿಸಲು ಕಾರಣವಾದರು.

IPL 2023, KKR vs CSK; Kolkata Knight Riders need 236 runs to win against CSK

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಬರೊಬ್ಬರಿ 4 ವಿಕೆಟ್ ಕಳೆದುಕೊಂಡು ಬರೊಬ್ಬರಿ 235 ರನ್‌ಗಳನ್ನು ಗಳಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಗ್ರ ಕ್ರಮಾಂಕದ ಎಲ್ಲಾ ಆಟಗಾರರು ಕೂಡ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲರ್‌ಗಳನ್ನು ಅಟ್ಟಾಡಿಸಿ ಬಾರಿಸಿದ್ದಾರೆ. ಈ ಜೋಡಿ ಕೇವಲ 32 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡುವ ಮೂಲಕ ಸಿಎಸ್‌ಕೆ ತಂಡ ಬೃಹತ್ ಮೊತ್ತವನ್ನು ಗಳಿಸಲು ಕಾರಣವಾದರು.

ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಜೋಡಿ ಮೊದಲ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ಔಟಾದರು. ನಂತರ ಅರ್ಧ ಶಥಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲಿ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಅಜಿಂಕ್ಯಾ ರಹಾನೆ ಕೊನೆಯ ವರೆಗೂ ವಿಕೆಟ್ ಕಳೆದುಕೊಳ್ಳದೆ ಅಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ ಬಾರಿಸಿ ಅಜೇಯವಾಗುಳಿದರು. ಇನ್ನು ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳನ್ನು ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ಈ ಪಂದ್ಯದಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿದೆ.

ಕೊಲ್ಕತ್ತಾ ನಟ್ ರೈಡರ್ಸ್: ಎನ್ ಜಗದೀಸನ್ (ವಿಕೆಟ್ ಕೀಪರ್), ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಸುಯಶ್ ಶರ್ಮಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಬೆಂಚ್: ವೆಂಕಟೇಶ್ ಅಯ್ಯರ್, ಮನ್ದೀಪ್ ಸಿಂಗ್, ಅನುಕುಲ್ ರಾಯ್, ವೈಭವ್ ಅರೋರಾ, ಲಿಟ್ಟನ್ ದಾಸ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್,
ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ಹರ್ಷಿತ್ ರಾಣಾ, ಆರ್ಯ ದೇಸಾಯಿ

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಭಗತ್ ವರ್ಮಾ, ನಿಶಾಂತ್ ಸಿಂಧು

Story first published: Sunday, April 23, 2023, 21:38 [IST]
Other articles published on Apr 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+